ಭಾನುವಾರ, ನವೆಂಬರ್ 24, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಂಡಾಯ ಅಭ್ಯರ್ಥಿ ಕೆಎಸ್ ಈಶ್ವರಪ್ಪ ವಿರುದ್ಧ ಕೇಸ್ ದಾಖಲು...!

Twitter
Facebook
LinkedIn
WhatsApp
ಬಂಡಾಯ ಅಭ್ಯರ್ಥಿ ಕೆಎಸ್ ಈಶ್ವರಪ್ಪ ವಿರುದ್ಧ ಕೇಸ್ ದಾಖಲು...!

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಂಡಾಯ ಅಭ್ಯರ್ಥಿ ಕೆಎಸ್​​ ಈಶ್ವರಪ್ಪ (KS Eshwarappa) ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಜಿಲ್ಲೆಯ ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ಶಿಕಾರಿಪುರದಲ್ಲಿ ಮಾ.24ರಂದು ನಿಯಮ ಮೀರಿ ಬೈಕ್‌ ರ್‍ಯಾಲಿ ನಡೆಸಿದ್ದರು. 10 ಬೈಕ್‌, ಒಂದು ಜೀಪ್‌ಗೆ ಮಾತ್ರ ಅನುಮತಿ ಪಡೆದಿದ್ದರು. ಆದರೆ ರ್‍ಯಾಲಿಯಲ್ಲಿ 50ಕ್ಕೂ ಹೆಚ್ಚು ಬೈಕ್‌ಗಳು, 4 ಕಾರು ಭಾಗಿ ಹಿನ್ನೆಲೆ ಚುನಾವಣಾಧಿಕಾರಿ ದೂರಿನ ಮೇರೆಗೆ ಈಶ್ವರಪ್ಪ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ. ಬೈಕ್‌ಗಳ ಮೇಲೆ ಓಂ ಬಾವುಟ ಕಟ್ಟಿಕೊಂಡು ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆ.

ರಾಜ್ಯದ 20 ಕ್ಷೇತ್ರಗಳಿಗೆ ಬಿಜೆಪಿ ಪಟ್ಟಿ ಬಿಡುಗಡೆ ಬೆನ್ನಲ್ಲೇ ಪಕ್ಷದೊಳಗೆ ಟಿಕೆಟ್ ವಂಚಿತರ ವಿರುದ್ಧ ಆಕ್ರೋಶ ಸ್ಫೋಟಗೊಂಡಿದೆ. ಅದ್ರಲ್ಲೂ ಪುತ್ರನಿಗೆ ಟಿಕೆಟ್ ಮಿಸ್ ಆದ್ಮೇಲೆ, ಬಿಎಸ್ ಯಡಿಯೂರಪ್ಪ ವಿರುದ್ಧ ಈಶ್ವರಪ್ಪ ಅಕ್ಷರಶಃ ಆಕ್ರೋಶ ಹೊರಹಾಕಿದ್ದರು. ತಮ್ಮ ಮುಂದಿನ ನಡೆ ಬಗ್ಗೆ ನಿರ್ಧಾರ ಕೈಗೊಳ್ಳಲು ಇತ್ತೀಚೆಗೆ ಶಿವಮೊಗ್ಗದಲ್ಲಿ ಬೆಂಬಲಿಗರ ಸಭೆ ನಡೆಸಿದ ಈಶ್ವರಪ್ಪ ಮಹತ್ವದ ನಿರ್ಣಯ ಕೈಗೊಂಡಿದ್ದರು. ಶಿವಮೊಗ್ಗದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯೋದಾಗಿ ಘೋಷಿಸಿದ್ದರು. ಪ್ರಾಣಹೋದ್ರೂ ಮೋದಿ ವಿರುದ್ಧ ಹೋಗಲ್ಲ ಎನ್ನುತ್ತಲೇ ಯಡಿಯೂರಪ್ಪ ವಿರುದ್ಧ ತೊಡೆತಟ್ಟಿದ್ದರು.

ಇನ್ನು ಟಿವಿ9 ಸಂದರ್ಶನದಲ್ಲಿ ಮಾತನಾಡಿರುವ ಈಶ್ವರಪ್ಪ ಮೋದಿ ಬಂದು ಹೇಳಿದ್ರು, ನಾನು ಹಿಂದೆ ಸರಿಯಲ್ಲ ಸ್ಪರ್ಧೆ ಮಾಡೇ ಮಾಡ್ತೀನಿ ಎಂದಿದ್ದರು. ಅಷ್ಟೇ ಅಲ್ಲ ಬಿಎಸ್ ಯಡಿಯೂರಪ್ಪ ಕುಟುಂಬದ ವಿರುದ್ಧ ಮತ್ತೆ ಗುಡುಗಿದ್ದಾರೆ. ಅತ್ತ ವಿಜಯೇಂದ್ರ, ಈಶ್ವರಪ್ಪ ಮಾತಿಗೆ ತಿರುಗೇಟು ನೀಡಿದ್ದರು.

ಲೋಕಸಭೆ ಚುನಾವಣೆಗೆ ಈಗಾಗಲೇ ಮೂಹೂರ್ತ ಫಿಕ್ಸ್ ಆಗಿದೆ. ಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕಾಗಿ ಬಂಡಾಯ ಅಭ್ಯರ್ಥಿ ಈಶ್ವರಪ್ಪ ಕಣಕ್ಕೆ ನಿಂತಿರುವುದು ಸದ್ಯ ಬಿಜೆಪಿ ಪಾಳಯದಲ್ಲಿ ಸಂಚಲ ಮೂಡಿಸಿದೆ. ಈಶ್ವರಪ್ಪ ಅವರ ನಡೆಯಿಂದ ಬಿಎಸ್ ಯಡಿಯೂರಪ್ಪ ಮತ್ತು ಬಿಜೆಪಿ ಕುಟುಂಬಕ್ಕೆ ತೀವ್ರ ಮುಜುರವಾಗುತ್ತಿದೆ. ಅಷ್ಟಕ್ಕೂ ಈಶ್ವರಪ್ಪ ಅವರನ್ನು ಕಟ್ಟಿಹಾಕುವುದು ಹೇಗೆ ಅಂತಾ ರಾಜ್ಯ ಬಿಜೆಪಿ ನಾಯಕರು ತಲೆಯಲ್ಲಿ ಹುಳು ಬಿಟ್ಟಿಕೊಂಡಂತಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ