ಬಸ್- ವ್ಯಾನ್ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 7 ಮಂದಿ ಸಾವು!
ಜೈಪುರ: ರಾಜಸ್ಥಾನದ ಸಿಕಾರ್‌ನಿಂದ ನಾಗೌರ್‌ಗೆ ವಿವಾಹ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಎಂಟು ಆಸನಗಳ ಕಾರು ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ಏಳು ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಖುಂಖುನಾ ಪೊಲೀಸ್ ಠಾಣೆ ವ್ಯಾಪ್ತಿಯ ಬಂಥಾರಿ ಬಳಿ ನಡೆದಿದೆ.
ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಬಂಗಾರ್ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಜೈಪುರಕ್ಕೆ ರವಾನಿಸಲಾಗಿದೆ ಎಂದು ಹೇಳಿದರು. ದೀದ್ವಾನಾ ಜಿಲ್ಲೆಯಲ್ಲಿ ಶನಿವಾರ ತೀವ್ರವಾಗಿ ಗಾಯಗೊಂಡ ಇಬ್ಬರಲ್ಲಿ ಆರು ವರ್ಷದ ಬಾಲಕನೂ ಸೇರಿದ್ದಾನೆ.
ಪೊಲೀಸರ ಪ್ರಕಾರ, ರಾತ್ರಿ 7 ಗಂಟೆಗೆ ನಾಗೌರ್‌ನಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ವಿಸ್ತೃತ ಕುಟುಂಬದ ಕೆಲವು ಸದಸ್ಯರು ಭಾಗವಹಿಸಲು ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಇದ್ದಕ್ಕಿದ್ದಂತೆ ಎದುರಿನಿಂದ ಬಂದ ಬಸ್ ಅವರ ಕಾರಿಗೆ ಡಿಕ್ಕಿ ಹೊಡೆದಿದೆ. “ಕಾರಿನ ಮುಂಭಾಗದ ಭಾಗವು ಕೆಟ್ಟದಾಗಿ ಜಖಂಗೊಂಡಿದೆ ಮತ್ತು ಎಲ್ಲಾ ಪ್ರಯಾಣಿಕರು ವಾಹನದೊಳಗೆ ಸಿಲುಕಿಕೊಂಡರು” ಎಂದು ಖುಂಖುನಾ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಲೋಹದ ಕಟ್ಟರ್‌ಗಳ ಸಹಾಯದಿಂದ ಸಿಕ್ಕಿಬಿದ್ದ ಪ್ರಯಾಣಿಕರನ್ನು ಹೊರಕ್ಕೆ ತರಲಾಯಿತು. ಆದರೆ ಅವರೆಲ್ಲರೂ ಅದಾಗಲೇ ಮೃತಪಟ್ಟಿದ್ದರು.
ಮೃತರನ್ನು ಶಾರುಖ್ (22), ಸದ್ದಾಂ (28), ಮೊಹಮ್ಮದ್ ತೋಹಿತ್ (15), ಮೊಹಮ್ಮದ್ ಜುಬರ್ (18), ಆಸಿಫ್ (30), ಮೊಹಮ್ಮದ್ (17), ಮತ್ತು ಮೊಹಮ್ಮದ್ ರಶೀದ್ (21) ಎಂದು ಗುರುತಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ವಿದ್ಯುತ್ ಪ್ರವಹಿಸಿ ದಂಪತಿ, ಮೊಮ್ಮಗಳು ಸಾವು
ಬೆಳಗಾವಿ, ಆ.12: ವಿದ್ಯುತ್ ಪ್ರವಹಿಸಿ(Electrocution) ದಂಪತಿ ಹಾಗೂ ಮೊಮ್ಮಗಳು ಸ್ಥಳದಲ್ಲೇ ಮೃತಪಟ್ಟ ಹೃದಯವಿದ್ರಾವಕ ಘಟನೆ ಬೆಳಗಾವಿಯ ಶಾಹುನಗರದಲ್ಲಿ ನಡೆದಿದೆ(Death). ಪತಿ ಈರಪ್ಪ ರಾಠೋಡ(53), ಪತ್ನಿ ಶಾಂತವ್ವ ರಾಠೋಡ(45) ಮೊಮ್ಮಗಳು ಅನ್ನಪೂರ್ಣಾ ರಾಠೋಡ(13) ಮೃತ ದುರ್ದೈವಿಗಳು.
ಬೆಳಗಾವಿ ನಗರದಲ್ಲಿ ಬೆಳಂ ಬೆಳಗ್ಗೆ ಘನಘೋರ ದುರಂತ ಸಂಭವಿಸಿದೆ. ನಿರ್ಮಾಣ ಹಂತದ ಕಟ್ಟಡದಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿದ್ದ ಈರಪ್ಪ ಮೋಟರ್ ಆನ್ ಮಾಡಲು ಹೋಗಿದ್ದಾಗ ವಿದ್ಯುತ್ ಶಾಕ್ ಹೊಡೆದಿದೆ.
ಈ ವೇಳೆ ವಿದ್ಯುತ್ ಪ್ರವಹಿಸಿ ನೆಲಕ್ಕೆ ಬಿದ್ದು ಒದ್ದಾಡುತ್ತಿದ್ದ ಪತಿ ಈರಪ್ಪ ರಕ್ಷಣೆಗೆ ಹೋದ ಪತ್ನಿ ಶಾಂತವ್ವ ಹಾಗೂ ಮೊಮ್ಮಗಳು ಅನ್ನಪೂರ್ಣಾಗೂ ವಿದ್ಯುತ್ ಪ್ರವಹಿಸಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ರಾಮದುರ್ಗ ತಾಲೂಕಿನ ಅರಬೆಂಚಿ ತಾಂಡಾ ನಿವಾಸಿಗಳು. ಘಟನಾ ಸ್ಥಳಕ್ಕೆ ಬೆಳಗಾವಿಯ ಎಪಿಎಂಸಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಸಚಿವೆ ಹೆಬ್ಬಾಳ್ಕರ್
ಇನ್ನು ಈ ಘಟನೆ ಸಂಬಂಧ ಕಟ್ಟಡದ ಮಾಲೀಕ, ಇಂಜಿನಿಯರ್ ವಿರುದ್ಧ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ. ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಘಟನಾ ಸ್ಥಳಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.