ಇಂದು ಬಿಜೆಪಿಯ 2 ನೇ ಪಟ್ಟಿ ಬಿಡುಗಡೆ ಸಾಧ್ಯತೆ; ಕರ್ನಾಟಕದ ಯಾವ ಅಭ್ಯರ್ಥಿಗಳಿಗೆ ಟಿಕೆಟ್ ಫೈನಲ್?
ನವದೆಹಲಿ, ಮಾರ್ಚ್ 06: ಲೋಕಸಭೆ ಚುನಾವಣೆಗೆ ಬಿಜೆಪಿ ಭಾರಿ ಸಿದ್ಧತೆ ಮಾಡಿಕೊಳ್ಳುತ್ತಿವೆ. ಈಗಾಗಲೇ 195 ಅಭ್ಯರ್ಥಿಗಳ ಟಿಕೆಟ್ ಫೈನಲ್ ಆಗಿದ್ದು, ಸದ್ಯ ಎರಡನೇ ಪಟ್ಟಿ ಬಿಡುಗಡೆಗೆ ಕಸರುತ್ತು ಜೋರಾಗಿದೆ. ಇಂದು ದೆಹಲಿಯಲ್ಲಿ ಬಿಜೆಪಿ ಸಭೆ ನಡೆಯಲಿದ್ದು, ಎರಡನೇ ಪಟ್ಟಿ ಬಿಡುಗಡೆ ಸಂಬಂಧ ಚರ್ಚೆ ನಡೆಯಲಿದೆ.
ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ಸಭೆ ನಡೆಯಲಿದ್ದು. ಎರಡನೇ ಪಟ್ಟಿ ಘೋಷಣೆ ಆಗುವ ಸಾಧ್ಯತೆ ಇದೆ. ಅದರಲ್ಲೂ ಎರಡನೇ ಪಟ್ಟಿಯಲ್ಲಿ ಕರ್ನಾಟಕದ ಅಭ್ಯರ್ಥಿಗಳ ಹೆಸರು ಘೋಷಣೆ ಆಗೋ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನೂ ಈ ಸಭೆಯಲ್ಲಿ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಭಾಗವಹಿಸಲಿದ್ದು, ಕರ್ನಾಕಟದ 28 ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆಯಾಗಲಿದೆ ಎಂದು ತಿಳಿದು ಬಂದಿದೆ.
ಈಗಾಗಲೇ ಎಲ್ಲಾ ಕ್ಷೇತ್ರಗಳಿಗೂ 2ರಿಂದ 3 ಹೆಸರುಗಳನ್ನು ರಾಜ್ಯ ನಾಯಕರು ಶಿಫಾರಸು ಮಾಡಲಾಗಿದ್ದು, ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ತೀರ್ಮಾನ ಮಾಡಲಾಗುತ್ತದೆ. ಇಂದು ನಡೆಯುವ ಸಭೆಯಲ್ಲಿ 10 ರಿಂದ 15 ಕ್ಷೇತ್ರಗಳಿಗೆ ಅಭ್ಯರ್ಥಿಗಳು ಫೈನಲ್ ಮಾಡುವ ಬಗ್ಗೆ ನಾಯಕರು ತೀರ್ಮಾನ ಕೈಗೊಳ್ಳಲಿದ್ದಾರೆ. ಇನ್ನೂ ಉಳಿದ ಕ್ಷೇತ್ರಗಳ ಬಗ್ಗೆ ಅಭ್ಯರ್ಥಿ ಆಯ್ಕೆ ಕುರಿತು ಇನ್ನೊಂದು ಸಭೆಯ ನಂತರ ಬಿಡುಗಡೆಯಾಗಲಿದೆ.
ಬಿಜೆಪಿ ಸಂಭವನೀಯ ಅಭ್ಯರ್ಥಿ ಪಟ್ಟಿ ಇಲ್ಲಿದೆ
ಬೆಂಗಳೂರು ಗ್ರಾಮಾಂತರ: ಡಾ. ಮಂಜುನಾಥ್
ಬೆಂಗಳೂರು ಕೇಂದ್ರ: ಪಿ ಸಿ ಮೋಹನ್
ತುಮಕೂರು: ವಿ ಸೋಮಣ್ಣ
ಬೆಂಗಳೂರು ದಕ್ಷಿಣ: ತೇಜಸ್ವಿ ಸೂರ್ಯ
ಬೆಂಗಳೂರು ಉತ್ತರ : ಶೋಭಾ ಕರಂದ್ಲಾಜೆ
ಮೈಸೂರು: ಪ್ರತಾಪ್ ಸಿಂಹ
ಚಾಮರಾಜನಗರ: ಶ್ರೀನಿವಾಸ್ ಪ್ರಸಾದ್ ಅಳಿಯ ಡಾ. ಮೋಹನ್
ಚಿಕ್ಕಮಗಳೂರು: ಶೋಭಾ ಕರಂದ್ಲಾಜೆ
ದಾವಣಗೆರೆ: ಜಿ ಎಂ ಸಿದ್ದೇಶ್ವರ್
ಶಿವಮೊಗ್ಗ: ಬಿ ವೈ ರಾಘವೇಂದ್ರ
ಹಾವೇರಿ: ಬಿ ಸಿ ಪಾಟೀಲ್, ಕೆ ಎಸ್ ಈಶ್ವರಪ್ಪ ಪುತ್ರ ಕಾಂತೇಶ್
ಚಿಕ್ಕಬಳ್ಳಾಪುರ: ಡಾ. ಕೆ ಸುಧಾಕರ್ ಅಥವಾ ಅಲೋಕ್ ವಿಶ್ವನಾಥ್
ಉತ್ತರ ಕನ್ನಡ: ಅನಂತ ಕುಮಾರ್ ಹೆಗ್ಡೆ, ವಿಶ್ವೇಶ್ವರ ಹೆಗಡೆ ಕಾಗೇರಿ
ದಕ್ಷಿಣ ಕನ್ನಡ: ನಳಿನ್ ಕುಮಾರ್ ಕಟೀಲ್
ಹುಬ್ಬಳ್ಳಿ-ಧಾರವಾಡ: ಪ್ರಹ್ಲಾದ್ ಜೋಶಿ
ಚಿತ್ರದುರ್ಗ: ಎ ನಾರಾಯಣಸ್ವಾಮಿ
ಬಾಗಲಕೋಟೆ: ಪಿ. ಸಿ. ಗದ್ದಿಗೌಡರ್
ಬಳ್ಳಾರಿ: ಶ್ರೀರಾಮುಲು
ಕೊಪ್ಪಳ: ಕರಡಿ ಸಂಗಣ್ಣ
ವಿಜಯಪುರ: ರಮೇಶ್ ಜಿಗಜಿಣಗಿ
ಕಲಬುರ್ಗಿ: ಉಮೇಶ್ ಜಾದವ್
ಕೋಲಾರ: ಮುನಿಸ್ವಾಮಿ
ಬೆಳಗಾವಿ: ಜಗದೀಶ್ ಶೆಟ್ಟರ್
ಬೀದರ್ : ಭಗವಂತ್ ಖೂಬಾ
ಚಿಕ್ಕೋಡಿ: ಅಣ್ಣಾಸಾಹೇಬ ಜೊಲ್ಲೆ ಅಥವಾ ರಮೇಶ್ ಕತ್ತಿ
ರಾಯಚೂರು : ರಾಜಾ ಅಮರೇಶ್ವರ