ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮುಖ್ಯಮಂತ್ರಿಯವರ ಅನುಮತಿ ಇದ್ದರೆ ಮಾತ್ರ ವರ್ಗ!

Twitter
Facebook
LinkedIn
WhatsApp
ಮುಖ್ಯಮಂತ್ರಿಯವರ ಅನುಮತಿ ಇದ್ದರೆ ಮಾತ್ರ ವರ್ಗ!

ಬೆಂಗಳೂರು: ಇನ್ನು ಮುಂದೆ ಯಾವುದೇ ಇಲಾಖೆಯಲ್ಲಿ ವರ್ಗಾವಣೆ ಮಾಡುವುದಾದರೆ ಮುಖ್ಯಮಂತ್ರಿಯವರ ಪೂರ್ವಾನು ಮೋದನೆ ಪಡೆಯುವುದನ್ನು ರಾಜ್ಯ ಸರಕಾರ ಕಡ್ಡಾಯಗೊಳಿಸಿದೆ.

ಸಿಬಂದಿ ಮತ್ತು ಆಡಳಿತ ಸುಧಾರಣ ಇಲಾಖೆಯ ಅಪರ ಕಾರ್ಯದರ್ಶಿ ಈ ಬಗ್ಗೆ ಸುತ್ತೋಲೆ ಹೊರಡಿಸಿದ್ದಾರೆ.

ಒಂದು ವೇಳೆ ಮುಖ್ಯಮಂತ್ರಿಯವರ ಪೂರ್ವಾನುಮತಿ ಪಡೆಯದೆ ವರ್ಗಾವಣೆ ಮಾಡಿದ್ದು ಕಂಡುಬಂದಲ್ಲಿ ಸರಕಾರದ ಸಂಬಂಧಪಟ್ಟ ಅಪರ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ ಹಾಗೂ ಇಲಾಖಾ ಮುಖ್ಯಸ್ಥರನ್ನು ನೇರ ಜವಾಬ್ದಾರರನ್ನಾಗಿ ಮಾಡಲಾಗುವುದು. ಹಾಗೆಯೇ ಸಂಬಂಧಿಸಿದ ಅಧಿಕಾರಿಯ ಮೇಲೆ ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಲಾಗಿದೆ.

2023-24ರ ಸಾಲಿನಲ್ಲಿ ಎ, ಬಿ, ಸಿ ಮತ್ತು ಡಿ ವರ್ಗದ ಅಧಿಕಾರಿ, ಸಿಬಂದಿಯಲ್ಲಿ ಆಯಾ ಜೇಷ್ಠತಾ ಘಟಕದ ಕಾರ್ಯನಿರತ ವೃಂದ ಬಲದ ಶೇ. 6ನ್ನು ಮೀರದಂತೆ ಸಾರ್ವತ್ರಿಕ ವರ್ಗಾವಣೆ ಮಾಡಲು ಜೂ. 1ರಿಂದ ಜು. 3ರ ವರೆಗೆ ಇಲಾಖಾ ಸಚಿವರಿಗೆ ಅವಕಾಶ ಕಲ್ಪಿಸಲಾಗಿತ್ತು.ಆದರೆ ಅವಧಿ ಮುಕ್ತಾಯಗೊಂಡ ಬಳಿಕವೂ ಇಲಾಖಾ ಹಂತದಲ್ಲಿ ವರ್ಗಾವಣೆ ಕೈಗೊಂಡು ಘಟನೋತ್ತರ ಅನುಮೋದನೆಗಾಗಿ ಪ್ರಸ್ತಾವನೆಯನ್ನು ಮುಖ್ಯಮಂತ್ರಿಗಳಿಗೆ ಕಳುಹಿಸಿಕೊಡುತ್ತಿರುವ ಪ್ರಕರಣಗಳು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಶ್ರೀರಂಗಪಟ್ಟಣ: ಸರ್ಕಾರ ರೈತರ ಬದುಕಿನ ಮೇಲೆ ಚಪ್ಪಡಿ ಎಳೆದಿದೆ

ಶ್ರೀರಂಗಪಟ್ಟಣ: ಸರ್ಕಾರ ತಮಿಳುನಾಡಿಗೆ ನೀರು ಹರಿಸುವ ಮೂಲಕ ರೈತರ ಬದುಕಿನ ಮೇಲೆ ಚಪ್ಪಡಿ ಎಳೆದಿದೆ ಎಂದು‌ ಆಕ್ರೋಶ ವ್ಯಕ್ತಪಡಿಸಿ ರೈತರು ತಲೆ ಮೇಲೆ ಚಪ್ಪಡಿ ಕಲ್ಲು ಹೊತ್ತು ಪ್ರತಿಭಟನೆ ನಡೆಸಿದ ಘಟನೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ.

ಭೂಮಿ ತಾಯಿ ಹೋರಾಟ ಸಮಿತಿ ವತಿಯಿಂದ ರೈತ ಮುಖಂಡ ಕೆ.ಎಸ್. ನಂಜುಂಡೇಗೌಡ ಹಾಗೂ ಸಮಿತಿ ಅಧ್ಯಕ್ಷ ‌ಬಲ್ಲೇನಹಳ್ಳಿ ಕೃಷ್ಣೇಗೌಡ ನೇತೃತ್ವದಲ್ಲಿ ನೂರಾರು ರೈತರು ಚಪ್ಪಡಿ ಕಲ್ಲು ಹೊತ್ತು ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ತಕ್ಷಣವೇ ನಿಲ್ಲಿಸುವಂತೆ ಆಗ್ರಹಿಸಿದರು.

ಪಟ್ಟಣದ ಕುವೆಂಪು ವೃತ್ತದಿಂದ ಮುಖ್ಯರಸ್ತೆ ಮಾರ್ಗವಾಗಿ ಪ್ರತಿಭಟನಾ ಮೆರವಣಿಗೆ ನಡೆಸಿದ ರೈತ ಮುಖಂಡರು ಬಳಿಕ ತಾಲ್ಲೂಕು ಕಚೇರಿ ಎದುರು ರಾಜ್ಯ ಸರ್ಕಾರ ಹಾಗೂ ನಿರ್ವಹಣಾ ಸಮಿತಿ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರೈತರು ಇದುವರೆಗೂ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದು, ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ನೀರು ನಿಲ್ಲಿಸದೆ ಹೋದರೆ, ಕಾನೂನು ಭಂಗ ಚಳುವಳಿಗೆ ಇಳಿಯಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist