ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಿಜೆಪಿ ಸಂಸದ ಗೌತಮ್ ಗಂಭೀರ್ ರಾಜಕೀಯಕ್ಕೆ ಗುಡ್ ಬೈ ; ಜೆಪಿ ನಡ್ಡಾಗೆ ಮನವಿ...!

Twitter
Facebook
LinkedIn
WhatsApp
ಬಿಜೆಪಿ ಸಂಸದ ಗೌತಮ್ ಗಂಭೀರ್ ರಾಜಕೀಯಕ್ಕೆ ಗುಡ್ ಬೈ ; ಜೆಪಿ ನಡ್ಡಾಗೆ ಮನವಿ...!

 ಪೂರ್ವ ದೆಹಲಿಯ ಬಿಜೆಪಿ ಸಂಸದ (BJP MP)ಗೌತಮ್ ಗಂಭೀರ್ (Gautam Gambhir) ಸಕ್ರಿಯ ರಾಜಕೀಯಕ್ಕೆ (Politics) ಗುಡ್ ಬೈ ಹೇಳುವುದಾಗಿ ಶನಿವಾರ ಘೋಷಣೆ ಮಾಡಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸಂದೇಶ ಪ್ರಕಟಿಸಿರುವ ಅವರು, ರಾಜಕೀಯ ಕರ್ತವ್ಯಗಳಿಂದ ಬಿಡುಗಡೆ ಮಾಡುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಬಳಿ ಮನವಿ ಮಾಡಿರುವುದಾಗಿ ತಿಳಿಸಿದ್ದಾರೆ. 2019 ರ ಲೋಕಸಭಾ ಚುನಾವಣೆ ಸ್ಪರ್ಧಿಸುವ ಮೂಲಕ ಸಕ್ರಿಯ ರಾಜಕಾರಣಕ್ಕೆ ಧುಮುಕಿದ್ದ ಅವರು, ಗೆಲುವು ಸಾಧಿಸಿ ಸಂಸತ್ ಪ್ರವೇಶಿಸಿದ್ದರು.

ರಾಜಕೀಯ ಚಟುವಟಿಕೆಗಳಿಂದ ಮುಕ್ತಿ ನೀಡುವಂತೆ ಜೆಪಿ ನಡ್ಡಾ ಅವರಿಗೆ ಮನವಿ ಮಾಡುತ್ತಿದ್ದೇನೆ. ಇದರಿಂದಾಗಿ ನಾನು ಮುಂಬರುವ ದಿನಗಳಲ್ಲಿ ಕ್ರಿಕೆಟ್ ಬಗ್ಗೆ ಹೆಚ್ಚು ಗಮನಹರಿಸಬಹುದಾಗಿದೆ. ಜನರ ಸೇವೆ ಮಾಡಲು ನನಗೆ ಅವಕಾಶ ನೀಡಿದ್ದಕ್ಕಾಗಿ ಗೌರವಾನ್ವಿತ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಮತ್ತು ಗೌರವಾನ್ವಿತ ಗೃಹ ಸಚಿವ ಅಮಿತ್ ಶಾ ಅವರಿಗೆ ಹೃತ್ಪೂರ್ವಕ ಧನ್ಯವಾದಗಳು. ಜೈ ಹಿಂದ್! ಎಂದು ಗಂಭೀರ್ ಎಕ್ಸ್​ ಸಂದೇಶದಲ್ಲಿ ತಿಳಿಸಿದ್ದಾರೆ.

ಗಂಭೀರ್ 2019 ರಲ್ಲಿ ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅರವಿಂದರ್ ಸಿಂಗ್ ಲವ್ಲಿ ಅವರನ್ನು 3,91,222 ಮತಗಳಿಂದ ಸೋಲಿಸಿದ್ದರು.

ಗೌತಮ್ ಗಂಭೀರ್ 2007 ರ ಟಿ20 ವಿಶ್ವಕಪ್ ಮತ್ತು 2011 ರ ಏಕದಿನ ವಿಶ್ವಕಪ್‌ನಲ್ಲಿ ಭಾರತ ತಂಡದಲ್ಲಿದ್ದರು. ಗೌತಮ್ ಗಂಭೀರ್ ಎರಡೂ ಪಂದ್ಯಾವಳಿಗಳ ಫೈನಲ್‌ನಲ್ಲಿ ಭಾರತ ತಂಡದ ಪರವಾಗಿ ಮ್ಯಾಚ್ ವಿನ್ನಿಂಗ್ ಇನ್ನಿಂಗ್ಸ್ ಆಡಿದ್ದರು. ಟಿ20 ವಿಶ್ವಕಪ್ ಫೈನಲ್‌ನಲ್ಲಿ ಗಂಭೀರ್ 54 ಎಸೆತಗಳಲ್ಲಿ 75 ರನ್ ಗಳಿಸಿದ್ದರು. ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ 97 ರನ್ ಗಳಿಸಿದ್ದರು.

ಗಂಭೀರ್ 2016 ರಲ್ಲಿ ಭಾರತ ತಂಡದ ಪರ ಇಂಗ್ಲೆಂಡ್ ವಿರುದ್ಧ ರಾಜ್‌ಕೋಟ್‌ನಲ್ಲಿ ಕೊನೆಯ ಟೆಸ್ಟ್ ಪಂದ್ಯ ಆಡಿದ್ದರು. ಅವರು ಅಂತರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನದಲ್ಲಿ 58 ಟೆಸ್ಟ್ ಪಂದ್ಯಗಳಲ್ಲಿ ಭಾರತೀಯ ತಂಡವನ್ನು ಪ್ರತಿನಿಧಿಸಿದ್ದಾರೆ ಮತ್ತು 41.95 ರ ಸರಾಸರಿಯಲ್ಲಿ 4154 ರನ್​​ ಗಳಿಸಿದ್ದಾರೆ. ಇದರಲ್ಲಿ ಒಂಬತ್ತು ಶತಕಗಳು ಸೇರಿವೆ.

ಗಂಭೀರ್ 147 ಏಕದಿನ ಅಂತರಾಷ್ಟ್ರೀಯ ಪಂದ್ಯಗಳಲ್ಲಿ 39.68 ಸರಾಸರಿಯಲ್ಲಿ 5238 ರನ್ ಗಳಿಸಿದ್ದಾರೆ. ಇದರಲ್ಲಿ 2011 ರ ವಿಶ್ವಕಪ್ ಫೈನಲ್‌ನಲ್ಲಿ 97 ರನ್‌ಗಳ ಸ್ಮರಣೀಯ ಇನ್ನಿಂಗ್ಸ್ ಸೇರಿದೆ. ಅವರು ಏಕದಿನದಲ್ಲಿ 11 ಶತಕ ದಾಖಲಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist