ಗುರುವಾರ, ಮೇ 9, 2024
SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?-ಐಪಿಎಲ್ ನಲ್ಲಿ ಮಿಂಚುತ್ತಿದೆ ಹೆಡ್ ಮತ್ತು ಅಭಿಷೇಕ್ ಜೋಡಿ ; 58 ಎಸೆತಗಳಲ್ಲಿ 167 ರನ್ ಸಿಡಿಸಿ ಜಯಗಳಿಸಿದರ ಹೈದರಾಬಾದ್.!-ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರಾವಳಿ ಮತ್ತು ಉತ್ತರ ಕನ್ನಡ ಸೇರಿದಂತೆ ಕೆಲವೆಡೆ ಅ.29 ರಿಂದ ಮಳೆ ಸಾಧ್ಯತೆ!

Twitter
Facebook
LinkedIn
WhatsApp
ಕರಾವಳಿ ಮತ್ತು ಉತ್ತರ ಕನ್ನಡ ಸೇರಿದಂತೆ ಕೆಲವೆಡೆ ಅ.29 ರಿಂದ ಮಳೆ ಸಾಧ್ಯತೆ!

ಬೆಂಗಳೂರು: ಕರ್ನಾಟಕದಲ್ಲಿ (Karnataka Rains) ಕೆಲವು ದಿನಗಳಿಂದ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿತ್ತು. ಆದರೆ, ಬಂಗಾಳಕೊಲ್ಲಿಯ ಉಂಟಾಗಿರುವ ಹಮೂನ್ ಚಂಡಮಾರುತದ (Cyclone Hamoon) ಪರಿಣಾಮವಾಗಿ ಕರ್ನಾಟಕದಲ್ಲಿ ಅಕ್ಟೋಬರ್ 29ರಿಂದ ನ. 1ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾನುವಾರದಿಂದ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ.

ಕರ್ನಾಟಕದಾದ್ಯಂತ ಹಿಂಗಾರು ಮಳೆ ಮತ್ತೆ ತೀವ್ರಗೊಳ್ಳುವ ಸಾಧ್ಯತೆಯಿದೆ. ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿದ್ದ ತೇಜ್ ಚಂಡಮಾರುತಕ್ಕಿಂತಲೂ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಹಮೂನ್ ಚಂಡಮಾರುತದ ಪರಿಣಾಮದಿಂದ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 29ರಿಂದ ನವೆಂಬರ್ 1ರವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಕರ್ನಾಟಕ ಮಾತ್ರವಲ್ಲದೆ ನೆರೆಯ ರಾಜ್ಯಗಳಲ್ಲೂ ಭಾನುವಾರದಿಂದ ಮಳೆ ತೀವ್ರಗೊಳ್ಳಲಿದೆ. ಕೇರಳದಲ್ಲಿ ಭಾನುವಾರ ಮತ್ತು ಸೋಮವಾರ ಮಳೆಯಾಗುವ ಮುನ್ಸೂಚನೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇಡುಕ್ಕಿ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಕೋಝಿಕ್ಕೋಡ್, ವಯನಾಡು ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಹಳದಿ ಅಲರ್ಟ್‌ ಘೋಷಿಸಲಾಗಿದೆ. ಅಕ್ಟೋಬರ್‌ 30ರವರೆಗೆ ಪಥನಾಂತಿಟ್ಟ, ಇಡುಕ್ಕಿ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್ ಮತ್ತು ವಯನಾಡು ಜಿಲ್ಲೆಗಳಲ್ಲಿ ಅಲರ್ಟ್ ಮುಂದುವರಿಯಲಿದೆ. ಇಂದು ಪಥನಾಂತಿಟ್ಟ, ಆಲಪ್ಪುಳ ಮತ್ತು ಎರ್ನಾಕುಲಂ ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಜಿಲ್ಲೆಗಳಲ್ಲಿ ಗಂಟೆಗೆ 40 ಕಿಮೀ ವೇಗದಲ್ಲಿ ಬಲವಾದ ಗಾಳಿ ಬೀಸುತ್ತದೆ ಎಂದು ಇಲಾಖೆ ತಿಳಿಸಿದೆ.

ದಕ್ಷಿಣ ತಮಿಳುನಾಡಿನಲ್ಲಿ ಚಂಡಮಾರುತ ಉಂಟಾಗಲಿದ್ದು, ವಿಲ್ಲುಪುರಂ, ಕಲ್ಲಕುರಿಚಿ, ಕಡಲೂರು, ಪೆರಂಬಲೂರ್, ಅರಿಯಲೂರ್, ಮೈಲಾಡುತುರೈ, ತಂಜಾವೂರು, ತಿರುವರೂರು, ನಾಗಪಟ್ಟಣಂ, ಪುದುಕ್ಕೊಟ್ಟೈನಲ್ಲಿ ಹೈ ಅಲರ್ಟ್​ ಘೋಷಿಸಲಾಗಿದೆ ಎಂದು ಪ್ರಾದೇಶಿಕ ಹವಾಮಾನ ಇಲಾಖೆ ತಿಳಿಸಿದೆ. ತಿರುಚಿರಾಪಳ್ಳಿ ಮತ್ತು ದಿಂಡಿಗಲ್ ಜಿಲ್ಲೆಗಳಲ್ಲಿ ಅಕ್ಟೋಬರ್ 29ರಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಕೊಯಮತ್ತೂರು, ನೀಲಗಿರಿ, ಮೈಲಾಡುತುರೈ, ತಂಜಾವೂರು, ತಿರುವರೂರ್, ನಾಗಪಟ್ಟಣಂ, ಪುದುಕೊಟ್ಟೈ, ತಿರುಚಿರಾಪಳ್ಳಿ, ದಿಂಡಿಗಲ್, ಅರಿಯಲೂರ್, ಪೆರಂಬಲೂರು, ಸೇಲಂ, ನಾಮಕ್ಕಲ್, ವಿರುದುನಗರ, ತೂತುಕುಡಿ, ಮಧುರೈ ಮತ್ತು ಥೇಣಿ ಜಿಲ್ಲೆಗಳಲ್ಲಿ ಅಕ್ಟೋಬರ್ 30ರಂದು ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹಾಗೇ, ಇಂದು ತಮಿಳುನಾಡು, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಸಿಕ್ಕಿಂ, ಕೇರಳ, ಆಂಧ್ರಪ್ರದೇಶ, ಅಂಡಮಾನ್-ನಿಕೋಬಾರ್ ದ್ವೀಪಗಳು ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಚದುರಿದ ಮಳೆ ಸುರಿಯುವ ನಿರೀಕ್ಷೆಯಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ