ಕುಮಾರಸ್ವಾಮಿ ಅವರು ಮಂಡ್ಯದಿಂದ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ ಎಂಬ ವರದಿಗಳು ಹರಿದಾಡುತ್ತಿದ್ದು, ಸೋಮವಾರ ಚನ್ನಪಟ್ಟಣದ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಅವರನ್ನು ಭೇಟಿ ಮಾಡಿ, ತಮ್ಮನ್ನು ಮತ್ತು ಕ್ಷೇತ್ರವನ್ನು ಕೈಬಿಡಬಾರದು. ವಿಧಾನಸಭೆಯಲ್ಲಿ ನಮ್ಮ ಕ್ಷೇತ್ರವನ್ನು ನೀವೆ ಪ್ರತಿನಿಧಿಸಬೇಕು ಎಂದು ಒತ್ತಾಯಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಏಪ್ರಿಲ್ 24 ರಿಂದ ಮಧ್ಯ ಮಾರಾಟ ನಿಷೇಧ; ಜಿಲ್ಲಾಡಳಿತ ಆದೇಶ.!
ಮಂಗಳೂರು : ಲೋಕಸಭಾ ಸಾರ್ವತ್ರಿಕ ಚುನಾವಣೆ 2024ಕ್ಕೆ ಸಂಬಂಧಿಸಿದಂತೆ ಏಪ್ರಿಲ್ 24ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಜಿಲ್ಲಾಡಳಿತ ನಿಷೇಧ ಹೇರಿ ಆದೇಶ ಹೊರಡಿಸಿದೆ.
ಚುನಾವಣಾ ಮತದಾನ ಹಾಗೂ ಮತ ಎಣಿಕಾ ಕಾರ್ಯ ನಡೆಯುವ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಏಪ್ರಿಲ್ 24ರ ಸಂಜೆ 6 ಗಂಟೆಯಿಂದ ಏಪ್ರಿಲ್ 26ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಮತ ಎಣಿಕೆಯ ದಿನ ಜೂನ್ 3ರಂದು ಮಧ್ಯರಾತ್ರಿ 12 ಗಂಟೆಯಿಂದ ಜೂನ್ 4ರಂದು ಮಧ್ಯರಾತ್ರಿ 12 ಗಂಟೆಯವರೆಗಿನ ಅವಧಿಯನ್ನು ಮಧ್ಯಮುಕ್ತ ದಿನಗಳು ಎಂದು ಘೋಷಿಸಲಾಗಿದೆ.
ಆ ದಿನಗಳಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿಗಳು, ಮದ್ಯ ಮಾರಾಟ ಡಿಪೆÇೀಗಳು, ಮದ್ಯ ತಯಾರಿಕಾ ಡಿಸ್ಟಿಲರಿಗಳು, ಸ್ಟಾರ್ ಹೋಟೆಲ್ ಗಳು ಹಾಗೂ ಶೇಂದಿ ಅಂಗಡಿಗಳನ್ನು ಮುಚ್ಚುವಂತೆ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಆದೇಶ ಹೊರಡಿಸಿದ್ದಾರೆ.
ಬೈಂದೂರು: ಲೋಕಸಭಾ ಚುನಾವಣೆ ಹಿನ್ನೆಲೆ ಜಿಲ್ಲೆಯಲ್ಲಿ ಮೇ.5 ರಿಂದ ಮದ್ಯ ಮಾರಾಟ ನಿಷೇಧ..!
ಶಿವಮೊಗ್ಗ-ಉಡುಪಿ ಲೋಕಸಭಾ ಕ್ಷೇತ್ರದ ಚುನಾವಣೆ-2024 ರ ಹಿನ್ನೆಲೆ, ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಮೇ 7 ರಂದು ಮತದಾನ ನಡೆಸಲು ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದೆ.
ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಶಾಂತಿಪಾಲನೆ, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಕರ್ನಾಟಕ ಅಬಕಾರಿ ಕಾಯ್ದೆ ಸಾಮಾನ್ಯ ನಿಯಮಾವಳಿ 1967 ಕಲಂ 10(ಬಿ) ರಂತೆ ಹಾಗೂ ಪ್ರಜಾ ಪ್ರಾತಿನಿಧ್ಯ ಕಾಯ್ದೆ 1951 ರ ಕಲಂ135(ಸಿ) ರ ಪ್ರಕಾರ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಮೇ 5 ರ ಸಂಜೆ 5 ಗಂಟೆಯಿಂದ ಮೇ 7 ರ ಮಧ್ಯರಾತ್ರಿ 12 ರ ವರೆಗೆ ಕುಂದಾಪುರ ಹಾಗೂ ಬೈಂದೂರು ತಾಲೂಕು ವ್ಯಾಪ್ತಿಯ ಎಲ್ಲಾ ರೀತಿಯ ಮದ್ಯದಂಗಡಿಗಳನ್ನು, ಮದ್ಯಮಾರಾಟ ಡಿಪೋಗಳನ್ನು, ಮದ್ಯ ತಯಾರಿಕಾ ಡಿಸ್ಟಿಲರಿಗಳನ್ನು. ಸ್ಟಾರ್ ಹೋಟೆಲ್ಗಳನ್ನು, ಶೇಂದಿ ಅಂಗಡಿಗಳನ್ನು ಹಾಗೂ ಕ್ಲಬ್ಗಳನ್ನು ಮುಚ್ಚಲು ಆದೇಶಿಸಿ, ಮದ್ಯ ಮಾರಾಟ ಹಾಗೂ ಸರಬರಾಜು ಮಾಡುವುದನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿದ್ದಾರೆ.