ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಚಿತ್ರದುರ್ಗ : ನಿಯಂತ್ರಣ ತಪ್ಪಿ ಸೇತುವೆಗೆ ಕಾರು ಡಿಕ್ಕಿ – ಪುಟಾಣಿ ಮಕ್ಕಳು ಸೇರಿ ನಾಲ್ವರು ಸಾವು

Twitter
Facebook
LinkedIn
WhatsApp
ಚಿತ್ರದುರ್ಗ : ನಿಯಂತ್ರಣ ತಪ್ಪಿ ಸೇತುವೆಗೆ ಕಾರು ಡಿಕ್ಕಿ – ಪುಟಾಣಿ ಮಕ್ಕಳು ಸೇರಿ ನಾಲ್ವರು ಸಾವು

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು (Car) ಸೇತುವೆಗೆ ಡಿಕ್ಕಿಯಾದ ಪರಿಣಾಮ ಮೂವರು ಪುಟಾಣಿ ಮಕ್ಕಳು (Children) ಸಹಿತ ನಾಲ್ವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಚಳ್ಳಕೆರೆ (Challakere) ತಾಲೂಕಿನ ಸಾಣಿಕೆರೆ ಬಳಿ ನಡೆದಿದೆ.

ಮೃತರನ್ನು ಲಿಂಗಪ್ಪ (26), ಸಿಂಧುಶ್ರೀ (2), ಹಯ್ಯಾಳಪ್ಪ (5 ತಿಂಗಳು), ರಕ್ಷಾ (3 ತಿಂಗಳು) ಎಂದು ಗುರುತಿಸಲಾಗಿದೆ. ಅಪಘಾತಕ್ಕೀಡಾದವರೆಲ್ಲರೂ ರಾಯಚೂರು (Raichur) ಜಿಲ್ಲೆ ದೇವದುರ್ಗ ತಾಲೂಕಿನ ದಂಡಮ್ಮನಹಳ್ಳಿ ಗ್ರಾಮದ ಕೂಲಿ ಕಾರ್ಮಿಕರಾಗಿದ್ದು, ಕೆಲಸಕ್ಕಾಗಿ ಬೆಂಗಳೂರಿನತ್ತ (Bengaluru) ಪಯಣ ಬೆಳೆಸಿದ್ದರು. ಒಂದೇ ಕುಟುಂಬದ ಕಾರ್ಮಿಕರಾಗಿದ್ದು, ತಮ್ಮ ಮಕ್ಕಳ ಸಹಿತ ಕಾರಲ್ಲಿ ಹೊರಟಿದ್ದರು. ಬೆಳಗ್ಗಿನ ಜಾವ ನಿದ್ರೆ ಮಂಪರಿನಲ್ಲಿದ್ದ ಕಾರಿನ ಚಾಲಕ ರಸ್ತೆ ಬದಿಯಲ್ಲಿದ್ದ ಸೇತುವೆಗೆ (Bridge) ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಇನ್ನೂ ಮೂವರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳನ್ನು ಯಲ್ಲಮ್ಮ (30), ಮಲ್ಲಮ್ಮ (20) ಹಾಗೂ ನಾಗಪ್ಪ (35) ಎಂದು ಗುರುತಿಸಲಾಗಿದೆ. ಅವರಲ್ಲಿ ಮಲ್ಲಮ್ಮನ ಸ್ಥಿತಿ ಗಂಭೀರವಾಗಿದೆ. ಘಟನಾ ಸ್ಥಳಕ್ಕೆ ಪಿಎಸ್‌ಐ ಶಿವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಬಿಟ್ ಕಾಯಿನ್ ಅಕ್ರಮ ಪ್ರಕರಣದಲ್ಲಿ ಮೊದಲ ಅರೆಸ್ಟ್- ಇಬ್ಬರ ಬಂಧನ

ಬೆಂಗಳೂರು: ಬಿಟ್ ಕಾಯಿನ್ (Bit Coin) ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಅರೆಸ್ಟ್ ಮಾಡಲಾಗಿದ್ದು, ಎಸ್‌ಐಟಿ (SIT) ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದಾರೆ.

ಇನ್ಸ್ಪೆಕ್ಟರ್ ಪ್ರಶಾಂತ್ ಬಾಬು ಮತ್ತು ಸಂತೋಷ್‌ನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದು, ಸಾಕ್ಷ್ಯ ನಾಶ ಮಾಡಿದ ಹಿನ್ನೆಲೆ ಈ ಇಬ್ಬರನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಐವರನ್ನು ವಶಕ್ಕೆ ಪಡೆದಿದ್ದರು. ಬಂಧಿತರಲ್ಲಿ ಪ್ರಶಾಂತ್ ಬಾಬು ಸೈಬರ್ ಇನ್ಸ್ಪೆಕ್ಟರ್ ಆಗಿದ್ದು, ಸಂತೋಷ್ ಸೈಬರ್ ಸೆಂಟರ್ ವ್ಯಕ್ತಿ ಆಗಿದ್ದ

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು (CCB Police) ಶ್ರೀಕಿಯನ್ನು 90 ದಿನ ಪೊಲೀಸ್ ಕಸ್ಟಡಿಯಲ್ಲಿ ಇರಿಸಿಕೊಂಡಿದ್ದರು. ಸಿಸಿಬಿ ಬಂಧನದಲ್ಲಿದ್ದಾಗ ಬಿಟ್ ಕಾಯಿನ್ ಅಕ್ರಮ ಆಗಿರೋದು ಸಾಬೀತಾಗಿದೆ. ಅಕ್ರಮ ಸಾಬೀತಾದ ಹಿನ್ನೆಲೆ ಬಂಧಿಸಲಾಗಿದೆ.

90 ದಿನ ಪೊಲೀಸ್ ಕಸ್ಟಡಿಯಲ್ಲಿ ಇದ್ದಾಗ ಹೊಸ ಲ್ಯಾಪ್‌ಟ್ಯಾಪ್ ಖರೀದಿ ಮಾಡಿದ್ದರು. ಲ್ಯಾಪ್‌ಟಾಪ್ ಅನ್ನು ತಂತ್ರಜ್ಞಾನ ಬಳಸಿ ಸಾಕ್ಷ್ಯ ನಾಶ ಮಾಡಿದ್ದಾರೆ. ಕೋಟ್ಯಂತರ ರೂ. ಮೌಲ್ಯದ ಬಿಟ್ ಕಾಯಿನ್‌ಗಳ ವರ್ಗಾವಣೆ ಆಗಿದೆ. ಹೀಗಾಗಿ ಮಾಹಿತಿ ಆಧರಿಸಿ ಇಬ್ಬರನ್ನು ಸುದೀರ್ಘ ವಿಚಾರಣೆ ಮಾಡಿದ್ದಾರೆ. ಇನ್ನುಳಿದ ಮೂವರಿಗೆ ಎಸ್‌ಐಟಿ ಅಧಿಕಾರಿಗಳು ನೋಟಿಸ್ ಕೊಟ್ಟು ವಿಚಾರಣೆಗೆ ಕರೆದಿದ್ದಾರೆ. 

ಇಂದು ಮೂವರು ಡಿವೈಎಸ್ಪಿಗಳನ್ನು ಎಸ್‌ಐಟಿ ವಿಚಾರಣೆಗೆ ಕರೆದಿದೆ. ಸಿಸಿಬಿಯಲ್ಲಿ ಅಧಿಕಾರಿಗಳು ಶ್ರೀಕಿಯನ್ನು ತನಿಖೆ ನಡೆಸಿದ್ದು, ಇಂದು ವಿಚಾರಣೆಗೆ ಹಾಜರಾಗಲಿದ್ದಾನೆ. ಪ್ರಕರಣದ ಕುರಿತು ಅರೆಸ್ಟ್ ಪರ್ವ ಇಂದೂ ಸಹ ಮುಂದುವರಿಯಲಿದ್ದು, ಅಕ್ರಮ ಸಾಬೀತಾದ ಹಿನ್ನೆಲೆ ತನಿಖೆಯನ್ನು ಚುರುಕುಗೊಳಿಸಲಾಗಿದೆ. ತನಿಖೆ ದೊಡ್ಡ ದೊಡ್ಡವರ ಬುಡಕ್ಕೂ ಬರುವ ಸಾಧ್ಯತೆಯಿದೆ. 

ಬಂಧಿತರನ್ನು ಪೊಲೀಸರು ಇಂದು ಕೋರ್ಟ್‌ಗೆ ಹಾಜರುಪಡಿಸಲಿದ್ದಾರೆ. ಮಧ್ಯಾಹ್ನದ ಬಳಿಕ ಬಂಧಿತರನ್ನು ಕೋರ್ಟ್‌ಗೆ ಹಾಜರುಪಡಿಸಲಿದ್ದು, 14 ದಿನ ಪೊಲೀಸ್ ಕಸ್ಟಡಿಗೆ ಪಡೆಯಲು ತಯಾರಿ ನಡೆದಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist