ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಿಜೆಪಿ - ಜೆಡಿಎಸ್ ಮೈತ್ರಿ ಬಗ್ಗೆ ಇದುವರೆಗೆ ಯಾವುದೇ ಮಾತುಕತೆ ಆಗಿಲ್ಲ ಎಂದು ಯುಟರ್ನ್ ಹೊಡೆದ ಬಿಎಸ್ ಯಡಿಯೂರಪ್ಪ!

Twitter
Facebook
LinkedIn
WhatsApp
ಬಿಜೆಪಿ - ಜೆಡಿಎಸ್ ಮೈತ್ರಿ ಬಗ್ಗೆ ಇದುವರೆಗೆ ಯಾವುದೇ ಮಾತುಕತೆ ಆಗಿಲ್ಲ ಎಂದು ಯುಟರ್ನ್ ಹೊಡೆದ ಬಿಎಸ್ ಯಡಿಯೂರಪ್ಪ!

ಬೆಂಗಳೂರು : ಜೆಡಿಎಸ್​ ಜೊತೆ ಮೈತ್ರಿಗೆ ಹೈಕಮಾಂಡ್ ಒಲವು ತೋರಿಸಿದ್ದು, ಮೈತ್ರಿ ಮಾಡಿಕೊಳ್ಳಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಒಪ್ಪಿಗೆ ನೀಡಿದ್ದಾರೆ. ಈ ಬಗ್ಗೆ ರಾಜ್ಯ ಬಿಜೆಪಿ ನಾಯಕರಿಗೆ ಮಾಹಿತಿ ರವಾನಿಸಿದ್ದು,  ಜೊತೆಗಿನ ಮೈತ್ರಿ ಪಕ್ಷಕ್ಕೆ ಸಹಕಾರಿಯಾಗಲಿದೆ ಎಂದು ಖುದ್ದು ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಸ್ಪಷ್ಟಪಡಿಸಿದ್ದರು. ಆದ್ರೆ, ಇದೀಗ ಏಕಾಏಕಿ ಇದುವರೆಗೆ ಯಾವುದೇ ಮಾತುಕತೆ ಆಗಿಲ್ಲ ಎಂದು ಯಡಿಯೂರಪ್ಪ ಯುಟರ್ನ್​ ಹೊಡೆದಿದ್ದಾರೆ.

ಈ ಬಗ್ಗೆ ಇಂದು(ಸೆಪ್ಟೆಂಬರ್ 10) ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್​ವೈ, ಪ್ರಧಾನಿ ನರೇಂದ್ರ ಮೋದಿ ಬೇರೆ ವಿಷಯದಲ್ಲಿ ಬ್ಯುಸಿಯಾಗಿದ್ದಾರೆ. ಬಹುಶ ನಾಳೆ ಅಥವಾ ನಾಡಿದ್ದು ನಂತರ ಮಾತುಕತೆ ಆಗಬಹುದು. ಇದುವರೆಗೆ ಯಾವುದೇ ಮಾತುಕತೆ ಆಗಿಲ್ಲ, ಕಾದು ನೋಡುತ್ತೇವೆ.ಈ ಹಿಂದೆ ನಾನು ಹೇಳುವಾಗಲೂ ಒಂದು ರೂಪಕ್ಕೆ ಬಂದಿರಲಿಲ್ಲ. ಈಗಲೂ ಅಷ್ಟೇ ಮೈತ್ರಿ ವಿಚಾರ ಯಾವುದೇ ರೂಪಕ್ಕೆ ಬಂದಿಲ್ಲ. ಎಲ್ಲವನ್ನೂ ಪ್ರಧಾನಿ ಮೋದಿ, ಅಮಿತ್ ಶಾ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.

JDS ಬಿಜೆಪಿಯ ಬಿ ಟೀಂ ಎನ್ನುವುದು ನಿಜವಾಯ್ತು ಎನ್ನುವ ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಸಿಎಂ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ನಾನು ಮಾತಾಡಲು ಹೋಗಲ್ಲ. ಅಮಿತ್ ಶಾ ಜೊತೆ ನಾನು ಇನ್ನೂ ಮಾತಾಡಿಲ್ಲ ಎಂದರು.

ಮೊನ್ನೆ ಯಡಿಯೂರಪ್ಪ ಹೇಳಿದ್ದೇನು?

ಬೆಂಗಳೂರಿನಲ್ಲಿ ಈ ಮೈತ್ರಿ ಬಗ್ಗೆ ಸೆಪ್ಟೆಂಬರ್ 08 ಸುದ್ದಿಗಾರರೊಂದಿಗೆ ಮಾತನಾಡಿದ್ದ ಯಡಿಯೂರಪ್ಪ, ಜೆಡಿಎಸ್​ ಜೊತೆ ಮೈತ್ರಿಗೆ ಹೈಕಮಾಂಡ್ ಒಲವು ತೋರಿಸಿದ್ದು, ಮೈತ್ರಿ ಮಾಡಿಕೊಳ್ಳಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಒಪ್ಪಿಗೆ ನೀಡಿದ್ದಾರೆ. ಈ ಬಗ್ಗೆ ರಾಜ್ಯ ಬಿಜೆಪಿ ನಾಯಕರಿಗೆ ಮಾಹಿತಿ ರವಾನಿಸಿದ್ದು, JDS ಜೊತೆಗಿನ ಮೈತ್ರಿ ಪಕ್ಷಕ್ಕೆ ಸಹಕಾರಿಯಾಗಲಿದೆ ಎಂದು ಹೇಳಿದ್ದರು. ಇದರೊಂದಿಗೆ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯಾಗುವುದನ್ನು ಖಚಿತಪಡಿಸಿದ್ದರು. ಆದ್ರೆ, ಇದೀಗ ಬಿಎಸ್​ವೈ ಉಲ್ಟಾ ಹೊಡೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist