ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಚೆಸ್ ವಿಶ್ವಕಪ್ ; ಆರ್ ಪ್ರಜ್ಞಾನಂದಗೆ ವಿರೋಚಿತ ಸೋಲು - ಕಾರ್ಲ್ ಸೇನ್ ವಿಶ್ವ ಚಾಂಪಿಯನ್!

Twitter
Facebook
LinkedIn
WhatsApp
ಚೆಸ್ ವಿಶ್ವಕಪ್ ; ಆರ್ ಪ್ರಜ್ಞಾನಂದಗೆ ವಿರೋಚಿತ ಸೋಲು - ಕಾರ್ಲ್ ಸೇನ್ ವಿಶ್ವ ಚಾಂಪಿಯನ್!

ಅಝರ್​ಬೈಜಾನ್​ನ ಬಾಕುವಿನಲ್ಲಿ ನಡೆದ ಚೆಸ್ ವಿಶ್ವಕಪ್​ನಲ್ಲಿ ಗ್ರ್ಯಾಂಡ್ ಮಾಸ್ಟರ್ ಆರ್​. ಪ್ರಜ್ಞಾನಂದ (R Praggnanandhaa) ವಿರುದ್ಧ ವಿಶ್ವದ ನಂಬರ್ 1 ಚೆಸ್ ತಾರೆ ಮ್ಯಾಗ್ನಸ್ ಕಾರ್ಲ್‌ಸೆನ್ ಜಯ ಸಾಧಿಸಿದ್ದಾರೆ. ಇದರೊಂದಿಗೆ ಚೊಚ್ಚಲ ಬಾರಿಗೆ ವಿಶ್ವ ಚಾಂಪಿಯನ್ ಆಗುವ ನಿರೀಕ್ಷೆಯಲ್ಲಿದ್ದ 18 ವರ್ಷದ ಪ್ರಜ್ಞಾನಂದ ಅವರ ಕನಸು ಕೂಡ ಕಮರಿದೆ.

ರಣರೋಚಕ ಪೈಪೋಟಿಗೆ ಸಾಕ್ಷಿಯಾಗಿದ್ದ ಈ ಪಂದ್ಯದಲ್ಲಿ ವಿಶ್ವದ ನಂಬರ್ 1 ಚೆಸ್​ ತಾರೆಗೆ ಎಲ್ಲಾ ರೀತಿಯಲ್ಲೂ ಪೈಪೋಟಿ ನೀಡುವಲ್ಲಿ ಪ್ರಜ್ಞಾನಂದ ಯಶಸ್ವಿಯಾಗಿದ್ದರು. ಆದರೆ ಟೈಬ್ರೇಕ್​ನಲ್ಲಿ ಮೇಲುಗೈ ಸಾಧಿಸುವ ಮೂಲಕ ಕಾರ್ಲ್​ಸೆನ್ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ್ದರು.

ಮಂಗಳವಾರ ನಡೆದ ಫೈನಲ್ ಪಂದ್ಯದ ಮೊದಲ ಗೇಮ್​ನಲ್ಲಿ ನಾರ್ವೆಯ ಕಾರ್ಲ್​ಸೆನ್ ಅವರನ್ನು ಆರಂಭದಲ್ಲೇ ಒತ್ತಡಕ್ಕೆ ಸಿಲುಕಿಸುವಲ್ಲಿ ಪ್ರಜ್ಞಾನಂದ ಯಶಸ್ವಿಯಾಗಿದ್ದರು. ಮೊದಲ ಗೇಮ್​ನ ಅಂತಿಮ ಸುತ್ತಿನಲ್ಲಿ ಜಾಣ್ಮೆಯ ನಡೆಗಳ ಮೂಲಕ ಪಂದ್ಯದಲ್ಲಿ ಹಿಡಿತ ಸಾಧಿಸುವಲ್ಲಿ ಕಾರ್ಲ್​ಸೆನ್ ಯಶಸ್ವಿಯಾದರು. ಇದರೊಂದಿಗೆ ಮೊದಲ ಸುತ್ತು 35 ಚಲನೆಗಳ ನಂತರ ಡ್ರಾದಲ್ಲಿ ಕೊನೆಗೊಂಡಿತ್ತು.ಬುಧವಾರ ನಡೆದ 2ನೇ ಗೇಮ್​ನಲ್ಲಿ ಕಪ್ಪು ಕಾಯಿಗಳೊಂದಿಗೆ ಚದುರಂಗ ಚಲನೆ ಆರಂಭಿಸಿದ್ದ ಪ್ರಜ್ಞಾನಂದ ಆರಂಭದಲ್ಲೇ ಸಮಬಲದ ಹೋರಾಟ ನಡೆಸಿದ್ದರು. ಕಾರ್ಲ್​ಸೆನ್ ಜಾಣ ಚಲನೆಗೆ ಅತ್ಯುತ್ತಮ ಚೆಕ್​ ನಡೆಗಳ ಮೂಲಕ ಪ್ರಜ್ಞಾನಂದ ಪ್ರತ್ಯುತ್ತರ ನೀಡಿದ್ದರು. ಪರಿಣಾಮ 22 ನಡೆಗಳ ನಂತರ ಕೂಡ ಪಂದ್ಯವು ಸಮತೋಲಿತವಾಗಿತ್ತು.ಈ ಸಮಬಲವನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾದ ಕಾರ್ಲ್​ಸೆನ್ 30 ನಡೆಗಳ ನಂತರ ಪಂದ್ಯವನ್ನು ಡ್ರಾಗೊಳಿಸಿದರು. ಇದರೊಂದಿಗೆ ಫೈನಲ್ ಪಂದ್ಯವು ಟೈಬ್ರೇಕ್​ನತ್ತ ಸಾಗಿತು.

ಗುರುವಾರ ನಡೆದ ಟೈಬ್ರೇಕ್​ನ ಮೊದಲ ಸುತ್ತಿನ ಫಸ್ಟ್ ಗೇಮ್​ನ 16 ಚಲನೆಗಳ ನಂತರ, ಕಾರ್ಲ್‌ಸೆನ್‌ನ ‘ಬಿಷಪ್’ ಗಾಗಿ ಪ್ರಜ್ಞಾನಂದ ತನ್ನ ‘ನೈಟ್’ (ಹೋರ್ಸ್ ಹೆಡ್) ಅನ್ನು ತ್ಯಾಗ ಮಾಡಿದರು. ಇದರ ಬೆನ್ನಲ್ಲೇ ಇಬ್ಬರು ತಮ್ಮ ರಾಣಿಯನ್ನೂ ಕೂಡ ಕಳೆದುಕೊಂಡರು. ಆದರೆ 21ನೇ ನಡೆಯ ವೇಳೆಗೆ ಕಾರ್ಲ್​ಸೆನ್ ಪಂದ್ಯದ ಮೇಲೆ ಹಿಡಿತ ಸಾಧಿಸಿದ್ದರು. ಇದೇ ವೇಳೆ ಪ್ರಜ್ಞಾನಂದ ರಕ್ಷಣಾತ್ಮಕ ಆಟಕ್ಕೆ ಒತ್ತು ನೀಡಿದರು.ಈ ಜಾಣ ನಡೆಯ ಮೂಲಕ 25 ನಡೆಗಳ ಬಳಿಕ ಪ್ರಜ್ಞಾನಂದ ಸಮಬಲ ಸಾಧಿಸುವಲ್ಲಿ ಯಶಸ್ವಿಯಾದರು. ಆದರೆ 34 ನಡೆಗಳ ವೇಳೆಗೆ ಇಬ್ಬರು ರೂಕ್ ಕಾಯಿಕೆಯನ್ನು ಕಳೆದುಕೊಂಡಿದ್ದರು. ಇದಾಗ್ಯೂ 47 ಮೂವ್​ಗಳ ಬಳಿಕ ಟೈಬ್ರೇಕ್​ನ ಮೊದಲ ಗೇಮ್​ನಲ್ಲಿ ಜಯ ಸಾಧಿಸುವಲ್ಲಿ ಯಶಸ್ವಿಯಾದ ಕಾರ್ಲ್‌ಸೆನ್ 1-0 ಮುನ್ನಡೆ ಸಾಧಿಸಿದರು.

ವಿಶ್ವದ 3ನೇ ಶ್ರೇಯಾಂಕದ ತಾರೆಗೂ ಸೋಲುಣಿಸಿದ್ದ ಪ್ರಜ್ಞಾನಂದ:

ಇದಕ್ಕೂ ಮುನ್ನ ವಿಶ್ವದ ನಂಬರ್-3 ಚೆಸ್ ತಾರೆ ಫ್ಯಾಬಿಯಾನೊ ಕರುವಾನಾ ಹಾಗೂ ಪ್ರಜ್ಞಾನಂದ ಸೆಮಿಫೈನಲ್​ನಲ್ಲಿ ಮುಖಾಮುಖಿಯಾಗಿದ್ದರು. ರೋಚಕ ಪೈಪೋಟಿಗೆ ಸಾಕ್ಷಿಯಾಗಿದ್ದ ಈ ಪಂದ್ಯದ ಮೊದಲೆರಡು ಗೇಮ್​ಗಳು ಡ್ರಾನಲ್ಲಿ ಅಂತ್ಯಗೊಂಡಿದ್ದವು. ಹೀಗಾಗಿ ಟೈಬ್ರೇಕರ್​ನಲ್ಲಿ ಪಂದ್ಯವನ್ನು ಮುಂದುವರೆಸಲಾಯಿತು. ಈ ಹಂತದಲ್ಲಿ ಜಾಣ್ಮೆಯ ನಡೆಗಳೊಂದಿಗೆ  3.5-2.5 ಅಂತರದಿಂದ ಫ್ಯಾಬಿಯಾನೊ ಕರುವಾನಾಗೆ ಸೋಲುಣಿಸಿ  ಪ್ರಜ್ಞಾನಂದ ಫೈನಲ್​ಗೆ ಪ್ರವೇಶಿಸಿದ್ದರು

ದಾಖಲೆ ಬರೆದ ಪ್ರಜ್ಞಾನಂದ:

ಚೆಸ್ ವಿಶ್ವಕಪ್​ನ ಫೈನಲ್ ಸೋಲಿನ ಹೊರತಾಗಿಯೂ ಆರ್​ ಪ್ರಜ್ಞಾನಂದ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಅಂದರೆ ಈ ಟೂರ್ನಿಯಲ್ಲಿ ಫೈನಲ್​ ಆಡಿದ 2ನೇ ಭಾರತೀಯ ಎಂಬ ಹೆಗ್ಗಳಿಕೆಗೆ 18 ರ ಹರೆಯದ ಯುವ ಚೆಸ್ ಪಟು  ಪಾತ್ರರಾಗಿದ್ದಾರೆ

ಇದಕ್ಕೂ ಮುನ್ನ 2000 ಮತ್ತು 2002 ರಲ್ಲಿ ಗ್ರ್ಯಾಂಡ್​ ಮಾಸ್ಟರ್ ವಿಶ್ವನಾಥನ್ ಆನಂದ್ ಅವರು ಈ ಸಾಧನೆ ಮಾಡಿದ್ದರು. ಇದೀಗ ಚೆಸ್ ವಿಶ್ವಕಪ್​ನಲ್ಲಿ ಫೈನಲ್ ಆಡುವ ಮೂಲಕ ಆರ್​ ಪ್ರಜ್ಞಾನಂದ ಕೂಡ ಈ ದಾಖಲೆ ನಿರ್ಮಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ