ಮಂಗಳವಾರ, ಜೂನ್ 18, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜೆಡಿಎಸ್‌‌ ಪಕ್ಷದಿಂದ ಸಿಎಂ ಇಬ್ರಾಹಿಂ ಉಚ್ಛಾಟನೆ; ಹೆಚ್​ ಡಿ ಕುಮಾರಸ್ವಾಮಿಗೆ ರಾಜ್ಯಾಧ್ಯಕ್ಷ ಪಟ್ಟ!

Twitter
Facebook
LinkedIn
WhatsApp
ಜೆಡಿಎಸ್‌‌ ಪಕ್ಷದಿಂದ ಸಿಎಂ ಇಬ್ರಾಹಿಂ ಉಚ್ಛಾಟನೆ; ಹೆಚ್​ ಡಿ ಕುಮಾರಸ್ವಾಮಿಗೆ ರಾಜ್ಯಾಧ್ಯಕ್ಷ ಪಟ್ಟ!

ಬೆಂಗಳೂರು: ಜೆಡಿಎಸ್‌ (JDS) ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ (CM Ibrahim) ಅವರನ್ನು ಪಕ್ಷದಿಂದಲೇ ಉಚ್ಛಾಟನೆ ಮಾಡಲಾಗಿದೆ.

ಇಬ್ರಾಹಿಂ ಜಾಗಕ್ಕೆ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಆಯ್ಕೆ ಆಗುವ ಸಾಧ್ಯತೆಯಿದೆ. ಜೆಡಿಎಸ್‌ ಕೋರ್‌ ಕಮಿಟಿ ಸಭೆಯಲ್ಲಿ ಉಚ್ಛಾಟನೆ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಜೆಡಿಎಸ್‌ ವರಿಷ್ಠ ಹೆಚ್‌ಡಿ ದೇವೇಗೌಡರು (HD Devegowda) ಉಚ್ಛಾಟನೆ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ.  ಲೋಕಸಭಾ ಚುನಾವಣೆ ನಡೆಯುವವರೆಗೂ ಕುಮಾರಸ್ವಾಮಿ ಅವರನ್ನು ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಸಿಎಂ ಇಬ್ರಾಹಿಂ ಅವಧಿಯಲ್ಲಿ ನೇಮಕಗೊಂಡ ಎಲ್ಲಾ ಘಟಕಗಳನ್ನು ವಿಸರ್ಜನೆ ಮಾಡಲಾಗಿದೆ ಎಂದು ದೇವೇಗೌಡರು ತಿಳಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್‌ ದೋಸ್ತಿ ಮಾಡಿದ್ದಕ್ಕೆ ಸಿಎಂ ಇಬ್ರಾಹಿಂ ಅಸಮಾಧಾನಗೊಂಡು ಪಕ್ಷ ವಿರೋಧಿ ಹೇಳಿಕೆ ನೀಡಿದ್ದರು.

ಡಿಕೆಶಿ ಅರ್ಜಿ ವಜಾಗೊಂಡಿದ್ದು ಯಾಕೆ? ಹೈಕೋರ್ಟ್‌ ನೀಡಿದ ಕಾರಣ ಏನು?

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ವಿರುದ್ಧದ ಆದಾಯ ಮೀರಿ ಆಸ್ತಿ ಪ್ರಕರಣದ (Disproportionate Asset Case) ತನಿಖೆಯನ್ನು ಪೂರ್ಣಗೊಳಿಸಿ ಚಾರ್ಜ್‌ಶೀಟ್‌ (Chargesheet) ಅನ್ನು 3 ತಿಂಗಳ ಒಳಗಡೆ ಸಲ್ಲಿಸಬೇಕೆಂದು ಹೈಕೋರ್ಟ್‌ ಸಿಬಿಐಗೆ ಸೂಚಿಸಿದೆ.

ಸಿಬಿಐ ತನಿಖೆ ರದ್ದು ಕೋರಿ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಇಂದು ನ್ಯಾಯಮೂರ್ತಿ ಕೆ.ನಟರಾಜನ್ ನೇತೃತ್ವದ ಪೀಠ ಈ ಕುರಿತು ತೀರ್ಪು ನೀಡಿದ್ದು, ತನಿಖೆಗೆ ನೀಡಿದ್ದ ಮಧ್ಯಂತರ ತಡೆಯನ್ನು ತೆರವುಗೊಳಿಸಿ ಇಂದಿನಿಂದಲೇ ಸಿಬಿಐ (CBI) ಡಿಕೆಶಿ ಅವರನ್ನು ವಿಚಾರಣೆ ನಡೆಸಬಹುದು ಎಂದು ತೀರ್ಪು ನೀಡಿದೆ.

ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್‌ನ (High Court) ಕೆ ನಟರಾಜನ್ ಅವರ ಪೀಠ ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ. ಅರ್ಜಿ ವಜಾ ಮಾಡುವಾಗ ಕೆಲವೊಂದು ಪ್ರಮುಖ ಅಂಶಗಳನ್ನು ಉಲ್ಲೇಖಿಸಿದೆ.

ಕೋರ್ಟ್‌ ಹೇಳಿದ್ದೇನು?
ಅರ್ಜಿದಾರ ಡಿಕೆ ಶಿವಕುಮಾರ್‌ ಅರ್ಜಿಯನ್ನು ತುಂಬಾ ವಿಳಂಬವಾಗಿ ಸಲ್ಲಿಸಿದ್ದಾರೆ. ಈಗಾಗಲೇ ತನಿಖೆ ಕೊನೆಯ ಹಂತದಲ್ಲಿ ಇದ್ದು, ಕೆಲವೇ ದಿನದಲ್ಲಿ ಪ್ರಕರಣದ ತನಿಖೆ ಸಂಪೂರ್ಣ ಮಾಡುತ್ತೇವೆ ಎಂದು ಹೇಳಿದೆ. ಈ ಹಂತದಲ್ಲಿ ಪ್ರಕರಣಕ್ಕೆ ತಡೆ ನೀಡುವುದು ಸರಿಯಲ್ಲ.

ಇನ್ನು ತನಿಖೆ ವಿಳಂಬ ಆಗಿದ್ದರೆ ತನಿಖೆ ಚುರುಕುಗೊಳಿಸಿ ಎಂದು ನಿರ್ದೇಶನ ನೀಡಬಹುದು. ಸಿಬಿಐ ದೋಷಾರೋಪ ಪಟ್ಟಿ ಹಾಕಿದ ಬಳಿಕವೂ ನೂನ್ಯತೆಗಳು ಇದ್ದರೆ ಅರ್ಜಿ ಸಲ್ಲಿಸಬಹುದು.

 

ಏನಿದು ಪ್ರಕರಣ?
2017ರಲ್ಲಿ ಆದಾಯ ತೆರಿಗೆ ಇಲಾಖೆ ಡಿಕೆ ಶಿವಕುಮಾರ್ ಮೇಲೆ ದಾಳಿ ನಡೆಸಿತ್ತು. ಐಟಿ ಇಲಾಖೆ ನೀಡಿದ ಮಾಹಿತಿ ಆಧರಿಸಿ ಜಾರಿ ನಿರ್ದೇಶನಾಲಯ ಡಿಕೆಶಿ ವಿರುದ್ಧ ತನಿಖೆ ಆರಂಭಿಸಿತ್ತು. ಇಡಿ ತನಿಖೆಯನ್ನು ಆಧರಿಸಿ ಡಿಕೆಶಿ ವಿರುದ್ಧ ಎಫ್‌ಐಆರ್ ದಾಖಲಿಸಲು ಸಿಬಿಐ ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು.  ಸರ್ಕಾರ 2019ರ ಸೆ.25ರಂದು ಅನುಮತಿ ನೀಡಿದ ಬೆನ್ನಲ್ಲೇ 2020ರ ಅಕ್ಟೋಬರ್‌ 3 ರಂದು ಡಿಕೆ ಶಿವಕುಮಾರ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು.  ಈ ತನಿಖೆಗೆ ತಡೆ ಕೋರಿ ಡಿಕೆಶಿ  ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ