ಚೆನ್ನೈ-ಮೈಸೂರು ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ

ಚೆನ್ನೈ: ಇತ್ತೀಚೆಗಿನ ದಿನಗಳಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ರೈಲಿನ ಮೇಲೆ ಕಲ್ಲು ತೂರಾಟ ಮಾಡುವ ಘಟನೆಗಳು ಹೆಚ್ಚಾಗಿದೆ, ಈ ರೈಲು ಶುರುವಾಗಿನಿಂದ ಅನೇಕ ಕಡೆ ಕಲ್ಲು ತೂರಾಟ ನಡೆಯುತ್ತಲೇ ಇದೆ. ನಮ್ಮ ಆಸ್ತಿಗೆ ನಾವೇ ಹಾನಿ ಮಾಡುವುದು ಸರಿಯಲ್ಲ. ಆ ಮನಸ್ಥಿತಿಯ ಜನರನ್ನು ಮೊದಲು ಮಟ್ಟ ಹಾಕಬೇಕು ಎಂದು ಪ್ರಯಾಣಿಕರೊಬ್ಬರು ಹೇಳಿರುವ ವೀಡಿಯೊ ಎಲ್ಲ ಕಡೆ ಸದ್ದು ಮಾಡಿತ್ತು. ಇದೀಗ ಮತ್ತೊಂದು ಘಟನೆ ಇಂದು (ಜುಲೈ.14) ತಮಿಳುನಾಡಿನಲ್ಲಿ ನಡೆದಿದೆ. ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣದ ಪಕ್ಕದಲ್ಲಿರುವ ಬೇಸಿನ್ ಬ್ರಿಡ್ಜ್ ನಿಲ್ದಾಣದ ಬಳಿ ಮೈಸೂರು-ಚೆನ್ನೈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕಲ್ಲು ತೂರಾಟ ನಡೆಸಿದ್ದರಿಂದ ರೈಲಿನ ಎರಡು ಗಾಜುಗಳು ಪುಡಿ ಪುಡಿಯಾಗಿದೆ. ಎಕ್ಸ್‌ಪ್ರೆಸ್ ರೈಲು ಮೈಸೂರಿನಿಂದ ಚೆನ್ನೈಗೆ ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ.
2023 ಫೆಬ್ರವರಿಯಲ್ಲಿ ಬೆಂಗಳೂರಿನ ಕಂಟೋನ್ಮೆಂಟ್ ಸ್ಟೇಷನ್ ಬಳಿ ವಂದೇ ಭಾರತ್ ರೈಲಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು. ಇದು ಕರ್ನಾಟಕದಲ್ಲಿ ನಡೆದ ಮೊದಲ ಕಲ್ಲು ತೂರಾಟ. ಚೆನ್ನೈ-ಮೈಸೂರು ವಂದೇ ಭಾರತ್ ಎಕ್ಸ್ಪ್ರೆಸ್ನ್ನು ಕಳೆದ ವರ್ಷ ನವೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ಹಸಿರು ನಿಶಾನೆ ತೋರಿಸಿದರು. ಇದು ದಕ್ಷಿಣ ಭಾರತದ ಮೊದಲ ವಂದೇ ಭಾರತ್ ರೈಲು ಎಂಬ ಪ್ರಶಂಸೆಯನ್ನು ಪಡೆದಿತ್ತು.
ಇತ್ತಿಚೇಗಷ್ಟೇ ರಾಮನಗರದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿತ್ತು, ಈ ಸಮಯದಲ್ಲಿ ರೈಲಿನಲ್ಲಿದ್ದ ಪ್ಯಾಸೆಂಜರ್ ಮೇಲೆ ಕಲ್ಲುಗಳು ಬಿದಿತ್ತು. ಈ ಘಟನೆಯಿಂದ ಸುಮಿತ್ರಾ ಎಂಬವರ ಕತ್ತಿನ ಭಾಗಕ್ಕೆ ಗಾಯವಾಗಿದೆ. ಹೀಗೆ ಅನೇಕ ಕಡೆಗಳಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ಎಸೆದಿರುವ ಘಟನೆಗಳು ನಡೆಯುತ್ತಲೇ ಇದೆ. ಈ ಬಗ್ಗೆ ಅಧಿಕಾರಿಗಳು ದೂರು ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
ದಶಪಥ ಹೆದ್ದಾರಿಯಲ್ಲಿ ಸರಣಿ ಅಪಘಾತ- ನಾಲ್ಕು ವಾಹನಗಳು ಜಖಂ
ರಾಮನಗರ: ಬೆಂಗಳೂರು-ದಶಪಥ ಹೆದ್ದಾರಿಯಲ್ಲಿ ಶುಕ್ರವಾರ ಬೆಳಗ್ಗೆ ಸರಣಿ ಅಪಘಾತ ನಡೆದು ನಾಲ್ಕು ವಾಹನಗಳು ಜಖಂಗೊಂಡಿವೆ.
ಬಿಡದಿಯ ನೆಲ್ಲಿಗುಡ್ಡೆ ಕೆರೆಯ ಸಮೀಪ ದಶಪಥ ಹೆದ್ದಾರಿಯಲ್ಲಿ ಲಾರಿ, ಬಸ್ ಹಾಗೂ ಎರಡು ಕಾರು ನಡುವೆ ಅಪಘಾತ ನಡೆದಿದೆ. ಮೈಸೂರು ಕಡೆಯಿಂದ ಬೆಂಗಳೂರು ಕಡೆಗೆ ಸಂಚಾರ ಮಾಡುತ್ತಿದ್ದ ಈ ನಾಲ್ಕು ವಾಹನಗಳ ನಡುವೆ ಅಪಘಾತ ನಡೆದು ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಮಂದಗತಿಯಲ್ಲಿ ಚಲಿಸುತ್ತಿದ್ದ ಲಾರಿಗೆ ಮೊದಲು ಐರಾವತ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಈ ವೇಳೆ ಬಸ್ ಹಿಂಬಂದಿ ಬರುತ್ತಿದ್ದ ಎರಡು ಕಾರುಗಳು ಸಹ ಬಸ್ಸಿಗೆ ಡಿಕ್ಕಿ ಹೊಡೆದು ಸರಣಿ ಅಪಘಾತ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.
ಮಂದಗತಿಯಲ್ಲಿ ಚಲಿಸುತ್ತಿದ್ದ ಲಾರಿಗೆ ಮೊದಲು ಐರಾವತ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಈ ವೇಳೆ ಬಸ್ ಹಿಂಬಂದಿ ಬರುತ್ತಿದ್ದ ಎರಡು ಕಾರುಗಳು ಸಹ ಬಸ್ಸಿಗೆ ಡಿಕ್ಕಿ ಹೊಡೆದು ಸರಣಿ ಅಪಘಾತ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.