ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ 3 ದಿನಗಳ ಕಾಲ ಮಳೆ ಸಾಧ್ಯತೆ ; ಯೆಲ್ಲೋ ಅಲರ್ಟ್ ಘೋಷಣೆ!
ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಮುಂದಿನ ಎರಡು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ಯಾದಗಿರಿ, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ. ಇನ್ನು ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲೂ ಕೂಡ ಮಳೆಯಾಗಲಿದೆ.
ಎಲ್ಲೆಲ್ಲಿ ಮಳೆಯಾಗಿದೆ? ಶಾಹಪುರ, ಮಳವಳ್ಳಿ, ಕೂಡಲಸಂಗಮ, ಮದ್ದೂರು, ತಾವರೆಕೆರೆ, ಬಂಡೀಪುರ, ಚಿತ್ರದುರ್ಗ, ಬಾದಾಮಿ, ಕೋಲಾಪುರ, ಬೆಳಗಾವಿ ವಿಮಾನ ನಿಲ್ದಾಣ, ನಿಪ್ಪಾಣಿ, ದೇವರಹಿಪ್ಪರಗಿ, ಯಡ್ರಾಮಿ, ಯುಗಟಿ, ಕೊಳ್ಳೇಗಾಲ, ಬೆಳ್ಳೂರು, ಚಿಕ್ಕೋಡಿ, ಸಂಕೇಶ್ವರ, ಕುಂದಗೋಳ, ಹುಣಸಗಿ, ನಾರಾಯಣಪುರ, ಚಿಕ್ಕಮಗಳೂರು, ಸರಗೂರು, ಕೋಲಾರ, ಕನಕಪುರ, ಮಹಾಲಿಂಗಪುರ, ಬಿಳಿಗಿ, ರಬಕವಿ, ಉಡುಪಿ, ನಲ್ವತವಾಡ, ಕೆಂಭಾವಿ, ನಾಯಕನಹಟ್ಟಿ, ಚಿಕ್ಕಬಳ್ಳಾಪುರ, ಚನ್ನರಾಯಪಟ್ಟಣ, ಬೆಂಗಳೂರಿನಲ್ಲಿ ಮಳೆಯಾಗಿದೆ.
ಮುಂದಿನ 24 ಗಂಟೆಗಳಲ್ಲಿ ಉತ್ತರ ಒಳನಾಡಿನ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ , ಕರಾವಳಿಯ ಕೆಲವು ಕಡೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಎಚ್ಎಎಲ್ನಲ್ಲಿ 29.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.