ಗುರುವಾರ, ಮಾರ್ಚ್ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನಗರಸಭೆ ಉಪಾಧ್ಯಕ್ಷೆ ಉಮಾದೇವಿ ರಾಜೀನಾಮೆ

Twitter
Facebook
LinkedIn
WhatsApp
food 01 080618 2

ಚಿಕ್ಕಮಗಳೂರು:  ನಗರಸಭೆ ಉಪಾಧ್ಯಕ್ಷೆ ಉಮಾದೇವಿ ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಚಿಕ್ಕಮಗಳೂರು ನಗರಸಭೆ ಮೊದಲ ಅವಧಿಯ ಉಪಾಧ್ಯಕ್ಷ ಸ್ಥಾನ ಬಿಸಿಎಂ (ಬಿ)ಗೆ ಮೀಸಲಾಗಿದ್ದು, ಬಿಜೆಪಿಯಲ್ಲಿ ಉಮಾದೇವಿ, ಭವ್ಯಾ ಮಂಜುನಾಥ್ ಹಾಗೂ ಅಮೃತೇಶ್ ಅವರು ಈ ಮೀಸಲಾತಿಗೆ ಬರುವುದರಿಂದ ಮೊದಲ ಅವಧಿಗೆ ಉಮಾದೇವಿ ಅವರಿಗೆ ಅವಕಾಶ ನೀಡಲಾಗಿತ್ತು. ಅವರು ಈಗಾಗಲೇ 18 ತಿಂಗಳು ನಗರಸಭೆ ಉಪಾಧ್ಯಕರಾಗಿದ್ದು ಇದೀಗ ರಾಜೀನಾಮೆ ನೀಡಿದ್ದಾರೆ.

 ಇನ್ನುಳಿದ 12 ತಿಂಗಳ ಅವಧಿ ಬಿಜೆಪಿಯಲ್ಲಿ ಉಪಾಧ್ಯಕ್ಷರ ಆಕಾಂಕ್ಷಿ ಸಾಲಿನಲ್ಲಿ ಭವ್ಯ ಮಂಜುನಾಥ್ ಹಾಗೂ ಅಮೃತೇಶ್ ಇರುವುದರಿಂದ ಯಾರಿಗೆ ಉಪಾಧ್ಯಕ್ಷರಾಗಲು ಅವಕಾಶ ಸಿಗುತ್ತದೆ ಎಂಬ ಕುತೂಹಲ ಜನರ ಮುಂದೆ ಇದೆ.

ಉಗ್ರರನ್ನು ಕಾಂಗ್ರೆಸ್ ರಕ್ಷಿಸುತ್ತಿದೆ: ಶೋಭಾ ಕರಂದ್ಲಾಜೆ ವಾಗ್ದಾಳಿ

ನವದೆಹಲಿ: ಕಾಂಗ್ರೆಸ್ ಸರ್ಕಾರ (Congress Govt) ಉಗ್ರರರನ್ನು ರಕ್ಷಣೆ ಮಾಡುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಮತ್ತೊಂದು ಉಗ್ರಗಾಮಿ ಚಟುವಟಿಕೆ ಬಯಲಾಗಿದೆ. 2008ರ ಸರಣಿ ಸ್ಫೋಟ ನಡೆದಿತ್ತು, ಆರೋಪಿ ಜೈಲಿನಲ್ಲಿದ್ದಾನೆ. ಜಾಹಿದ್ ತರ್ಬೇಜ್ ಮನೆಯಲ್ಲಿ ನಾಲ್ಕು ಜೀವಂತ ಗ್ರಾನೈಡ್ ಸಿಕ್ಕಿವೆ. ಬಂಧಿಸಿದವರ ಬಳಿ ಏಳು ಕಂಟ್ರಿಮೇಡ್ ಬುಲೆಟ್, ಸ್ಯಾಟಲೈಟ್ ಫೋನ್ ಸೆಟ್ ಸಿಕ್ಕಿವೆ ಎಂದರು.

ಬಾಂಬ್ ಸ್ಫೋಟಕ್ಕೆ ಬೇಕಾದ ಸಾಮಗ್ರಿ ಸಿಕ್ಕಿವೆ. ಮೊಹಮ್ಮದ್ ಜುನೈದ್ ಸಾಮಗ್ರಿ ಸರಬರಾಜು ಮಾಡಿದ್ದಾನೆ. ಜುನೈದ್ ಪಾರ್ಸೆಲ್ ಮೂಲಕ ಸಾಮಗ್ರಿ ಕಳುಹಿಸಿದ್ದಾನೆ. ಕರ್ನಾಟಕ ಗೃಹ ಸಚಿವರು ಇವರು ಅಪರಾಧಿಗಳಲ್ಲ ಎಂದಿದ್ದಾರೆ. ತನಿಖೆಯನ್ನು ದಾರಿ ತಪ್ಪಿಸುವ ವರ್ತನೆ ಇದು. ಭಯೋತ್ಪಾದಕರ ರಕ್ಷಣೆ ಮಾಡುವ ಕೆಲಸ ನಡೆಯುತ್ತಿದೆ ಎಂದು ಕಿಡಿಕಾರಿದರು. 

ಲಷ್ಕರ್ ಇ ತೋಯ್ಬಾ ಸಂಘಟನೆ ಲಿಂಕ್ ಇದೆ. ವಿದೇಶಿ ಸಂಘಟನೆಗಳ ಕೈವಾಡ ಇದೆ. ಈ ಕೇಸ್ ಅನ್ನು ಎನ್ ಐಎ ಗೆ ವಹಿಸಬೇಕು. ಎನ್ ಐಎ (NIA)  ಇಂದ ಮಾತ್ರ ತನಿಖೆ ಸಾಧ್ಯ. ಸರ್ಕಾರ ಕೇಸ್ ಅನ್ನು ಹಗುರವಾಗಿ ತೆಗೆದುಕೊಳ್ಳಬಾರದು. ದಕ್ಷಿಣ ಭಾರತದ ರಕ್ಷಣೆಯ ದೃಷ್ಟಿಯಿಂದ ತೀರ್ಮಾನ ತೆಗೆದುಕೊಳ್ಳಬೇಕು. ನಮ್ಮ ಜನರನ್ನು ಕಾಪಾಡುವ ಜವಾಬ್ದಾರಿ ಸರ್ಕಾರದ ಮೇಲಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಸರ್ಕಾರ ಭಜರಂಗದಳದ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುತ್ತಿದೆ. ಕಾರ್ಯಕರ್ತರನ್ನು ಹೆದರಿಸುವಂತ ಕೆಲಸ ಮಾಡುತ್ತಿದೆ. ಆರ್ ಎಸ್ ಎಸ್ ಜಮೀನು ತೆಗೆದುಕೊಳ್ಳುವ ಕೆಲಸ ನಡೆಯುತ್ತಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಎಷ್ಟು ಜನರನ್ನು ಗಡಿ ಪಾಡು ಮಾಡುತ್ತೀರಿ. ನಾನು ಭಗರಂಗದಳ ಕಾರ್ಯಕರ್ತೆ, ಆರ್ ಎಸ್ ಎಸ್ ಕಾರ್ಯಕರ್ತೆ. ನನ್ನನ್ನು ಎಲ್ಲಿಗೆ ಗಡಿಪಾರು ಮಾಡುತ್ತೀರಿ ಎಂದು ಪ್ರಶ್ನಿಸಿದ್ದಾರೆ.

ದೇಶದಲ್ಲಿ ಪ್ರಜಾಪ್ರಭುತ್ವ ಜೀವಂತವಾಗಿದೆ. ಭಯೋತ್ಪಾದಕರನ್ನು ರಕ್ಷಣೆ ಮಾಡುತ್ತೀರಿ. ಇನ್ನೊಂದು ಕಡೆ ಸಂಘಪರಿವಾರದವರನ್ನು ಟಾರ್ಗೆಟ್ ಮಾಡುತ್ತೀರಿ. 135 ಸೀಟು ಬಂದಿದೆ ಎಂಬ ಅಹಂಕಾರದಿಂದ ಮುಂದುವರಿದರೆ ಜನರು ಪಾಠ ಕಲಿಸುತ್ತಾರೆ ಎಂದು ಶೋಭಾ ಕರಂದ್ಲಾಜೆ ಗರಂ ಆಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist