ಸೋಮವಾರ, ಏಪ್ರಿಲ್ 29, 2024
ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Breaking News: ವಿಶ್ವಾಸಮತಕ್ಕೂ ಮುನ್ನವೇ ಉದ್ಧವ್‌ ಠಾಕ್ರೆ ರಾಜೀನಾಮೆ! (Uddhav Thackeray resign)

Twitter
Facebook
LinkedIn
WhatsApp
Breaking News: ವಿಶ್ವಾಸಮತಕ್ಕೂ ಮುನ್ನವೇ ಉದ್ಧವ್‌ ಠಾಕ್ರೆ ರಾಜೀನಾಮೆ! (Uddhav Thackeray resign)

ಮುಂಬೈ (ಜೂನ್‌ 29): (Uddhav Thackeray resign) ವಿಶ್ವಾಸಮತ ಯಾಚನೆಗೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದ ಬೆನ್ನಲ್ಲಿಯೇ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಉದ್ಧವ್‌ ಠಾಕ್ರೆ ರಾಜೀನಾಮೆ ಸಲ್ಲಿಸಿದ್ದಾರೆ. ರಾತ್ರಿ 9 ಗಂಟೆಯ ವೇಳೆಗೆ ಸುಪ್ರೀಂ ಕೋರ್ಟ್‌ ಗುರುವಾರವೇ ವಿಶ್ವಾಸಮತ ನಡೆಸಿ ಎಂದು ಹೇಳಿದ ಬೆನ್ನಲ್ಲಿಯೇ ರಾತ್ರಿ 9.30ರ ವೇಳೆಗೆ ಫೇಸ್‌ ಬುಕ್‌ ಲೈವ್‌ ಬಂದ ಉದ್ಧವ್ ಠಾಕ್ರೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದರು. ಸುಪ್ರೀಂ ಕೋರ್ಟ್‌ ತನ್ನ ತೀರ್ಪಿನಲ್ಲಿ ಗುರುವಾರ ಸಂಜೆ 5 ಗಂಟೆಯ ಒಳಗಾಗಿ ಮಹಾರಾಷ್ಟ್ರ ವಿಧಾನಸಭೆಯ ವಿಶ್ವಾಸಮತ ಸಾಬೀತುಪಡಿಸಬೇಕು ಎಂದು ಆದೇಶ ನೀಡಿತ್ತು. ಜೈಲಿನಲ್ಲಿರುವ ಮಹಾರಾಷ್ಟ್ರದ ಸಚಿವರಾದ ನವಾಬ್ ಮಲೀಕ್‌ ಹಾಗೂ ಅನಿಲ್‌ ದೇಶ್‌ಮುಖ್‌ ಅವರಿಗೂ ವಿಶ್ವಾಸಮತ ವೇಳೆ ಮತ ಹಾಕಲು ಸುಪ್ರೀಂ ಕೋರ್ಟ್‌ ಅನುಮತಿ ನೀಡಿತ್ತು.

ಆದರೆ, ಇದಾವುದಕ್ಕೂ ಕಾಯದ ಉದ್ಧವ್‌ ಠಾಕ್ರೆ ಫೇಸ್‌ ಬುಕ್‌ ಲೈವ್‌ ಮೂಲಕ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಅದರೊಂದಿಗೆ ಬಿಜೆಪಿ ಹಾಗೂ ಏಕನಾಥ್‌ ಶಿಂಧೆ ನೇತೃತ್ವದ ಶಿವಸೇನೆ ಬಣದ ಮೈತ್ರಿ ಸರ್ಕಾರ ಮಹಾರಾಷ್ಟ್ರದಲ್ಲಿ ಅಧಿಕಾರ ಸ್ಥಾಪಿಸಲು ತನ್ನ ಕೆಲಸ ಆರಂಭಿಸಿದೆ.

ಕೋರ್ಟ್‌ ಹೇಳಿದ್ದೇನು?
ಗುರುವಾರ ಸಂಜೆ 5 ಗಂಟೆಯ ಒಳಗಾಗಿ ವಿಶ್ವಾಸಮತ ಸಾಬೀತು ಪಡಿಸಬೇಕು ಎಂದು ಮಹಾರಾಷ್ಟ್ರದ ಉದ್ಧವ್‌ ಠಾಕ್ರೆ ಸರ್ಕಾರಕ್ಕೆ ರಾಜ್ಯಪಾಲರು ನೀಡಿರುವ ಆದೇಶವನ್ನು ಪ್ರಶ್ನಿಸಿ ಶಿವಸೇನೆಯ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್‌ ಈ ರೀತಿಯಾಗಿ ಹೇಳಿದೆ.

ಉದ್ಧವ್ ಠಾಕ್ರೆ ಸರ್ಕಾರ ಅಲ್ಪಮತಕ್ಕೆ ಜಾರಿದೆ. ಹೀಗಾಗಿ ಗುರುವಾರ ಸಂಜೆ ಐದು ಗಂಟೆಯ ಒಳಗಾಗಿ ವಿಶ್ವಾಸಮತ ಸಾಬೀತು ಮಾಡಬೇಕು ಎಂದು ರಾಜ್ಯಪಾಲ ಭಗತ್‌ ಸಿಂಗ್‌ ಕೊಶ್ಯಾರಿ ಆದೇಶ ನೀಡಿದ್ದರು. ಇದನ್ನು ಪ್ರಶ್ನೆ ಮಾಡಿ ಶಿವಸೇನೆಯ ಮುಖ್ಯಸಚೇತ ಸುನಿಲ್‌ ಪ್ರಭು ಅವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಸೂರ್ಯಕಾಂತ್‌ ಹಾಗೂ ನ್ಯಾ. ಜೆಬಿ ಪರ್ಡಿವಾಲ ಅವರಿದ್ದ ರಜಾಕಾಲದ ದ್ವಿಸದಸ್ಯ ಪೀಠ, ರಾಜ್ಯಪಾಲರ ಸೂಚನೆಯಂತೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸದನದಲ್ಲಿ ವಿಶ್ವಾಸಮತ ಯಾಚನೆ ಮಾಡಬೇಕು ಎಂದು ಉದ್ಧವ್‌ ಠಾಕ್ರೆ ಸರ್ಕಾರಕ್ಕೆ ಸೂಚನೆ ನೀಡಿತ್ತು. ವಿಶ್ವಾಸಮತ ಯಾಚನೆಯ ಫಲಿತಾಂಶವು ಸುಪ್ರೀಂ ಕೋರ್ಟ್ ಪ್ರಕರಣದ ಫಲಿತಾಂಶಕ್ಕೆ ಒಳಪಟ್ಟಿರುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಸ್ಪೀಕರ್ ಮತ್ತು ರಾಜ್ಯಪಾಲರ ಅಧಿಕಾರಕ್ಕೆ ಸಂಬಂಧಿಸಿದ ವಿಷಯಗಳನ್ನು ಜುಲೈ 11 ರಂದು ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿತ್ತು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ