ಮಂಗಳವಾರ, ಅಕ್ಟೋಬರ್ 3, 2023
ರೊಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ ;ನಿಮ್ಮ ತೆವಲಿಗೋಸ್ಕರ ಫಾಲೋವರ್ಸ್ ಬೇಕು ಅಂತ ನ್ಯೂಸ್ ಹಾಕಬೇಡಿ!-ಹ್ಯುಂಡೈನ ಎಲ್ಲ ಮಾದರಿಯ ಕಾರುಗಳಲ್ಲಿ ಇನ್ನು ಮುಂದೆ ಆರು ಏರ್​ಬ್ಯಾಗ್​ಗಳು ನೀಡುವುದಾಗಿ ಘೋಷಿಸಿದ ಹ್ಯುಂಡ್ಯೆ!-ಉಳ್ಳಾಲ: ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ; ಯುವಕರಿಗೆ ನೋಟಿಸ್-ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಸೀಝ್ ; ಚಿನ್ನವನ್ನು ಎಲ್ಲೆಲ್ಲಿ ಬಚ್ಚಿಟ್ಟು ತಂದಿದ್ದಾರೆ ಗೊತ್ತೆ..!-ನನ್ನ ಮೇಲೆ ಹೈಕಮಾಂಡ್ ಗೆ ಪ್ರೀತಿ ಜಾಸ್ತಿ; ಅದಕ್ಕೆ ನಾನೇನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ !-ಕೇರಳ : ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ ; ಕರ್ತವ್ಯದಿಂದ ಅಮಾನತು!-ಮಹಾರಾಷ್ಟ್ರ : ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!-ಒಂದೇ ಧರ್ಮವಿದೆ; ಅದು ಸನಾತನ ಧರ್ಮ - ಯೋಗಿ ಆದಿತ್ಯನಾಥ್-ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!-Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚೈತ್ರ ಕುಂದಾಪುರ ವಂಚನೆ ಪ್ರಕರಣ: 101 ಈಡುಗಾಯಿ ಹೊಡೆದ ಮಲೆನಾಡಿಗರು..!

Twitter
Facebook
LinkedIn
WhatsApp
ಚೈತ್ರ ಕುಂದಾಪುರ ವಂಚನೆ ಪ್ರಕರಣ: 101 ಈಡುಗಾಯಿ ಹೊಡೆದ ಮಲೆನಾಡಿಗರು..!

ಚಿಕ್ಕಮಗಳೂರು: ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ (Chaithra Kundapura), ಸಿಸಿಬಿ (CCB) ಪೊಲೀಸರ ಅತಿಥಿಯಾಗಿರುವುದಕ್ಕೆ ಜಿಲ್ಲೆಯ ಕೊಪ್ಪ ತಾಲೂಕಿನ ಶಾನುವಳ್ಳಿ ಗ್ರಾಮ ಪಂಚಾಯಿತಿಯ ಮಾವಿನಕಟ್ಟೆ ಗ್ರಾಮದ ಜನರು ಆನೆ ವಿಘ್ನೇಶ್ವರ ಹಾಗೂ ಬ್ರಹ್ಮ ಜಟಿಗೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, 101 ಈಡುಗಾಗಿ ಹೊಡೆದು ಸಂಭ್ರಮಿಸಿದ್ದಾರೆ.

ಕಳೆದ ಅಕ್ಟೋಬರ್ 4 ರಂದು ಮಾವಿನಕಟ್ಟೆ ಗ್ರಾಮದಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ಹಿಂದೂಗಳ ಮನಸ್ಸಿಗೆ ನೋವಾಗುವಂತಹ ಭಾಷಣ ಮಾಡಿದ್ದ ಚೈತ್ರಾ ಕುಂದಾಪುರ ಭಾಷಣಕ್ಕೆ ಸ್ಥಳೀಯರೇ ಬೇಸರ ವ್ಯಕ್ತಪಡಿಸಿದ್ದರು. ಸಹಬಾಳ್ವೆಯಿಂದಿದ್ದ ಗ್ರಾಮಕ್ಕೆ ಕಾಲಿಟ್ಟು ಶಾಂತಿ ಕದಡುವ ಕೆಲಸ ಮಾಡಿದ್ದರು. ಹಿಂದೂಗಳ ವಿರುದ್ಧ ಹಿಂದೂಗಳನ್ನೇ ಎತ್ತಿಕಟ್ಟುವ ಪ್ರಚೋದನಾಕಾರಿ ಭಾಷಣ ಮಾಡಿದ್ದರು ಎಂದು ಆರೋಪಿಸಲಾಗಿತ್ತು.

ಅಂದು ಊರಿನ ಜನ ಆನೆ ವಿಘ್ನೇಶ್ವರ ಹಾಗೂ ಬ್ರಹ್ಮ ಜಟಿಗೇಶ್ವರ ಸ್ವಾಮಿಗೆ, ಈ ವರ್ಷದೊಳಗೆ ಶಿಕ್ಷೆ ನೀಡು ಎಂದು ಬೇಡಿಕೊಂಡಿದ್ದರು. ಅದರಂತೆ ಈಗ ಬಿಜೆಪಿ ಟಿಕೆಟ್ ವಿಚಾರದ ವಂಚನೆ ಪ್ರಕರಣದಲ್ಲಿ ಚೈತ್ರ ಲಾಕ್ ಆಗಿರುವುದರಿಂದ ಸಂತಸ ವ್ಯಕ್ತಪಡಿಸಿರುವ ಮಾವಿನಕಟ್ಟೆ ಗ್ರಾಮದ ಜನ ಆಕೆ ಕಾಲಿಟ್ಟ ಜಾಗವನ್ನು ಶುದ್ಧೀಕರಣ ಮಾಡಿದ್ದಾರೆ.

ಆನೆ ವಿಘ್ನೇಶ್ವರ ಸ್ವಾಮಿ ಹಾಗೂ ಬ್ರಹ್ಮ ಜಟಿಗೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಆಕೆ ಭಾಷಣ ಮಾಡಿದ ಜಾಗಕ್ಕೆ ತೀರ್ಥ ಹಾಕಿ ಶುದ್ಧ ಮಾಡಿದ್ದಾರೆ. ಜೊತೆಗೆ ಆಕೆ ಭಾಷಣ ಮಾಡಿದ ಜಾಗದಲ್ಲೇ 101 ತೆಂಗಿನಕಾಯಿ ಹೊಡೆದು ಸಂತಸಪಟ್ಟಿದ್ದಾರೆ. 

ಸದ್ಯಕ್ಕೆ ಚೈತ್ರಾ ಕುಂದಾಪುರ, ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ರೂ. ವಂಚನೆ ಮಾಡಿದ್ದಾರೆ ಎಂದು ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಸಿನಿಮಾ ಕಥೆಗೂ ಮೀರಿ ಗೋವಿಂದ ಬಾಬುರನ್ನು ಯಾಮಾರಿಸಲು ವಿಭಿನ್ನ ಕಥೆ ಎಣೆದಿದ್ದ ಚೈತ್ರಾ ಮತ್ತು ಆಕೆಯ ತಂಡದ ಒಂದೊಂದು ಕಥೆ ಹೊರಬರುತ್ತಿದ್ದು, ಚೈತ್ರಾಳ ಕಥೆ ದಿನದಿಂದ ದಿನಕ್ಕೆ ಟ್ವಿಸ್ಟ್‌ ಪಡೆಯುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ