ಭಾನುವಾರ, ಏಪ್ರಿಲ್ 21, 2024
ಬಂಟ್ವಾಳದಲ್ಲಿ ಮತ್ತೊಬ್ಬ ಬಿಲ್ಲವ ನಾಯಕನನ್ನು ಸೆಳೆದ ಬಿಜೆಪಿ. ಪುರಸಭಾ ಸದಸ್ಯ ಗಂಗಾಧರ ಪೂಜಾರಿ ಬಿಜೆಪಿ ಸೇರ್ಪಡೆ!-ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಲೋಕಸಭೆ ಚುನಾವಣೆ ಹೊತ್ತಿನಲ್ಲಿಯೇ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್ ಗೆ ಸಿಬಿಐ ಸಮನ್ಸ್.!

Twitter
Facebook
LinkedIn
WhatsApp
ಲೋಕಸಭೆ ಚುನಾವಣೆ ಹೊತ್ತಿನಲ್ಲಿಯೇ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್ ಗೆ ಸಿಬಿಐ ಸಮನ್ಸ್.!

ಲೋಕಸಭೆ ಚುನಾವಣೆಗೆ (Lok Sabha Election 2024) ಕೆಲವೇ ತಿಂಗಳು ಬಾಕಿ ಇವೆ. ಉತ್ತರ ಪ್ರದೇಶದಲ್ಲಿ ಮುನ್ನಡೆ ಸಾಧಿಸುವ ದಿಸೆಯಲ್ಲಿ ಇಂಡಿಯಾ ಒಕ್ಕೂಟದ (India Bloc) ಕಾಂಗ್ರೆಸ್‌ ಜತೆ ಸಮಾಜವಾದಿ ಪಕ್ಷವು ಮೈತ್ರಿ ಮಾಡಿಕೊಂಡಿದೆ. ಚುನಾವಣೆಗೆ ಈಗಾಗಲೇ ರಣತಂತ್ರ ರೂಪಿಸುತ್ತಿದೆ. ಇದರ ಬೆನ್ನಲ್ಲೇ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ (Akhilesh Yadav) ಅವರಿಗೆ ಸಿಬಿಐ ಸಮನ್ಸ್‌ (CBI Summons) ಜಾರಿ ಮಾಡಿದೆ. ಅಕ್ರಮವಾಗಿ ಗಣಿಗಾರಿಕೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಮನ್ಸ್‌ ನೀಡಿದೆ.

ಅಕ್ರಮ ಗಣಿಕಾರಿಕೆ ಪ್ರಕರಣದಲ್ಲಿ ಅಪರಾಧ ಪ್ರಕ್ರಿಯಾ ಸಂಹಿತೆ (CRPC) ಅಡಿಯಲ್ಲಿ ಸಮನ್ಸ್‌ ಜಾರಿಗೊಳಿಸಿದೆ. ಫೆಬ್ರವರಿ 29ರಂದು ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸೂಚಿಸಿದೆ. ಹಾಗಾಗಿ, ಲೋಕಸಭೆ ಚುನಾವಣೆ ಗೆಲುವಿಗೆ ರಣತಂತ್ರ ರೂಪಿಸುತ್ತಿರುವ ಅಖಿಲೇಶ್‌ ಯಾದವ್‌ ಅವರಿಗೆ ಸಂಕಷ್ಟ ಎದುರಾಗಿದೆ. ಫೆಬ್ರವರಿ 29ರಂದು ಸಿಬಿಐ ವಿಚಾರಣೆಗೆ ಅಖಿಲೇಶ್‌ ಯಾದವ್‌ ಅವರು ಹಾಜರಾಗುತ್ತಾರೋ, ಇಲ್ಲವೋ ಎಂಬುದರ ಕುರಿತು ಇದುವರೆಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಏನಿದು ಪ್ರಕರಣ? ಅಖಿಲೇಶ್‌ ಯಾದವ್‌ ಅವರು ಉತ್ತರ ಪ್ರೇದೇಶದ ಮುಖ್ಯಮಂತ್ರಿಯಾಗಿದ್ದಾಗ ಅಂದರೆ, 2012ರಿಂದ 2016ರ ಅವಧಿಯಲ್ಲಿ ಹಮೀರ್‌ಪುರ ಜಿಲ್ಲೆಯಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸಲು ಅನುಮತಿ ನೀಡಿದ್ದಾರೆ ಎಂಬ ಆರೋಪವಿದೆ. ಅಲ್ಲದೆ, ಕಾನೂನುಬಾಹಿರವಾಗಿ ಮರಳು ಗಣಿಗಾರಿಕೆಗೆ ಅನುಮತಿ, ಅಕ್ರಮವಾಗಿ ಮರಳು ಸಾಗಣೆ ಮಾಡುವವರ ಪರವಾನಗಿ ನವೀಕರಣ ಸೇರಿ ಹಲವು ಆರೋಪಗಳು ಎದುರಾಗಿವೆ. ಹಾಗಾಗಿ, ಅಖಿಲೇಶ್‌ ಯಾದವ್‌ ಅವರಿಗೆ ಸಿಬಿಐ ಸಮನ್ಸ್‌ ನೀಡಿದೆ ಎಂದು ತಿಳಿದುಬಂದಿದೆ.

ಕಾನೂನು ಬಾಹಿರವಾಗಿ ಗಣಿಗಾರಿಕೆಗೆ ಅನುಮತಿ ನೀಡಿದ ಪರಿಣಾಮ ರಾಜ್ಯ ಸರ್ಕಾರದ ಖಜಾನೆಗೆ ಭಾರಿ ನಷ್ಟವಾಗಿದೆ ಎಂದು ಹೇಳಲಾಗುತ್ತಿದೆ. ಖನಿಜ ಸಂಪನ್ಮೂಲಗಳನ್ನು ಹೊರತೆಗೆಯಲು ಕೂಡ ಅನುಮತಿ ನೀಡಿರುವುದು ಸಂಪನ್ಮೂಲದ ಹಾನಿಗೆ ಕಾರಣವಾಗಿದೆ. ಇದೇ ಪ್ರಕರಣಕ್ಕೆ ಸಂಬಂದಿಸಿದಂತೆ ಸಿಬಿಐ ಅಧಿಕಾರಿಗಳು 2019ರ ಮೇ 1ರಂದು ಹಮೀರ್‌ಪುರ, ನೊಯ್ಡಾ, ಕಾನ್ಪುರ, ಲಖನೌ ಸೇರಿ 12 ಕಡೆ ದಾಳಿ ನಡೆಸಿದ್ದರು. ದಾಳಿಯ ವೇಳೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮರಳು, ಚಿನ್ನ ಹಾಗೂ ಭಾರಿ ಪ್ರಮಾಣದ ನಗದು ಪತ್ತೆಯಾಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ