ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ : ಕಾಂಗ್ರೆಸ್ ಸಂಸದ ಶಶಿ ತರೂರ್
ಕಲ್ಲಿಕೋಟೆ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಆದರೆ, ಪಕ್ಷದ ಒಟ್ಟು ಸ್ಥಾನಗಳ ಸಂಖ್ಯೆ ಯಾವ ಮಟ್ಟಕ್ಕೆ ಇಳಿಯುತ್ತದೆ ಎಂದರೆ, ಸಂಭಾವ್ಯ ಮಿತ್ರಪಕ್ಷಗಳು ಬಿಜೆಪಿಯನ್ನು ಬೆಂಬಲಿಸುವ ಬದಲು ಪ್ರತಿಪಕ್ಷಗಳ ಒಕ್ಕೂಟಕ್ಕೆ ಬೆಂಬಲ ಘೋಷಿಸಲಿವೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ.
ಕೇರಳ ಸಾಹಿತ್ಯೋತ್ಸವದಲ್ಲಿ ಮಾತನಾಡುವ ವೇಳೆ ತರೂರ್ ಈ ಹೇಳಿಕೆ ನೀಡಿದ್ದಾರೆ. ನಾನು ಈಗಲೂ ಬಿಜೆಪಿಯೇ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ನಿರೀಕ್ಷಿಸುತ್ತೇನೆ.
ಆದರೆ, ಅದರ ಮಿತ್ರಪಕ್ಷಗಳು ನಮ್ಮನ್ನು ಬೆಂಬಲಿಸುವ ಕಾರಣ, ನಾವೂ ಪ್ರಯತ್ನ ಪಡಬಹುದು ಎಂದಿದ್ದಾರೆ.
Mandya: ಎಚ್ಡಿಕೆಗೆ ಕ್ಷೇತ್ರ ಬಿಟ್ಟುಕೊಡುತ್ತಾರಾ ಸುಮಲತಾ?
ಮಂಡ್ಯ: ಯಾರೇ ಸ್ಪರ್ಧಿಸಲಿ, ಬಿಡಲಿ ಮಂಡ್ಯ ಲೋಕಸಭಾ ಕ್ಷೇತ್ರ ಈ ಬಾರಿ ಹಾಟ್ ಕ್ಷೇತ್ರವಾಗುವುದರಲ್ಲಿ ಅನುಮಾನವೇ ಇಲ್ಲ. ಕಳೆದ ಸಲವೂ ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಪುತ್ರ ನಿಖೀಲ್ ಹಾಗೂ ಸುಮಲತಾ ಅಂಬರೀಶ್ ಮುಖಾ ಮುಖೀಯಿಂದಾಗಿ ಈ ಕ್ಷೇತ್ರದ ಇಡೀ ದೇಶದ ಗಮನಸೆಳೆದ ಕ್ಷೇತ್ರವಾಗಿತ್ತು. ಅದರಲ್ಲೂ ಈ ಬಾರಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾಗಿರುವುದರಿಂದ ಇಲ್ಲಿನ ರಾಜಕೀಯ ದಾಳ ಹೇಗೆ ಉರುಳುತ್ತದೆ ಎಂದು ನಿರೀಕ್ಷಿಸಲೂ ಸಾಧ್ಯವಾಗದು.
ಒಂದು ಕಾಲದಲ್ಲಿ ಜೆಡಿಎಸ್ ಭದ್ರಕೋಟೆ ಎನಿಸಿಕೊಂಡಿದ್ದ ಮಂಡ್ಯ ಕ್ಷೇತ್ರವನ್ನು ತನ್ನದಾಗಿಸಿಕೊಳ್ಳಲು ಜೆಡಿಎಸ್ ಹರಸಾಹಸ ಮಾಡ ಬಹುದು. ಆದರೆ ಜೆಡಿಎಸ್‌ನ ಕಡುವೈರಿ ಎಂದೇ ಬಿಂಬಿತ ಹಾಲಿ ಸಂಸದೆ ಸುಮಲತಾ ಅಂಬರೀಶ್ ಅವರ ನಡೆ ಇಡೀ ಕ್ಷೇತ್ರದ ಚಿತ್ರಣ ವನ್ನೇ ಬದಲಾಯಿಸಬಹುದು. ಸುಮಲತಾ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸಿದ್ಧ ರಾಗಿದ್ದಾರೆ ಎಂದೂ ಹೇಳಲಾಗುತ್ತದೆ.
ಕಳೆದ ವಿಧಾನಸಭಾ ಚುನಾ ವಣೆಯಲ್ಲಿ ಬಿಜೆಪಿಗೆ ಬೆಂಬಲ ಘೋಷಿ ಸಿದ್ದ ಸುಮಲತಾ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ನಿರೀಕ್ಷೆಯಲ್ಲಿದ್ದರು. ಆದರೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪರಿಣಾಮವಾಗಿ ಈ ಕ್ಷೇತ್ರ ಜೆಡಿಎಸ್ ಪಾಲಾಗುವುದು ಬಹುತೇಕ ಖಚಿತ. ಹೀಗಾಗಿಯೇ ಪಕ್ಷೇತರರಾಗಿ ಸ್ಪರ್ಧಿಸುವ ಸುಳಿವನ್ನು ಸುಮಲತಾ ನೀಡಿದ್ದಾರೆ. ಈ ಮೂಲಕ ಬಿಜೆಪಿಗೆ ಟಕ್ಕರ್ ಕೊಡಲು ಮುಂದಾಗಿದ್ದಾರೆ. ಅಲ್ಲದೆ, ಜಿಲ್ಲೆಯ ಬಿಜೆಪಿ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಮತ್ತೂಂದೆಡೆ ಸುಮಲತಾ ಕಾಂಗ್ರೆಸ್ ಸೇರುವ ಮಾತುಗಳೂ ಕೇಳಿಬರುತ್ತಿವೆ. ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟು ಸುಮಲತಾ ಅವರನ್ನು ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಕರೆದೊಯ್ಯುವ ಚಿಂತನೆ ಬಿಜೆಪಿಯಲ್ಲಿದೆ ಎನ್ನಲಾಗಿದೆ.
ಇತ್ತ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಗೊಂದಲ ಮುಂದುವರಿದಿದೆ. ಬಿಜೆಪಿಯಲ್ಲೂ ಆಕಾಂಕ್ಷಿಗಳಿದ್ದಾರೆ. ಆದರೆ ಜೆಡಿಎಸ್ ಪ್ರಾಬಲ್ಯ ಹೆಚ್ಚಿರುವುಣದರಿಂದ ಜೆಡಿಎಸ್ ನಾಯಕರ ಹಿಡಿತಕ್ಕೆ ಕ್ಷೇತ್ರ ಸಿಗಲಿದ್ದು, ಇದರಿಂದ ಜೆಡಿಎಸ್‌ನಿಂದಲೇ ಮೈತ್ರಿ ಅಭ್ಯರ್ಥಿ ಯಾಗುವುದು ಖಚಿತವಾಗಿದೆ.
ಈಗಾಗಲೇ ಕುಮಾರಸ್ವಾಮಿ, ನಿಖೀಲ್ ಕುಮಾರಸ್ವಾಮಿ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣ ಹೆಸರು ಮುಂಚೂಣಿಯಲ್ಲಿದೆ. ಸದ್ಯದ ಮೂಲಗಳ ಪ್ರಕಾರ ಎಚ್.ಡಿ.
ಕುಮಾರಸ್ವಾಮಿ ಅಭ್ಯರ್ಥಿಯಾಗ ಬಹುದೆಂದು ಹೇಳಲಾಗುತ್ತಿದೆ. ತಮ್ಮ ಪುತ್ರನ ರಾಜಕೀಯ ಭವಿಷ್ಯ ಕ್ಕಾಗಿ ಚನ್ನಪಟ್ಟಣ ಬಿಟ್ಟು ಮಂಡ್ಯ ಲೋಕಸಭೆಗೆ ಬರಬಹುದೆಂಬ ಚರ್ಚೆಗಳೂ ನಡೆಯುತ್ತಿವೆ. ಇದರ ನಡುವೆ ಮಾಜಿ ಸಚಿವರಾದ ಸಿ.ಎಸ್. ಪುಟ್ಟರಾಜು, ಡಿ.ಸಿ.ತಮ್ಮಣ್ಣ ಕೂಡ ಟಿಕೆಟ್ ರೇಸ್‌ನಲ್ಲಿದ್ದಾರೆ. ಆದರೆ ಪಕ್ಷದಲ್ಲಿ ನಾಯಕರ ಹೊಂದಾಣಿಕೆ ಕೊರತೆ ಇರುವುದರಿಂದ ಕುಮಾರ ಸ್ವಾಮಿ, ದೇವೇಗೌಡ ಅಥವಾ ನಿಖೀಲ್ ಬಂದರೆ ಒಗ್ಗಟ್ಟು ಪ್ರದರ್ಶನವಾಗಲಿದೆ ಎಂಬ ಚರ್ಚೆಗಳು ರಾಜಕೀಯ ಪಡಸಾಲೆಯಿಂದ ಕೇಳಿಬರುತ್ತಿದೆ.
ಇನ್ನು ಕಾಂಗ್ರೆಸ್‌ನಲ್ಲೂ ಅಭ್ಯರ್ಥಿ ಗಳ ಗೊಂದಲ ಮುಂದುವರಿದಿದೆ. ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಯನ್ನು ಸೋಲಿಸಲೇಬೇಕು ಎಂಬ ಹಟಕ್ಕೆ ಬಿದ್ದಿದೆ. ಆದ್ದರಿಂದ ಎಲ್ಲ ರೀತಿಯ ತಯಾರಿ ನಡೆಸುತ್ತಿದೆ. ಮಾಜಿ ಸಿಎಂ ಎಸ್.ಎಂ.ಕೃಷ್ಣ ಪುತ್ರಿ ಶಾಂಭವಿ, ನಟಿ ರಮ್ಯಾ ಅವರನ್ನು ಕರೆತರುವ ಯೋಚನೆಗಳು ನಡೆಯುತ್ತಿವೆ. ಆದರೆ ಇಬ್ಬರೂ ಕ್ಷೇತ್ರದಲ್ಲಿ ಇನ್ನೂ ಆ್ಯಕ್ಟೀವ್ ಆಗಿಲ್ಲ. ಇದರ ನಡುವೆ ಸಚಿವ ಎನ್.ಚಲುವರಾಯಸ್ವಾಮಿಗೂ ಆಹ್ವಾನ ನೀಡಲಾಗಿದೆ.
ಚಲುವರಾಯ ಸ್ವಾಮಿ ಹಿಂದೇಟು ಹಾಕಿದರೆ ಅವರ ಪತ್ನಿ ಧನಲಕ್ಷ್ಮೀ ಹೆಸರೂ ಕೇಳಿಬರು ತ್ತಿದೆ. ಜಿಲ್ಲೆಯ ಕಾಂಗ್ರೆಸ್ ಕಾರ್ಯ ಕರ್ತರು ಶಾಂಭವಿ, ರಮ್ಯಾ, ಚಲುವ ರಾಯಸ್ವಾಮಿ ಅಥವಾ ಧನಲಕ್ಷ್ಮಿ ಅವರಲ್ಲಿ ಒಬ್ಬರಿಗೆ ಟಿಕೆಟ್ ನೀಡಲು ಒಲವು ತೋರಿದ್ದಾರೆನ್ನಲಾಗಿದೆ.
ಒಂದು ವೇಳೆ ಎಚ್. ಡಿ. ಕುಮಾರಸ್ವಾಮಿ ಕಣಕ್ಕಿಳಿದರೆ ಕಾಂಗ್ರೆಸ್‌ನಿಂದ ಚಲುವ ರಾಯ ಸ್ವಾಮಿಯನ್ನು ಕಾಂಗ್ರೆಸ್ ಕಣಕ್ಕಿಳಿಸ ಬಹುದು ಎನ್ನಲಾಗು ತ್ತಿದೆ. ಚಲುವರಾಯ ಸ್ವಾಮಿ ಒಪ್ಪದಿದ್ದರೆ ಹಾಲಿ ಸಂಸದೆ ಸುಮಲತಾ ಅವರನ್ನೇ ಪಕ್ಷಕ್ಕೆ ಸೇರಿಸಿಕೊಂಡು ಕಣಕ್ಕಿಳಿಸಬಹುದು. ಆದರೆ ಸುಮಲತಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡಿರುವುದು ಜಿಲ್ಲಾ ಕಾಂಗ್ರೆಸ್ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ. ಇದು ಪಕ್ಷ ಸೇರ್ಪಡೆಗೆ ಹಿನ್ನಡೆಯಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.