ಹೊಳೆಗೆ ಬಿದ್ದ ಬಸ್ - 12 ಮಂದಿ ಮೃತ್ಯು
ತೆಗುಸಿಗಲ್ಪಾ: ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಸೇತುವೆಗೆ ಡಿಕ್ಕಿ ಹೊಡೆದು ಹೊಳೆಗೆ ಬಿದ್ದ ಪರಿಣಾಮ ಕನಿಷ್ಠ 12 ಜನರು ಸಾವನ್ನಪ್ಪಿದ್ದು ಎರಡು ಡಜನ್‌ಗೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಹೊಂಡುರಾಸ್‌ನಲ್ಲಿ ಮಂಗಳವಾರ ಸಂಭವಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಸುಮಾರು 60 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್, ಮಧ್ಯ ಅಮೇರಿಕಾ ದೇಶದ ರಾಜಧಾನಿ ತೆಗುಸಿಗಲ್ಪಾದಿಂದ ಸುಮಾರು 41 ಕಿಲೋಮೀಟರ್ ದೂರದಲ್ಲಿ ಸೇತುವೆಗೆ ಡಿಕ್ಕಿ ಹೊಡೆದು ಹೊಳೆಗೆ ಬಿದ್ದಿದೆ.
ಘಟನೆಯಲ್ಲಿ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ತೆಗುಸಿಗಲ್ಪಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ” ಎಂದು ಅಗ್ನಿಶಾಮಕ ದಳದ ಲೆಫ್ಟಿನೆಂಟ್ ಕ್ರಿಸ್ಟಿಯನ್ ಸೆವಿಲ್ಲಾ ಸುದ್ದಿ ಸಂಸ್ಥೆ ರಾಯಿಟರ್ಸ್ ಉಲ್ಲೇಖಿಸಿದೆ.
ಗಂಭೀರವಾಗಿ ಗಾಯಗೊಂಡವರನ್ನು ಆಂಬ್ಯುಲೆನ್ಸ್ ಮತ್ತು ಹೆಲಿಕಾಪ್ಟರ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಸ್ಪತ್ರೆಗೆ ದಾಖಲಾದವರಲ್ಲಿ ಎಂಟು ಮಂದಿಯ ಸ್ಥಿತಿ ಚಿಂತಾಜನಕವಾಗಿದೆ.
ಘಟನೆಯಿಂದ ಮೃತಪಟ್ಟ ಹಿನ್ನೆಲೆಯಲ್ಲಿ ಸರಕಾರ ಮೂರು ದಿನಗಳ ಶೋಕಾಚರಣೆ ನಡೆಸಲಿದೆ ಎಂದು ಅಧ್ಯಕ್ಷ ಕ್ಸಿಯೋಮಾರಾ ಕ್ಯಾಸ್ಟ್ರೋ ಅವರು ಹೇಳಿದ್ದಾರೆ.
ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ – 11 ಸಾವು, 12 ಪರ್ವತಾರೋಹಿಗಳು ನಾಪತ್ತ
ಜಕಾರ್ತ: ಇಂಡೋನೇಷ್ಯಾದ (Indonesia) ಮೌಂಟ್ ಮರಾಪಿಯಲ್ಲಿ (Mount Marapi) ಜ್ವಾಲಾಮುಖಿ (Volcano) ಸ್ಫೋಟಗೊಂಡಿದ್ದು, ಈ ವೇಳೆ 11 ಪರ್ವತಾರೋಹಿಗಳು ಸಾವನ್ನಪ್ಪಿದ್ದಾರೆ. 12ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಭಾನುವಾರ ಪಶ್ಚಿಮ ಸುಮಾತ್ರಾದಲ್ಲಿ ಜ್ವಾಲಾಮುಖಿ ಸ್ಫೋಟಗೊಂಡಿದೆ. ಈ ಸಂದರ್ಭ ಅಲ್ಲಿ 75 ಜನರು ಇದ್ದರು. ಜ್ವಾಲಾಮುಖಿ ಸ್ಫೋಟದ ಬಳಿಕ ರಕ್ಷಣಾ ತಂಡಗಳು ಧಾವಿಸಿದ್ದು, ಅದರಲ್ಲಿ 14 ಜನರನ್ನು ಸುರಕ್ಷಿತವಾಗಿ ಕರೆತಂದಿದ್ದೇವೆ. ಮೊದಲು ನಾಪತ್ತೆಯಾಗಿದ್ದವರಲ್ಲಿ ಮೂವರನ್ನು ಜೀವಂತವಾಗಿ ಪತ್ತೆ ಮಾಡಿದ್ದೇವೆ. 11 ಜನರು ಶವವಾಗಿ ಪತ್ತೆಯಾಗಿದ್ದಾರೆ. ಇನ್ನೂ ನಾಪತ್ತೆಯಾದವರ ಪತ್ತೆಗೆ ಕಾರ್ಯಾಚರಣೆ ಮುಂದುವರಿಸಲಾಗುತ್ತಿದೆ ಎಂದು ರಕ್ಷಣಾ ಏಜೆನ್ಸಿಯ ಮುಖ್ಯಸ್ಥ ಅಬ್ದುಲ್ ಮಲಿಕ್ ತಿಳಿಸಿದ್ದಾರೆ.
ಭಾನುವಾರ ಸಂಭವಿಸಿದ ಜ್ವಾಲಾಮುಖಿ ಸ್ಫೋಟದ ವೀಡಿಯೋ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಜ್ವಾಲಾಮುಖಿಯಿಂದಾದ ದಟ್ಟವಾದ ಹೊಗೆ ಆಕಾಶದಲ್ಲಿ ಹರಡಿರುವುದು, ರಸ್ತೆ, ವಾಹನಗಳು ಜ್ವಾಲಾಮುಖಿಯ ಬೂದಿಯಿಂದ ಆವೃತವಾಗಿರುವುದು ಕಂಡುಬಂದಿದೆ.
ಇಂಡೋನೇಷ್ಯಾ ಪೆಸಿಫಿಕ್ ಸಾಗರದ ರಿಂಗ್ ಆಫ್ ಫೈರ್‌ನ ಅಂಚಿನಲ್ಲಿ ಬರುತ್ತದೆ. ದೇಶದ ಜ್ವಾಲಾಮುಖಿ ಏಜೆನ್ಸಿಯ ಪ್ರಕಾರ ಮೌಂಟ್ ಮರಾಪಿ ಸುಮಾರು 2,891 ಅಡಿ ಎತ್ತರದಲ್ಲಿದ್ದು, ಇದೇ ರೀತಿಯ 127 ಸಕ್ರಿಯ ಜ್ವಾಲಾಮುಖಿಗಳು ಈ ಪ್ರದೇಶದಲ್ಲಿದೆ.