ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Rameshwaram cafe: ಇಡ್ಲಿ ತಿಂದು ಕೆಫೆಯಲ್ಲಿ ಬಾಂಬ್‌ ಇಟ್ಟ ಬಾಂಬರ್‌ - ಡಿಕೆ ಶಿವಕುಮಾರ್

Twitter
Facebook
LinkedIn
WhatsApp
dk shivakumar, rameshwaram cafe

Rameshwaram cafe Bangalore: ವೈಟ್ ಫೀಲ್ಡ್ ಬಳಿ ಬ್ರೂಕ್ ಫೀಲ್ಡ್‌ನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಗೊಂಡಿದ್ದು, (Rameshwaram Cafe Blast) ಘಟನಾ ಸ್ಥಳಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar), ಗೃಹಸಚಿವ ಜಿ.ಪರಮೇಶ್ವರ್‌ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಲ್ಲದೇ ಅಧಿಕಾರಿಗಳಿಂದ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. 

ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ ಶಿವಕುಮಾರ್, ಸಿಸಿಬಿ ಪೊಲೀಸರು (CCB Police) ಬಾಂಬ್ ಇಟ್ಟ ಆರೋಪಿ ಬಗ್ಗೆ ಮಾಹಿತಿ ಕಲೆ ಹಾಕೋದಕ್ಕೆ ಶುರು ಮಾಡಿದ್ದಾರೆ. ಆರೋಪಿ ಯಾರು ಏನು ಎಂಬುದು ಬಹುತೇಕ ಗೊತ್ತಾಗಿದೆ. ಆರೋಪಿ ಬಸ್‌ನಲ್ಲಿ ಬಂದು, ಹೋಟೆಲ್‌ನಲ್ಲಿ ರವೆ ಇಡ್ಲಿ ತಿಂದು ಆಮೇಲೆ ಬಾಂಬ್ ಇಟ್ಟು ಹೋಗಿದ್ದಾನೆ. ಬರುವಾಗ ಮಾಸ್ಕ್‌ ಧರಿಸಿ ಬಂದಿದ್ದಾನೆ ಎಂದು ತಿಳಿಸಿದ್ದಾರೆ. ಅಲ್ಲದೇ ಆರೋಪಿಗೆ ಸುಮಾರು 35 ವರ್ಷ ವಯಸ್ಸಿರಬೇಕು ಎಂಬ ಶಂಕೆ ವ್ಯಕ್ತವಾಗಿದೆ.

ಬಾಂಬ್ ಬ್ಲಾಸ್ಟ್ ಟೈಮಿಂಗ್
11:35 – ಹೋಟೆಲ್‌ಗೆ ಬಾಂಬರ್‌ ಆಗಮನ
11:35 – ಕ್ಯಾಶ್ ಕೌಂಟರ್ ಅಲ್ಲಿ ರವೆ ಇಡ್ಲಿ ಟೋಕನ್‌ ಖರೀದಿ
11:42 – ಇಡ್ಲಿ ತಿಂದು ಕೈ ತೊಳೆಯುವ ಜಾಗಕ್ಕೆ ಬಂದ ವ್ಯಕ್ತಿ
11:44 – ಕೈತೊಳೆಯುವ ಜಾಗದಲ್ಲೇ ಬ್ಯಾಗ್ ಇರಿಸಿ ಪರಾರಿ
12:55 – ಬಾಂಬ್‌ ಸ್ಫೋಟ

ಹೋಟೆಲ್‌ನಲ್ಲಿ ಬ್ಯಾಗ್ ಇಟ್ಟು ಹೋದ 1 ಗಂಟೆ ಬಳಿಕ ಬಾಂಬ್ ಬ್ಲಾಸ್ಟ್ ಆಗಿದೆ. ಘಟನಾ ಸ್ಥಳದಲ್ಲಿ ಟೈಮರ್ ಸಹ ಪತ್ತೆಯಾಗಿದೆ. ವ್ಯಕ್ತಿಯ ಎಲ್ಲಾ ಚಟುವಟಿಕೆಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಶೀಘ್ರದಲ್ಲೇ ಸಿಕ್ಕಿಬಿಳುತ್ತಾನೆ ಎಂದು ಎಂದು ಹೇಳಿದ್ದಾರೆ.

ಘಟನೆ ಸಂಬಂಧ ಸಿಎಂ ರಾಜೀನಾಮೆಗೆ ಬಿಜೆಪಿ ಆಗ್ರಹಿಸುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ರಾಜೀನಾಮೆ ಕೊಡೋಣ… ಕೊಡೋಣ.. ಎಂದು ವ್ಯಂಗ್ಯವಾಡಿದ್ದಾರೆ. ಅವರು ರಾಜಕಾರಣ ಮಾಡಲಿ ನಾವು ಜನರ ಸೇವೆ ಮಾಡ್ತೀವಿ ಎಂದು ಹೇಳಿದ್ದಾರೆ.

ಇನ್ನು ಡಿಸಿಎಂ, ಗೃಹ ಸಚಿವರು ಸ್ಪೋಟ ಘಟನಾ ಸ್ಥಳ ಪರಿಶೀಲನೆ ಬಳಿಕ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಇದೇ ವೇಳೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಮಾತನಾಡಿ. ಯಾರು ಆತಂಕಪಡುವ ಅಗತ್ಯವಿಲ್ಲ. ಮೂವರು ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಮೂವರಿಗೂ ಕಿವಿಗೆ ಸ್ವಲ್ಪ ಪ್ರಮಾಣದಲ್ಲಿ ಹಾನಿಯಾಗಿದೆ. ಯಾರಿಗೂ ತೊಂದರೆ ಇಲ್ಲ, ಜೀವಕ್ಕೆ ಅಪಾಯವಿಲ್ಲ ಎಂದು ತಿಳಿಸಿದರು.

ಕಮಾಂಡ್ ಸೆಂಟರ್ ನಲ್ಲಿ ಆರೋಪಿ ಚಲನವಲನ ವಾಚ್

ಬಾಂಬ್ ಬ್ಲಾಸ್ಟ್ ಎನ್ನುವುದು ತಿಳಿಯುತ್ತಿದ್ದಂತೆಯೇ ಈ ಪ್ರಕರಣವನ್ನು ಪೊಲಿಸರು ಗಂಭೀರವಾಗಿ ಪರಿಗಣಿಸಿದ್ದು, ಬಾಂಬ್ ಇಟ್ಟು ಹೋಗಿರವ ಆರೋಪಿ ಪತ್ತೆಗೆ ಕಾರ್ಯಚರಣೆ ನಡೆಸಿದ್ದಾರೆ. ಕಮಾಂಡ್ ಸೆಂಟರ್ ನಲ್ಲಿ ಆರೋಪಿ ಚಲನವಲನ ಪರಿಶೀನೆ ನಡೆದಿದೆ. ರಾಮೇಶ್ವರಂ ಕೆಫೆ ಮಾರ್ಗದಲ್ಲಿರುವ ಎಲ್ಲಾ ಸಿಸಿಟಿವಿ ದೃಶ್ಯಗಳನ್ನು ಪೊಲಿಸರು ಪರಿಶೀಲನೆ ನಡೆಸಿದ್ದು, ಆತನ ಬಟ್ಟೆ ಹಾಗೂ ಚಲನವಲನ ಮೇಲೆ ಕಣ್ಣಿಟ್ಟಿದ್ದಾರೆ. ಬೆಳಗ್ಗೆ 12 ಗಂಟೆಯಿಂದ ಆರೋಪಿ ಎಲ್ಲೆಲ್ಲಿ ಓಡಾಡಿದ್ದ ಎಂದು ರಸ್ತೆಯುದ್ದಕ್ಕೂ ಮೂವ್ಮೆಂಟ್ ಆಗಿರುವುದನ್ನು ಕೂಲಂಕುಷ ಪರಿಶೀಲನೆ ಮಾಡುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ