ಭಾನುವಾರ, ಮೇ 5, 2024
ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!-ಕ್ರಿಸ್ ಗೇಲ್ ದಾಖಲೆ ಮುರಿದ RCB ನಾಯಕ ಫಾಫ್ ಡುಪ್ಲೆಸಿಸ್!-ಕೆರೆ ಮೀನು ತಿಂದು ಇಬ್ಬರು ಮೃತ: ಹಲವರು ಅಸ್ವಸ್ಥ-ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

CAA : ಸಿಎಎ ಜಾರಿ ಬಗ್ಗೆ ಇಂದು ರಾತ್ರಿ ಅದಿಸೂಚನೆ ಪ್ರಕಟಣೆ ಸಾಧ್ಯತೆ.!

Twitter
Facebook
LinkedIn
WhatsApp
CAA; ಸಿಎಎ ಜಾರಿ ಬಗ್ಗೆ ಇಂದು ರಾತ್ರಿ ಅದಿಸೂಚನೆ ಪ್ರಕಟಣೆ ಸಾಧ್ಯತೆ.!

ಕೇಂದ್ರ ಸರ್ಕಾರ ಇಂದು ಪೌರತ್ವ ತಿದ್ದುಪಡಿ ಕಾಯ್ದೆ (CAA) ನಿಯಮಗಳನ್ನು ತಿಳಿಸುವ ಸಾಧ್ಯತೆ ಇದೆ ಎಂದು ವರದಿ ಹೇಳಿದೆ. ಕೇಂದ್ರ ಗೃಹಸಚಿವ ಅಮಿತ್​​ ಶಾ ( Amit Shah) ಈ ಹಿಂದೆ ಲೋಕಸಭೆ ಚುನಾವಣೆಗೂ ಮುನ್ನ ಸಿಎಎಯನ್ನು ಜಾರಿಗೆ ತರುತ್ತೇವೆ ಎಂದು ಹೇಳಿದರು. ಕಾಯ್ದೆಯಿಂದ ಯಾರಿಗೂ ತೊಂದರೆ ಇಲ್ಲ, ಅದರಲ್ಲೂ ಅಲ್ಪಸಂಖ್ಯಾತರಿಗೆ ಯಾವ ಸಮಸ್ಯೆಯು ಆಗುವುದಿಲ್ಲ. ಈ ಕಾಯ್ದೆ ಪೌರತ್ವ ನೀಡುವುದೆ, ಹೊರತು ಕಿತ್ತುಕೊಳ್ಳುವುದಲ್ಲ. ರಾಜಕೀಯ ಲಾಭಕ್ಕಾಗಿ ವಿರೋಧ ಪಕ್ಷಗಳನ್ನು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಮುಸ್ಲಿಂ ಸಹೋದರರ ದಾರಿ ತಪ್ಪಿಸುತ್ತಿದ್ದಾರೆ ಎಂದು ಹೇಳಿದ್ದರು. ಇಂದು ಸಿಎಎ ಬಗ್ಗೆ ನಿಯಮಗಳನ್ನು ಜಾರಿ ಮಾಡುವ ಸಾಧ್ಯತೆಗಳು ಇದೆ ಎಂದು ಸರ್ಕಾರದ ಮೂಲಗಳು ತಿಳಿಸಿದೆ. ಈ ಕಾಯ್ದೆಯಲ್ಲಿ ಯಾವೆಲ್ಲ ನಿಯಮಗಳು ಇದೆ ಎಂಬುದನ್ನು ಇಂದು ರಾತ್ರಿ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇನ್ನು ಪ್ರಧಾನಿ ಮೋದಿ ಅವರು ಇಂದು ಸಂಜೆ ದೇಶವನ್ನುದ್ದೇಶಿ ಮಾತನಾಡಲಿದ್ದಾರೆ. ಈ ಸಂದರ್ಭದಲ್ಲಿ ಸಿಎಎ ಬಗ್ಗೆ ಉಲ್ಲೇಖಿಸುವ ಸಾಧ್ಯತೆಗಳು ಇದೆ ಎಂದು ಹೇಳಲಾಗಿದೆ

ಈ ಕಾಯ್ದೆಯಿಂದ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಹಿಂದೂ, ಸಿಖ್, ಜೈನ ಬೌದ್ಧ, ಕ್ರಿಶ್ಚಿಯನ್ ಮತ್ತು ಪಾರ್ಸಿ ನಿರಾಶ್ರಿತರಿಗೆ ಭಾರತೀಯ ಪೌರತ್ವವನ್ನು ಪಡೆಯಲು ಕಾನೂನು ಸುಲಭಗೊಳಿಸುತ್ತದೆ. ಡಿಸೆಂಬರ್ 31, 2014 ರ ಮೊದಲು ಭಾರತಕ್ಕೆ ಬಂದಿರುವ ಈ ದೇಶಗಳ ಮುಸ್ಲಿಮೇತರ ವಲಸಿಗರಿಗೆ ಪೌರತ್ವ ನೀಡುವ ಉದ್ದೇಶವನ್ನು ಈ ಕಾನೂನು ಹೊಂದಿದೆ ಎಂದು ಶಾ ಹೇಳಿದ್ದರು.

ಇನ್ನು ಈ ಕಾನೂನು 2019ರಲ್ಲಿ  ಜಾರಿಗೆ ಬಂದ ನಂತರ, ದೇಶದ ಹಲವಾರು ಭಾಗಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದವು. ಕಳೆದ ತಿಂಗಳು, ಸಿಎಎ ಕಾನೂನನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಅಮಿತ್ ಶಾ ಹೇಳಿದ್ದರು. ಇದು ಚುನಾವಣೆಗೂ ಮುನ್ನ ಜಾರಿಯಾಗಲಿದೆ. ಇದು ದೇಶದ ಕಾನೂನು, ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಈ ಕಾನೂನಿಗೆ ಈಗಾಗಲೇ ಅಡಿಪಾಯ ಹಾಕಲಾಗಿದೆ ಎಂದಿದ್ದರು.

 

ಸಿಎಎ ದೇಶದ ಕಾಯಿದೆ, ಚುನಾವಣೆಯ ಮೊದಲು ಅದನ್ನು ಜಾರಿಗೊಳಿಸಲಾಗುವುದು. ಅದರ ಸುತ್ತ ಯಾವುದೇ ಗೊಂದಲ ಇರಬಾರದು. ಈ ಕಾನೂನಿನ ಬಗ್ಗೆ ನಮ್ಮ ದೇಶದಲ್ಲಿ ಅಲ್ಪಸಂಖ್ಯಾತರು ಮತ್ತು ವಿಶೇಷವಾಗಿ ನಮ್ಮ ಮುಸ್ಲಿಂ ಸಮುದಾಯವನ್ನು ಪ್ರಚೋದಿಸಲಾಗುತ್ತಿದೆ. CAA ಯಾರ ಪೌರತ್ವವನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ. ಹಾಗೂ ಈ ಕಾನೂನಿನಲ್ಲಿ ಇದಕ್ಕೆ ಅವಕಾಶವಿಲ್ಲ. ಸಿಎಎ ಬಾಂಗ್ಲಾದೇಶ ಮತ್ತು ಪಾಕಿಸ್ತಾನದಲ್ಲಿ ಕಿರುಕುಳಕ್ಕೊಳಗಾದ ನಿರಾಶ್ರಿತರಿಗೆ ಪೌರತ್ವವನ್ನು ಒದಗಿಸುವ ಕಾಯಿದೆ ಎಂದು ಅಮಿತ್ ಶಾ ಹೇಳಿದ್ದರು.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ