ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕೆನಡಾದ ಪ್ರಜೆಗಳಿಗೆ ಭಾರತೀಯ ವೀಸಾ ಸೇವೆ ಸ್ಥಗಿತ!

Twitter
Facebook
LinkedIn
WhatsApp
ಕೆನಡಾದ ಪ್ರಜೆಗಳಿಗೆ ಭಾರತೀಯ ವೀಸಾ ಸೇವೆ ಸ್ಥಗಿತ!

ನವದೆಹಲಿ: ಭಾರತ (India) ಹಾಗೂ ಕೆನಡಾ (Canada) ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಮೂಡಿರುವ ಹಿನ್ನೆಲೆ ಕೆನಡಾದ ಪ್ರಜೆಗಳಿಗೆ ಭಾರತೀಯ ವೀಸಾ (Visa) ಸೇವೆಯನ್ನು ಗುರುವಾರದಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಜೂನ್‌ನಲ್ಲಿ ಕೆನಡಾದಲ್ಲಿ ನಡೆದ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ (Hardeep Singh Nijjar) ಹತ್ಯೆಯ ಹಿಂದೆ ಭಾರತದ ಕೈವಾಡವಿದೆ ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೋ (Justin Trudeau) ಆರೋಪಿಸಿದ್ದಾರೆ. ಈ ಹೇಳಿಕೆ ಬೆನ್ನಲ್ಲೇ ಉಭಯ ದೇಶಗಳ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಮೂಡಿದ್ದು, ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ.

ಈ ಬಗ್ಗೆ ವೀಸಾ ಸಲಹೆಗಳನ್ನು ಒದಗಿಸುವ ಭಾರತದ ಆನ್‌ಲೈನ್ ವೀಸಾ ಅರ್ಜಿ ಕೇಂದ್ರ ಬಿಎಲ್‌ಎಸ್ ಇಂಟರ್‌ನ್ಯಾಷನಲ್ ತನ್ನ ವೆಬ್‌ಸೈಟ್‌ನಲ್ಲಿ ಸೂಚನೆಯನ್ನು ಪೋಸ್ಟ್ ಮಾಡಿದೆ. ಭಾರತೀಯ ಮಿಷನ್‌ನಿಂದ ಪ್ರಮುಖ ಸೂಚನೆ: ಕಾರ್ಯಾಚರಣೆಯ ಕಾರಣಗಳಿಂದಾಗಿ 2023ರ ಸೆಪ್ಟೆಂಬರ್ 21ರಿಂದ ಜಾರಿಗೆ ಬರುವಂತೆ ಭಾರತೀಯ ವೀಸಾ ಸೇವೆಗಳನ್ನು ಮುಂದಿನ ಸೂಚನೆಯ ತನಕ ಸ್ಥಗಿತಗೊಳಿಸಲಾಗಿದೆ ಎಂದು ಬರೆದಿದೆ.

ಕೆನಡಾದ ಪ್ರಧಾನಿ ಟ್ರುಡೋ ಸೋಮವಾರ ಸಂಸತ್ತಿನಲ್ಲಿ ಮಾತನಾಡುತ್ತಾ, ಖಲಿಸ್ತಾನ್ ಟೈಗರ್ ಫೋರ್ಸ್ ಮುಖ್ಯಸ್ಥ ಹರ್ದೀಪ್ ಸಿಂಗ್ ನಿಜ್ಜರ್‌ನ ಮಾರಣಾಂತಿಕ ಗುಂಡಿನ ದಾಳಿಯ ಹಿಂದೆ ಭಾರತೀಯ ಏಜೆಂಟರ ಕೈವಾಡವಿದೆ ಎಂದು ಆರೋಪಿಸಿದ್ದರು. ಆದರೆ ಈ ಆರೋಪವನ್ನು ಭಾರತ ತಳ್ಳಿ ಹಾಕಿದೆ. ನಾವು ತಮ್ಮ ಸಂಸತ್ತಿನಲ್ಲಿ ಕೆನಡಾ ಪ್ರಧಾನಿಯವರ ಹೇಳಿಕೆಯನ್ನು ಗಮನಿಸಿದ್ದೇವೆ ಹಾಗೂ ಅದನ್ನು ತಿರಸ್ಕರಿಸುತ್ತೇವೆ. ಮತ್ತು ಅವರ ವಿದೇಶಾಂಗ ಸಚಿವರ ಹೇಳಿಕೆನ್ನೂ ತಿರಸ್ಕರಿಸುತ್ತೇವೆ ಎಂದು ಭಾರತದ ವಿದೇಶಾಂಗ ಸಚಿವಾಲಯ (MEA) ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಕೆನಡಾದಲ್ಲಿ ಗ್ಯಾಂಗ್‌ವಾರ್‌ – ಖಲಿಸ್ತಾನಿ ಭಯೋತ್ಪಾದಕ ಹತ್ಯೆ

ಒಟ್ಟಾವಾ: ಕೆನಡಾದಲ್ಲಿ (Canada) ನಡೆದ ಗ್ಯಾಂಗ್‌ವಾರ್‌ನಲ್ಲಿ ಖಲಿಸ್ತಾನಿ ಭಯೋತ್ಪಾದಕ ಸುಖ ಡುನೆಕೆ ಹತ್ಯೆಯಾಗಿದ್ದಾನೆ. ಡುನೆಕೆ ಕೆನಡಾದಲ್ಲಿ ಖಲಿಸ್ತಾನ್ ಚಳವಳಿಯ ಭಾಗವಾಗಿದ್ದ ಎನ್ನಲಾಗಿದೆ.

ಡುನೆಕೆ ಕೆನಡಾ ಮೂಲದ ದರೋಡೆಕೋರ ಅರ್ಶ್‌ದೀಪ್ ಸಿಂಗ್ ಅಲಿಯಾಸ್ ಅರ್ಶ್ ದಲಾನೊಂದಿಗೆ ನಿಕಟ ಸಂಪರ್ಕ ಹೊಂದಿದ್ದ.

ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್‌ ಹತ್ಯೆಗೂ ಭಾರತೀಯ ಸರ್ಕಾರಿ ಏಜೆಂಟರಿಗೂ ಸಂಬಂಧವಿದೆ ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಈ ವಾರದ ಆರಂಭದಲ್ಲಿ ಹೌಸ್ ಆಫ್ ಕಾಮನ್ಸ್‌ನಲ್ಲಿ ಹೇಳಿದ್ದರು. ಈ ಹೇಳಿಕೆ ಭಾರತ-ಕೆನಡಾ ನಡುವಿನ ರಾಜತಾಂತ್ರಿಕ ಬಿಕ್ಕಟ್ಟಿಗೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಡುನೆಕೆ ಹತ್ಯೆಯಾಗಿದೆ.

ನಿಜ್ಜರ್ ಭಾರತೀಯ ಭಯೋತ್ಪಾದಕ ಮತ್ತು ನಿಷೇಧಿತ ಖಲಿಸ್ತಾನ್ ಟೈಗರ್ ಫೋರ್ಸ್ (ಕೆಟಿಎಫ್) ಮುಖ್ಯಸ್ಥನಾಗಿದ್ದ. ಜೂನ್ 18 ರಂದು ಬ್ರಿಟಿಷ್ ಕೊಲಂಬಿಯಾದ ಸರ್ರೆಯ ಗುರುದ್ವಾರದ ಹೊರಗೆ ಹತ್ಯೆಗೀಡಾಗಿದ್ದ. ಈತ ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾಗಿದ್ದ.

ಕೆನಡಾದಲ್ಲಿ ಹೆಚ್ಚುತ್ತಿರುವ ಭಾರತ-ವಿರೋಧಿ ಚಟುವಟಿಕೆಗಳು, ದ್ವೇಷದ ಅಪರಾಧಗಳು ಮತ್ತು ಕ್ರಿಮಿನಲ್ ಹಿಂಸಾಚಾರದ ಹಿನ್ನೆಲೆಯಲ್ಲಿ ಅಲ್ಲಿನ ಭಾರತೀಯರಿಗೆ ಜಾಗರೂಕರಾಗಿರಲು ಸಲಹೆ ನೀಡಲಾಗಿದೆ.

ಭಾರತ ಮತ್ತು ಕೆನಡಾ ರಾಷ್ಟ್ರಗಳ ನಡುವೆ ಬಿಕ್ಕಟ್ಟು ತಲೆದೋರಿದೆ. ಈ ನಡುವೆ, ಗಾಯಕ ಸಿಧು ಮೂಸೆವಾಲಾ ಅವರನ್ನು ಕೊಂದ ಆರೋಪ ಹೊತ್ತಿರುವ ದರೋಡೆಕೋರ ಗೋಲ್ಡಿ ಬ್ರಾರ್‌ನ ಸಹಚರರ ಮೇಲೆ ಪಂಜಾಬ್ ಪೊಲೀಸರು ಕಠಿಣ ಕ್ರಮಗಳನ್ನು ಕೈಗೊಂಡಿದ್ದಾರೆ. ಗೋಲ್ಡಿ ಬ್ರಾರ್ ಖಲಿಸ್ತಾನಿ ಪ್ರತ್ಯೇಕತಾವಾದಿ ಚಳವಳಿಯೊಂದಿಗೆ ನಿಕಟ ಸಂಪರ್ಕ ಹೊಂದಿದ್ದು, ಕೆನಡಾದಲ್ಲಿ ತಲೆಮರೆಸಿಕೊಂಡಿದ್ದಾನೆ ಎನ್ನಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist