ಭಾನುವಾರ, ಮೇ 12, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಸ್​ನಲ್ಲಿ ಬಾಟಲ್ ಸ್ಫೋಟ; ಹಲವರಿಗೆ ಗಾಯ!

Twitter
Facebook
LinkedIn
WhatsApp
ಬಸ್​ನಲ್ಲಿ ಬಾಟಲ್ ಸ್ಫೋಟ; ಹಲವರಿಗೆ ಗಾಯ!

ತುಮಕೂರು, ಮಾ.20: ಇತ್ತೀಚೆಗೆ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ  ಆದ ಸ್ಫೋಟ ಜನರನ್ನ ಬೆಚ್ಚಿ ಬೀಳುವಂತೆ ಮಾಡಿತ್ತು. ಇದೀಗ ಖಾಸಗಿ ಬಸ್​ನಲ್ಲಿ ಶೌಚಾಲಯಕ್ಕೆ ಬಳಸುವ ಆ್ಯಸಿಡ್ ಬಾಟಲ್(Acid Bottle)ಸ್ಫೋಟವಾಗಿ ಹಲವರಿಗೆ ಸಣ್ಣಪುಟ್ಟ ಗಾಯವಾದ ಘಟನೆ ತುಮಕೂರು ತಾಲೂಕಿನ ಗೂಳೂರು ಬಳಿ‌ ನಡೆದಿದೆ. ಕೂಡಲೇ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶೌಚಾಲಯಕ್ಕೆ ಬಳಸುವ ಆ್ಯಸಿಡ್ ಬಾಟಲ್​ಗಳನ್ನು ಶಕೀಲಾ ಬಾನು (48) ಎಂಬ ಮಹಿಳೆ ತಂದಿದ್ದಳು.

ಬಾಟಲ್​​ಗಳಲ್ಲಿ ಒತ್ತಡ ಹೆಚ್ಚಾಗಿ ಸ್ಫೋಟಗೊಂಡಿರುವ ಶಂಕೆ

ಬಸ್​ನಲ್ಲಿ ಬಾಟಲ್​ಗಳನ್ನು ಇಟ್ಟುಕೊಂಡು ತುಮಕೂರು ತಾಲೂಕಿನ ಹೊನ್ನುಡಿಕೆ ಹ್ಯಾಂಡ್ ಪೋಸ್ಟ್​​​ನಿಂದ ಬರುತ್ತಿದ್ದರು. ಈ ವೇಳೆ ಬಾಟಲ್​​ಗಳು ಸ್ಫೋಟಗೊಂಡಿದೆ. ಒಂದು ಕ್ಷಣ ಖಾಸಗಿ ಬಸ್​ನಲ್ಲಿದ್ದ ಪ್ರಯಾಣಿಕರು ಶಾಕ್ ಆಗಿದ್ದು, ಅದೃಷ್ಟವಶಾತ್​ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮೇಲ್ನೋಟಕ್ಕೆ ಬಾಟಲ್​​ಗಳಲ್ಲಿ ಒತ್ತಡ ಹೆಚ್ಚಾಗಿ ಸ್ಫೋಟಗೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ತುಮಕೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ