ಭಾನುವಾರ, ಅಕ್ಟೋಬರ್ 6, 2024
ಮಡಿಕೇರಿ ದಸರಾಕ್ಕೆ ದಸರಾ ಇತಿಹಾಸದಲ್ಲಿ ಅತಿ ಹೆಚ್ಚು 1.50 ಕೋಟಿ ರೂಪಾಯಿ ಅನುದಾನ: ಡಾ. ಮಂತರ್ ಗೌಡ-ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.-30 ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತ, 2 ಬಾರಿ ಜಿ. ಪಂ ಚುನಾವಣೆಯಲ್ಲಿ ಘಟಾನುಘಟಿಗಳನ್ನು ಸೋಲಿಸಿದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಯವರಿಗೆ ಸಿಗಬಹುದೇ ಕಾಂಗ್ರೆಸ್ ಟಿಕೆಟ್?-ಮುಡಾ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ; 14 ನಿವೇಶನ ವಾಪಸ್ ನೀಡಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ!-Naravi: ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು-Udayanidhi Stalin: ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕ; ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ!-CM Siddaramaiah: ನಿರ್ಮಲಾ ಸೀತಾರಾಮನ್‌, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು ಅಲ್ಲವೇ?-MLC Election:ಸ್ಥಳೀಯ ಸಂಸ್ಥೆಗಳ ಎಂಎಲ್ಸಿ ಚುನಾವಣೆ: ಕಾಂಗ್ರೆಸ್ಸಿನಿಂದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಡಿ. ಆರ್. ರಾಜು ಹೆಸರು ಮುಂಚೂಣಿಯಲ್ಲಿ.-Hathras: ಶಾಲೆಯ ಏಳಿಗೆಗಾಗಿ ಬಾಲಕನ ಬಲಿ, ಐವರ ಬಂಧನ-ಮುಡಾ ಕೇಸ್ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಅಳಿಯ ಬೆನ್ನಲ್ಲೇ ಸಹೋದರ ಕಾಂಗ್ರೆಸ್ ಸೇರ್ಪಡೆ..!

Twitter
Facebook
LinkedIn
WhatsApp
ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಅಳಿಯ ಬೆನ್ನಲ್ಲೇ ಸಹೋದರ ಕಾಂಗ್ರೆಸ್ ಸೇರ್ಪಡೆ..!

ಮೈಸೂರು: ಸಿಎಂ ಸಿದ್ದರಾಮಯ್ಯನವರ (Siddaramaiah) ಸೂಚನೆ ಮೇರೆಗೆ ಮೊನ್ನೆ ಅಷ್ಟೇ ಸಚಿವರಾದ ಎಚ್​ಸಿ ಮಹದೇವಪ್ಪ, ವೆಂಕಟೇಶ್​ ಸೇರಿದಂತೆ ಚಾಮರಾನಗರ ಮತ್ತು ಮೈಸೂರು(mYsuru) ಕಾಂಗ್ರೆಸ್ ನಾಯಕರು ಸೇರಿಸಕೊಂಡು ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್(Srinivas Prasad) ಅವರನ್ನು ಭೇಟಿ ಮಾಡಿದ್ದರು. ಅಲ್ಲದೇ ಕಾಂಗ್ರೆಸ್​ಗೆ ಬೆಂಬಲಿಸುವಂತೆ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ಶ್ರೀನಿವಾಸ್ ಪ್ರಸಾದ್ ಅಳಿಯ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಅಲ್ಲದೇ ಇದೀಗ ಶ್ರೀನಿವಾಸ್ ಪ್ರಸಾದ್ ಅವರ ಸಹೋದರ ವಿ.ರಾಮಸ್ವಾಮಿ ಸಹ ಕಾಂಗ್ರೆಸ್ ಸೇರ್ಪಡೆಯಾದರು. ಹೌದು… ಮೈಸೂರಿನಲ್ಲಿ ಇಂದು (ಏಪ್ರಿಲ್ 02) ವಿ.ರಾಮಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಇದರಿಂದ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಮರ್ಮಾಘಾತವಾಗಿದೆ.

ಕಾಂಗ್ರೆಸ್ ಸೇರಿದ ಬಳಿಕ ಮಾತನಾಡಿದ ರಾಮಸ್ವಾಮಿ, ನಾವೆಲ್ಲರೂ ಪ್ರಾಮಾಣಿಕವಾಗಿ ಸಿದ್ದರಾಮಯ್ಯನವರ ಕೈಬಲಪಡಿಸಬೇಕು.ಆಗ ಸಿಎಂ ಸಿದ್ದರಾಮಯ್ಯಗೆ ಬಲ ಹೆಚ್ಚಾದಷ್ಟು ನಮ್ಮ ಕೈಗೆ ಬಲ ಬರುತ್ತೆ. ಸಿದ್ದರಾಮಯ್ಯ ನಮ್ಮ ಕ್ಷೇತ್ರದವರಾಗಿದ್ದಾರೆ. ನಮ್ಮ ಭಾಗದ ಅಭಿವೃದ್ಧಿಗೆ ಅವರಲ್ಲಿ ಮನವಿ ಮಾಡಿಕೊಳ್ಳಬಹುದು. ನಾವೆಲ್ಲಾ ಪ್ರಾಮಾಣಿಕವಾಗಿ ದುಡಿದು ‘ಕೈ’ ಅಭ್ಯರ್ಥಿ ಗೆಲ್ಲಿಸಬೇಕು. ಆಗ ಮಾತ್ರ ನಾವು ಕಾಂಗ್ರೆಸ್ ಪಕ್ಷ ಸೇರಿದ್ದಕ್ಕೆ ಸಾರ್ಥಕವಾಗುತ್ತದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ ಬೃಹತ್ ಸಮಾವೇಶ ಮಾಡೋಣ ಎಂದರು.

ಚಾಮರಾಜನಗರ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅಳಿಯ ಧೀರಜ್ ಪ್ರಸಾದ್ ಮತ್ತು ಸಹೋದರ ಕಾಂಗ್ರೆಸ್‌ ಸೇರಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಚಾಮರಾಜನಗರ, ಮೈಸೂರಿನಲ್ಲಿ ಆಪರೇಷನ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಶ್ರೀನಿವಾಸ್ ಪ್ರಸಾದ್ ಅವರ ಹಲವಾರು ನಿಷ್ಠಾವಂತರು ಮತ್ತು ಕುಟುಂಬ ಸದಸ್ಯರು ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ತೊರೆದು ಕಾಂಗ್ರೆಸ್‌ಗೆ ಸೇರುವ ಮೂಲಕ ಈ ಬದಲಾವಣೆಯು ಲೋಕಸಭೆ ಚುನಾವಣೆಯ ಪೂರ್ವದಲ್ಲಿ ನಿರ್ಣಾಯಕ ಬೆಳವಣಿಗೆಯಾಗಿದೆ. ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿರುವ ಹಿನ್ನೆಲೆಯಲ್ಲಿ ಶ್ರೀನಿವಾಸ್ ಪ್ರಸಾದ್ ಅವರನ್ನು ಹೊರತುಪಡಿಸಿ ಅವರ ನಿಷ್ಠಾವಂತರು ಮತ್ತು ಕುಟುಂಬ ಸದಸ್ಯರನ್ನು ಪಕ್ಷಕ್ಕೆ ಮರಳಿ ಕರೆತರುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಇನ್ನುಳಿದಂತೆ ಶ್ರೀನಿವಾಸ್ ಪ್ರಸಾದ್ ಅವರ ಬೆಂಬಲಿಗರಿಗೂ ಸಹ ಕಾಂಗ್ರೆಸ್ ಗಾಳ ಹಾಕಿದೆ.​

ಎರಡು ದಿನಗಳ ಹಿಂದಷ್ಟೇ ಸಚಿವ ಮಹದೇವಪ್ಪ ಅವರು ರಾಜಕೀಯ ವೈರತ್ವ ಮರೆತು ತಮ್ಮ ಬೆಂಬಲಿಗರ ಜೊತೆ ಸೇರಿಕೊಂಡು ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಅವರನ್ನು ಭೇಟಿಯಾಗಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ