ಚಂಡಿಗಢ : ಪಂಜಾಬ್ನಲ್ಲಿ ಭೀಕರ ಅಪಘಾತ; ಕಾರು-ಟ್ರಕ್ ಡಿಕ್ಕಿ, ನಾಲ್ವರ ದುರ್ಮರಣ
ಚಂಡಿಗಢ, ಜ.27: ಪಂಜಾಬ್‌ನ ಹೋಶಿಯಾರ್‌ಪುರ ಜಿಲ್ಲೆಯಲ್ಲಿ ಶುಕ್ರವಾರ ಕಾರೊಂದು ಟ್ರಕ್‌ಗೆ ಡಿಕ್ಕಿ (Accident) ಹೊಡೆದು ಬೆಂಕಿ ಹೊತ್ತಿಕೊಂಡಿದ್ದು ಈ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ (Death). ಹಾಗೂ ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಪೊಲೀಸರ ಪ್ರಕಾರ, ಹೋಶಿಯಾರ್‌ಪುರದ ಮುಕೇರಿಯನ್ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ವೇಗವಾಗಿ ಬಂದ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ.
ಘಟನೆ ನಡೆಯುತ್ತಿದ್ದಂತೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಸ್ಥಳೀಯ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಸ್ಥಳೀಯರ ಸಹಾಯದಿಂದ ಕಾರಿನಲ್ಲಿ ಸಿಲುಕಿದ್ದ ಜನರನ್ನು ಹೊರತೆಗೆದು ಅವರನ್ನು ಮುಕೇರಿಯನ್ ಸಿವಿಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವೇಳೆ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ಓರ್ವನ ಸ್ಥಿತಿ ಚಿಂತಾಜನಕವಾಗಿದೆ.
ಅಗ್ನಿಶಾಮಕ ದಳದವರು ಕಾರಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಿದ್ದಾರೆ. ಪೊಲೀಸರು ಶವವನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ. ಈ ಅಪಘಾತದ ಬಗ್ಗೆ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಮೃತರನ್ನು ಇನ್ನೂ ಗುರುತಿಸಲಾಗಿಲ್ಲ, ಆದರೆ ಅಪಘಾತಕ್ಕೀಡಾದ ವಾಹನದ ನಂಬರ್ ಪ್ಲೇಟ್ ಜಲಂಧರ್‌ನದ್ದಾಗಿರುವುದರಿಂದ ಅವರು ಜಲಂಧರ್ ನಿವಾಸಿಗಳಾಗಿರಬಹುದು ಎಂದು ಊಹಿಸಲಾಗಿದೆ.
ಕಳೆದ ವರ್ಷದ ಆರಂಭದಲ್ಲಿ ಪಂಜಾಬ್‌ನ ಸಂಗ್ರೂರ್ ಜಿಲ್ಲೆಯಲ್ಲಿ ಎರಡು ಟ್ರಾಕ್ಟರ್ ಟ್ರಾಲಿಗಳಿಗೆ ಕಾರು ಡಿಕ್ಕಿ ಹೊಡೆದು ಇಬ್ಬರು ಮಕ್ಕಳು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದರು. ಮರ್ದ್ಖೇರಾ ಗ್ರಾಮದ ಬಳಿ ಸುನಮ್-ಪಟಿಯಾಲ ರಸ್ತೆಯಲ್ಲಿ ಅಪಘಾತ ಸಂಭವಿಸಿತ್ತು. ನೀರಜ್ ಸಿಂಗ್ಲಾ ಅವರು ಮಲೇರ್‌ಕೋಟ್ಲಾದಿಂದ ಸುನಮ್ ಪಟ್ಟಣದ ಕಡೆಗೆ ಚಲಾಯಿಸುತ್ತಿದ್ದ ಕಾರು ಮರ್ದಖೇರಾ ಗ್ರಾಮದಿಂದ ಬರುತ್ತಿದ್ದ ಎರಡು ಟ್ರ್ಯಾಕ್ಟರ್ ಟ್ರಾಲಿಗಳಿಗೆ ಡಿಕ್ಕಿ ಹೊಡೆದಿತ್ತು.
ಬೆಂಗಳೂರು: ಬಹುಮಾನ ಪಡೆಯುವ ವೇಳೆ ಕುಸಿದುಬಿದ್ದು ಯುವಕ ಸಾವು
ಬೆಂಗಳೂರು, ಜ.26: ಬಹುಮಾನ ಪಡೆಯುವ ವೇಳೆ ಕುಸಿದುಬಿದ್ದು ಯುವಕನೊಬ್ಬ ಸಾವನ್ನಪ್ಪಿದ ಘಟನೆ ಬೆಂಗಳೂರಿನ (Bengaluru) ಜ್ಞಾನಭಾರತಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾಷ್ಟ್ರೀಕೃತ ಬ್ಯಾಂಕ್ನಲ್ಲಿ ಕೆಲಸ ಮಾಡುತ್ತಿದ್ದ ರಾಬಿನ್(22) ಮೃತವ್ಯಕ್ತಿ. ಗಣರಾಜ್ಯೋತ್ಸವ ಹಿನ್ನೆಲೆ ಕ್ರಿಕೆಟ್ ಪಂದ್ಯಾವಳಿನಡೆಸಲಾಗಿತ್ತು. 2-3 ಪಂದ್ಯಗಳಲ್ಲಿ ಆಡಿ ಗೆಲುವಿಗೆ ಕಾರಣಕರ್ತನಾಗಿದ್ದ ರಾಬಿನ್, ಪಂದ್ಯ ಗೆದ್ದ ಬಳಿಕ ಬಹುಮಾನ ಪಡೆಯುವಾಗ ವೇದಿಕೆ ಮೇಲೆಯೇ ಹೃದಯಾಘಾತ(Heart Attack)ವಾಗಿ ಕುಸಿದು ಬಿದ್ದಿದ್ದಾನೆ. ಬಳಿಕ ಕೂಡಲೇ ರಾಬಿನ್ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.
ಕೊಲೆಯಾದ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ
ರಾಮನಗರ: ನಗರದ ಜಿಲ್ಲಾ ಕ್ರೀಡಾಂಗಣದ ಹಿಂದಿನ ರೈಲು ಹಳಿ ಬಳಿ ಕೊಲೆಯಾದ ಸ್ಥಿತಿಯಲ್ಲಿ 6 ವರ್ಷದ ಬಾಲಕನ ಶವ ಪತ್ತೆಯಾಗಿದೆ. ಕೊಲೆ ಮಾಡಿ ಹಳಿ ಬಳಿ ಎಸೆದಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳೀಯರು ಬಾಲಕನ ಶವ ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಕುರಿತು ರಾಮನಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಹೆಚ್ಚುವರಿ ಎಸ್ಪಿ ಸುರೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.