- ಬೆಂಗಳೂರು
- 9:41 ಫೂರ್ವಾಹ್ನ
- ಸೆಪ್ಟೆಂಬರ್ 18, 2023
ಕಾರಿನ ಟೈಯರ್ ಬ್ಲಾಸ್ಟ್ – ಅಪಘಾತದಲ್ಲಿ ಮೂವರು ಸಾವು

ಬೆಂಗಳೂರು: ಚಲಿಸುತ್ತಿದ್ದ ಕಾರಿನ (Car) ಟೈಯರ್ ಸ್ಫೋಟಗೊಂಡು (Tire Blast) ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿರುವ ಘಟನೆ ಬೆಂಗಳೂರು (Bengaluru) ಉತ್ತರ ತಾಲೂಕಿನ ಅಂಚೆಪಾಳ್ಯ ಬಳಿ ನಡೆದಿದೆ.
ಕಾರು ತುಮಕೂರು ಮಾರ್ಗವಾಗಿ ಬೆಂಗಳೂರಿಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರಿನ ಚಕ್ರ ಬ್ಲಾಸ್ಟ್ ಆದ ಪರಿಣಾಮ ಅಪಘಾತ ಸಂಭವಿಸಿ ಕಾರು ನಜ್ಜುಗುಜ್ಜಾಗಿದೆ. ಮೃತರನ್ನು ಅಗಸ್ಟಿನ್, ದಾರಾರೆಡ್ಡಿ ಎಂದು ಗುರುತಿಸಲಾಗಿದೆ. ಮತ್ತೊಬ್ಬನ ಗುರುತು ಪತ್ತೆಯಾಗಿಲ್ಲ.
ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅವಘಡ ಸಂಭವಿಸಿದ್ದು, ನೆಲಮಂಗಲ (Nelamangala) ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಖಾಸಗಿ ಬಸ್ಗಳ ರೇಸ್ಗೆ ಬೈಕ್ ಸವಾರರಿಗೆ ಅಪಘಾತ
ಮಂಗಳೂರು: ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಹೊಸಬೆಟ್ಟು ಜಂಕ್ಷನ್ನಲ್ಲಿ ಖಾಸಗಿ ಬಸ್ಗಳ ರೇಸ್ ನಡೆದಿತ್ತು. ಈ ವೇಳೆ ಒಂದು ಬಸ್ ಬೈಕ್ ಡಿಕ್ಕಿ ಹೊಡೆದಿದೆ. ಬೈಕ್ ನಲ್ಲಿದ್ದ ಅಬ್ದುಲ್ ಖಾದರ್ ಅರ್ಫಾನ್ ಗೆ ಗಂಭೀರ ಗಾಯಗಳಾಗಿದ್ದು, ಅಮೀರ್ ಸಾಹಿಲ್ ಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖಾಸಗಿ ಬಸ್ಗಳ ಮೇಲೆ ಕಠಿಣ ಕ್ರಮಕ್ಕೆ ರಾಜ್ಯ ಸಂಚಾರಿ ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ.