ಸೋಮವಾರ, ಅಕ್ಟೋಬರ್ 2, 2023
Galaxy S23 FE: ಸ್ಯಾಮ್ಸಂಗ್ ಗ್ಯಾಲಕ್ಸಿ S23 ಎಫ್​ಇ ಸ್ಮಾರ್ಟ್​ಫೋನ್ ಅ.4 ರಂದು ಬಿಡುಗಡೆ!-ಜಿಂಬಾಬ್ವೆಯಲ್ಲಿ ವಿಮಾನ ಪತನ ; ಭಾರತದ ಕೋಟ್ಯದೀಶ್ವರ ಹಾಗೂ ಗಣಿ ಉದ್ಯಮಿ ಮತ್ತು ಅವರ ಪುತ್ರ ದುರ್ಮರಣ!-ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ; ಸಿಪಿ ಯೋಗೇಶ್ವರ್ ಬಾಂಬ್-ದಿಗ್ಗಜ ಮಾಜಿ ಓಟಗಾರ್ತಿ ಪಿ.ಟಿ ಉಷಾರವರ ರಾಷ್ಟ್ರೀಯ ದಾಖಲೆ ಸರಿಗಟ್ಟಿ ಪದಕ ಸುತ್ತಿಗೇರಿದ ವಿತ್ಯಾ!-ನೀವು ಹೆದರಿಸದರೆ ಮಾತ್ರಕ್ಕೆ ನಾನು ಹೆದರಲ್ಲ ದೇವೇಗೌಡರಿಗೆ ಡಿಕೆಶಿ ಟಾಂಗ್!-ಜಿಪಿಎಸ್ ಮ್ಯಾಪ್ ನೋಡಿ ಕಾರನ್ನು ಚಲಿಸುವುತ್ತಿರುವಾಗ ನದಿಗೆ ಬಿದ್ದು ಇಬ್ಬರು ವೈದ್ಯರು ಸಾವು ; ಮೂವರು ಪಾರು!-ಹೃದಯ ವಿದ್ರಾವಕ ಘಟನೆ: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸೇರಿ 6 ಮಂದಿ ಹತ್ಯೆ-ಬೆಂಗಳೂರಿನ ಕಂಬಳಕ್ಕೆ ಹೇಗಿದೆ ತಯಾರಿ; ದಕ್ಷಿಣ ಕನ್ನಡ ಭಾಗದ 150 ಫುಡ್ ಸ್ಟಾಲ್ ಏರ್ಪಾಡು..!-ಪಿಯುಸಿಯಲ್ಲಿ ಅಂಕ ಕಡಿಮೆ ಬಂತೆಂದು ಮನನೊಂದು ಅಪಾರ್ಟ್‌ಮೆಂಟ್‌ನಿಂದ ಜಿಗಿದ ಬಾಲಕಿ ; ರಕ್ಷಣೆಗೆ ಧಾವಿಸಿದ ಯುವಕ - ಇಲ್ಲಿದೆ ವಿಡಿಯೋ-ಬರ್ತ್‌ಡೇ ಪಾರ್ಟಿಯಲ್ಲಿ ಡೆಕೋರೇಷನ್‌ಗೆ ಹಾಕಿದ್ದ ಹೀಲಿಯಂ ಬಲೂನ್‌ ಬ್ಲಾಸ್ಟ್‌ ; ಐವರು ಗಂಭೀರ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ತಲೆಮರೆಸಿಕೊಂಡಿದ್ದ ಅಭಿನವ ಹಾಲಶ್ರೀ ಅರೆಸ್ಟ್!

Twitter
Facebook
LinkedIn
WhatsApp
ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ತಲೆಮರೆಸಿಕೊಂಡಿದ್ದ ಅಭಿನವ ಹಾಲಶ್ರೀ ಅರೆಸ್ಟ್!

ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ತಲೆಮರೆಸಿಕೊಂಡಿದ್ದ ಅಭಿನವ ಹಾಲಶ್ರೀ ಅರೆಸ್ಟ್.

ಚೈತ್ರಾ ಕುಂದಾಪುರ (Chaitra Kundapura) ಅಂಡ್ ಗ್ಯಾಂಗ್ ವಂಚನೆ ಪ್ರಕರಣದ 3ನೇ ಆರೋಪಿ ಹಾಲಾಶ್ರೀ ಸ್ವಾಮೀಜಿಯನ್ನು ಒಡಿಶಾದ ಕಟಕ್​ನಲ್ಲಿ ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕೆಲ ಸಮಯದ ಹಿಂದೆಯೇ ಸಿಸಿಬಿ ಪೊಲೀಸರು ಸ್ವಾಮಿಜಿಯನ್ನು ವಶಕ್ಕೆ ಪಡೆದುಕೊಂಡಿದ್ದು, ಸದ್ಯ ಬೆಂಗಳೂರಿಗೆ ಕರೆದುಕೊಂಡು ಬರುತ್ತಿದ್ದಾರೆ ಎಂದು ತಿಳಿದು ಬಂದಿದೆ. ಸಿಸಿಬಿ ಕಣ್ತಪ್ಪಿಸಿ ಹಾಲಶ್ರೀ ಸ್ವಾಮೀಜಿ ದಿನಕ್ಕೊಂದು ಸ್ಥಳವನ್ನು ಬದಲಾಯಿಸುತ್ತಿರುವ ಮಾಹಿತಿ ತಿಳಿದ ಪೊಲೀಸರು ಮೊದಲು ಸ್ವಾಮಿಜಿಯ ಕಾರ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದರು.

ಚಲಿಸುತ್ತಿದ್ದ ರೈಲಿನಲ್ಲೇ ಹಾಲಶ್ರೀಯನ್ನು ಬಂಧಿಸಿರುವ ಪೊಲೀಸರು ಅಲ್ಲಿಂದ ಬೆಂಗಳೂರಿಗೆ ಕರೆ ತರುತ್ತಿದ್ದಾರೆ ಎನ್ನಲಾಗಿದೆ. ಈ ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಬಂಧನವಾಗುತ್ತಿದ್ದಂತೆ ಹಾಲಶ್ರೀ ಸ್ವಾಮೀಜಿ ತಲೆಮರೆಸಿಕೊಂಡಿದ್ದ.

ಇಂದು ಸಿಸಿಬಿ ಪೊಲೀಸರಿಂದ ಸ್ವಾಮೀಜಿ ಆತ್ಮೀಯ ಸಂಪರ್ಕದಲ್ಲಿದ್ದವರ ವಿಚಾರಣೆ ಮಾಡಲಾಗುತ್ತದೆ. ಮಠದ ಕೆಲ ಆತ್ಮೀಯರು ಹಾಗೂ ಚಾಲಕ ಸೇರಿ ಕೊನೆ ಕ್ಷಣದ ಕರೆಗಳ ಆಧರಿಸಿ ವಿಚಾರಣೆ ಮಾಡಲು ಸಿಸಿಬಿ ಅಧಿಕಾರಿಗಳು ಮುಂದಾಗಿದ್ದಾರೆ.

ಇಂದು ಹಣಕಾಸು ವಿಚಾರದ ಬಗ್ಗೆ ಚೈತ್ರಾ ಮತ್ತು ಗಗನ್ ಇಬ್ಬರನ್ನು ಮುಖಾಮುಖಿ ಮಾಡಿ ಪ್ರಶ್ನೆಗಳನ್ನಿಟ್ಟು ವಿಚಾರಣೆ ಮಾಡುವ ಸಾಧ್ಯತೆಗಳಿವೆ. ಆರೋಪಿಗಳ ಮೊಬೈಲ್​​ಗಳಲ್ಲಿಯೂ ಎಲ್ಲಾ ಸಂದೇಶಗಳು, ಕರೆಗಳು, ಪೋಟೋಸ್,‌ ಡೀಟೆಲ್ಸ್ ಡಿಲೀಟ್​ ಆಗಿತ್ತು. ಈ ಹಿನ್ನೆಲೆ ಮೊಬೈಲ್​ಗಳ ರಿಟ್ರೀವ್​ ಮಾಡಲು ಪೊಲೀಸರು ನೀಡಿದ್ದರು. ಇಂದು ಆರೋಪಿತರ ಮೊಬೈಲ್ ರಿಟ್ರೀವ್ ವರದಿ ಬರೋ ಸಾಧ್ಯತೆಗಳಿವೆ.

ಚೈತ್ರಾ ಕುಂದಾಪುರ ನೀಡಿದ ಮೊದಲ ಪ್ರತಿಕ್ರಿಯೆ ಹೊಸ ಸಂಚಲನ ಸೃಷ್ಟಿಸಿದೆ. ಸ್ವಾಮೀಜಿಗಳು ಸಿಕ್ಕಿ ಹಾಕಿಕೊಳ್ಳಲಿ. ಎಲ್ಲಾ ಸತ್ಯ ಗೊತ್ತಾಗುತ್ತೆ ಸರ್. ಸ್ವಾಮೀಜಿ ಸಿಕ್ಕಿ ಹಾಕಿಕೊಂಡ ನಂತರ ದೊಡ್ಡ ದೊಡ್ಡವರ ಹೆಸರುಗಳು ಹೊರ ಬರುತ್ತವೆ. ಇಂದಿರಾ ಕ್ಯಾಂಟೀನ್ ಬಿಲ್ ಪೆಡ್ಡಿಂಗ್ ಇರೋ ಕಾರಣ ಈ ಷಡ್ಯಂತ್ರ ರಚನೆಯಾಗಿದೆ. ಎ1 ಆರೋಪಿ ನಾನೇ ಆಗಿರಬಹುದು. ಸ್ವಾಮೀಜಿ ಸಿಕ್ಕ ನಂತರವೇ ಎಲ್ಲವೂ ಗೊತ್ತಾಗಲಿದೆ ಎಂದು ಹೇಳುತ್ತಿದ್ದ ಚೈತ್ರಾಳನ್ನು ಪೊಲೀಸರು ಕಚೇರಿ ಒಳಗೆ ಕರೆದುಕೊಂಡು ಹೋದರು.

ಚೈತ್ರಾ ಕುಂದಾಪುರ ಆಸ್ತಿ

ಆಪ್ತ ಶ್ರೀಕಾಂತ್ ಹೆಸ್ರಲ್ಲಿ ಬ್ಯಾಂಕ್​​​ನಲ್ಲಿ ₹1.08ಕೋಟಿ ಆಸ್ತಿಪಾಸ್ತಿ ದಾಖಲೆ ಪತ್ತೆಯಾಗಿದೆ ಎನ್ನಲಾಗಿದೆ. ₹65 ಲಕ್ಷ ಮೌಲ್ಯದ ಚಿನ್ನಾಭರಣ, ಸಹಕಾರಿ ಬ್ಯಾಂಕ್​​ನಲ್ಲಿ ₹40 ಲಕ್ಷ ಠೇವಣಿ ಇರೋದರ ಬಗ್ಗೆ ತಿಳಿದು ಬಂದಿದೆ. ಕುಂದಾಪುರದಲ್ಲಿ ನಿರ್ಮಾಣವಾಗುತ್ತಿರುವ ಮಹಡಿ ಮನೆ ಕಟ್ಟಲಾಗುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ