ಬುಧವಾರ, ಮೇ 15, 2024
8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

V. Srinivas Prasad: ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ

Twitter
Facebook
LinkedIn
WhatsApp
BJP MP V. Srinivas Prasad passed away

ಮೈಸೂರು: ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ ನಾಯಕ ವಿ. ಶ್ರೀನಿವಾಸ ಪ್ರಸಾದ್ (V. Srinivas Prasad) ನಿಧನರಾಗಿದ್ದಾರೆ. 

ಉಸಿರಾಟ ಸಮಸ್ಯೆ ಸೇರಿದಂತೆ ಇತರೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸಂಸದರು ಕಳೆದ ಕೆಲ ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಡಾ.‌ಸುದರ್ಶನ್ ಬಲ್ಲಾಳ್ ರಿಂದ  ಚಿಕಿತ್ಸೆ ನೀಡಲಾಗ್ತಾ ಇತ್ತು. ಆದರೆ ಇಂದು ನಸುಕಿನ ಜಾವ 1.27ರ ಸುಮಾರಿಗೆ  ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀನಿವಾಸ್ ಪ್ರಸಾದ್ ಅವರು ಏಪ್ರಿಲ್ 22ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗತ್ತು. ಚಿಕಿತ್ಸೆ ಫಲಿಸದೇ ತೀವ್ರ ಹೃದಯಾಘಾತದಿಂದ ಶ್ರೀನಿವಾಸ್ ಪ್ರಸಾದ್ ಅವರು ಕೊನೆಯುಸಿರೆಳೆದಿದ್ದಾರೆ. ಮೂತ್ರಕೋಶ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರ ಆರೋಗ್ಯದಲ್ಲಿ ಕಳೆದ ವಾರ ಏರುಪೇರಾಗಿತ್ತು. ಮಣಿಪಾಲ್ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ.

ರಾಜಕೀಯದ ಏಳು-ಬೀಳುಗಳ ನಡುವೆ ಸ್ವಾಭಿಮಾನಕ್ಕೆ ಹೆಸರಾಗಿದ್ದ 76 ವರ್ಷದ ಶ್ರೀನಿವಾಸ ಪ್ರಸಾದ್‌ ಅವರು ಕಳೆದ  ತಿಂಗಳು ರಾಜಕೀಯದಿಂದ ನಿವೃತ್ತಿ ಪಡೆದಿದ್ದರು. ರಾಜ್ಯದ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾಗಿರುವ ಸಂಸದರು, ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಗ್ರಾಹಕ ಸೇವೆಗಳ ಸಚಿವರಾಗಿ ಕೆಲಸ ಮಾಡಿದ್ದಾರೆ. 2013 ರಿಂದ 2016 ರವರೆಗೆ ಸಿದ್ದರಾಮಯ್ಯ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಖಾತೆ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಈವರೆಗೆ 6 ಬಾರಿ ಲೋಕಸಭಾ ಚುನಾವಣೆ ಸೇರಿದಂತೆ ಒಟ್ಟು 14 ಚುನಾವಣೆಗಳಲ್ಲಿ ಸ್ಪರ್ಧಿಸಿ 11 ಬಾರಿ ಜಯಗಳಿಸಿದ್ದಾರೆ.

ರಾಜ್ಯಶಾಸ್ತ್ರದಲ್ಲಿ ಎಂ ಎ ಮಾಡಿದ್ದ ಶ್ರೀನಿವಾಸಪ್ರಸಾದ್ 1974ರಲ್ಲಿ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಿ 1974ಲ್ಲಿ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಉಪಚುನಾವಣೆ ಹಾಗೂ 1978ರಲ್ಲಿ ಟಿ.ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತಿದ್ದರು. ಬಳಿಕ 1980ರಲ್ಲಿಚಾಮರಾಜನಗರ ಲೋಕಸಭ ಕ್ಷೇತ್ರದಿಂದ ಕಾಂಗ್ರೆಸ್(ಐ) ಅಭ್ಯರ್ಥಿಯಾಗಿ ಹಾಗೂ 1984, 1989, 1991 ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಾಗೂ 1999ರಲ್ಲಿ ಜೆ.ಡಿ.ಯು ಅಭ್ಯರ್ಥಿಯಾಗಿ ಹಾಗೂ 2019 ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದರು. ಇದರೊಂದಿಗೆ ಈ ಕ್ಷೇತ್ರದಿಂದ ಆರು ಬಾರಿ ಆಯ್ಕೆಯಾದ ಹೆಗ್ಗಳಿಕೆಗೂ ಪಾತ್ರರಾಗಿದ್ದರು.

1999ರಲ್ಲಿ ವಾಜಪೇಯಿ ಸಂಪುಟದಲ್ಲಿ ಆಹಾರ ಮತ್ತು ನಾಗರೀಕ ಇಲಾಖೆ ರಾಜ್ಯ ಸಚಿವರೂ ಆಗಿದ್ದರು. ಅಲ್ಲದೆ ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ 2008 ಹಾಗು 2013 ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಕಂದಾಯ ಸಚಿವರಾಗಿದ್ದ ಶ್ರೀನಿವಾಸಪ್ರಸಾದ್ ಅವಿವಾಹಿತ ಮಹಿಳೆಯರಿಗೆ ಮಾಶಾಸನ ನೀಡುವ ಮಹತ್ವದ ಮನಸ್ವಿನಿ ಯೋಜನೆಯನ್ನು ಜಾರಿಗೆ ತಂದಿದ್ದರು. 2017 ರಲ್ಲಿ ಸಚಿವ ಸಂಪುಟ ಪುನರ್ರಚನೆ ಸಂದರ್ಭದಲ್ಲಿ ಅನಾರೋಗ್ಯ ನೆಪದಲ್ಲಿ ಕೈಬಿಟ್ಟಿದ್ದರಿಂದ ಅಂದು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ವಿರುದ್ಧ ಬೇಸಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರ್ಪಡೆಯಾದರು.

ಬಳಿಕ 2018 ರಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಸೋಲು ಕಂಡಿದ್ದರು.

ರಾಜಕೀಯ ಪ್ರವೇಶಿಸಿ 50 ವರ್ಷ ತುಂಬಿದ ಹಿನ್ನಲೆಯಲ್ಲಿ ಕಳೆದ ಮಾರ್ಚ್ 17 ರಂದು ಸುವರ್ಣ ಮಹೋತ್ಸವ ಆಚರಿಸಿ ಚುನಾವಣಾ ರಾಜಕೀಯ ಹಾಗೂ ಸಕ್ರಿಯ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದರು. ರಾಜಕೀಯ ನಿವೃತ್ತಿ ಘೋಷಿಸಿದ್ದರೂ ಸಹ ಪ್ರಸ್ತುತ ನಡೆದ ಲೋಕಸಭಾ ಚುನಾವಣೆಯಲ್ಲಿ ಶ್ರೀನಿವಾಸಪ್ರಸಾದ್ ಅವರ ಬೆಂಬಲ ಪಡೆಯಲು ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷಗಳು ಪ್ರಯತ್ನ ನಡೆಸಿದ್ದವು. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೀನಿವಾಸ್ ಪ್ರಸಾದ್ ಅವರ ಆರೋಗ್ಯ ವಿಚಾರಿಸುವ ನೆಪದಲ್ಲಿ ಅವರ ಮೈಸೂರಿನ ನಿವಾಸಕ್ಕೆ ಇತ್ತೀಚೆಗೆ ಭೇಟಿ ನೀಡಿದ್ದರು. ಆದರೆ ಯಾರಿಗೆ ಬೆಂಬಲ ಘೋಷಿಸದ ಶ್ರೀನಿವಾಸಪ್ರಸಾದ್ ತಟಸ್ಥ ನಿಲುವು ತಾಳಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ