ಹೊಸ ಆರೋಗ್ಯ ಕಾರ್ಡ್ ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ
ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯ ಪರಿಷ್ಕೃತ ಕಾರ್ಡ್ ವಿತರಣೆಗೆ ಚಾಲನೆ ನೀಡಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ಮತ್ತು ಆಯುಕ್ತ ರಂದೀಪ್ ಮೊದಲಾದವರು ಉಪಸ್ಥಿತರಿದ್ದರು.
ನಂತರ ಮಾತನಾಡಿದ ಮುಖ್ಯಮಂತ್ರಿ, ಈ ಯೋಜನೆಯಲ್ಲಿ ರಾಜ್ಯ ಸರ್ಕಾರದ ಕೊಡುಗೆ ಶೇ. 64 ರಿಂದ ಶೇ. 70 ರಷ್ಟಿದೆ. ಕೇಂದ್ರದಿಂದ ಶೇಕಡಾ 30 ರಿಂದ 36 ರಷ್ಟು ಫಲಾನುಭವಿಗಳಿಗೆ ಆರ್ಥಿಕ ನೆರವು ದೊರೆಯಲಿದೆ. ಬಿ.ಪಿ.ಎಲ್. ಪಡಿತರ ಚೀಟಿದಾರರಿಗೆ 5 ಲಕ್ಷ ಹಾಗೂ ಎಪಿಎಲ್ ಕಾರ್ಡ್ ಹೊಂದಿದವರಿಗೆ ಒಂದೂವರೆ ಲಕ್ಷ ಹಣಕಾಸಿನ ನೆರವು ದೊರೆಯಲಿದೆ ಎಂದರು.
ಮುಖ್ಯಮಂತ್ರಿ @siddaramaiah ಅವರು ಇಂದು ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಯೋಜನೆಯ ಪರಿಷ್ಕೃತ ಕಾರ್ಡ್ ವಿತರಣೆಗೆ ಚಾಲನೆ ನೀಡಿದರು.
— CM of Karnataka (@CMofKarnataka) December 6, 2023
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಈ ಯೋಜನೆಯಲ್ಲಿ ರಾಜ್ಯ ಸರ್ಕಾರದ ಕೊಡುಗೆ ಶೇ 64 ರಿಂದ ಶೇ70 ರಷ್ಟಿದೆ. pic.twitter.com/y3wFn5JFEE
ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಇದುವರೆಗೆ 5 ಕೋಟಿ 54 ಸಾವಿರ ಜನರು ನೋಂದಣಿ ಮಾಡಿದ್ದು, ಅವರೆಲ್ಲರಿಗೂ ಕಾರ್ಡ ವಿತರಣೆ ಜರುಗಲಿದೆ. ತದನಂತರ ನೋಂದಣಿ ಮಾಡಿದವರಿಗೂ ಆರೋಗ್ಯ ಕಾರ್ಡ್ ನೀಡಲಾಗುವುದು. ಈ ಸಿದ್ಧರಾಮಯ್ಯನವರು ಮುಖ್ಯಮಂತ್ರಿ ಆಗಿದ್ದಾಗ ದೇಶದಲ್ಲಿ ಪ್ರಪಥಮವಾಗಿ ಈ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಿತ್ತು. ನಂತರ ಕೇಂದ್ರ ಸರ್ಕಾರವೂ ಸಹಿತ ಯೋಜನೆಯ ಅನುಷ್ಠಾನಕ್ಕೆ ಕೈಜೋಡಿಸಿತು ಎಂದು ತಿಳಿಸಿದರು.
ಯತ್ನಾಳ್ 1 ವಾರದಲ್ಲಿ ಆರೋಪ ಸಾಬೀತು ಪಡಿಸಲಿ, ಇಲ್ಲದಿದ್ದರೆ ಪಾಕಿಸ್ತಾನಕ್ಕೆ ಹೋಗಲಿ: ತನ್ವೀರ್ ಹಶ್ಮಿ
ವಿಜಯಪುರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತನ್ನ ಮಾಡಿರುವ ಆರೋಪವನ್ನು ಒಂದು ವಾರದಲ್ಲಿ ಸಾಬೀತು ಪಡಿಸಿದರೆ ನಾನು ದೇಶ ತೊರೆಯಲು ಸಿದ್ಧನಿದ್ದೇನೆ. ಒಂದು ವೇಳೆ ಆರೋಪ ಸಾಬೀತು ಪಡಿಸಲು ವಿಫಲವಾದರೆ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಪಾಕಿಸ್ತಾನಕ್ಕೆ ಪಲಾಯನ ಮಾಡಬೇಕು ಎಂದು ವಿಜಯಪುರದ ಹಜರತ್ ಹಾಶಿಂಪೀರ ದರ್ಗಾದ ಧರ್ಮಾಧಿಕಾರಿ ಸೈಯದ್ ಮೊಹಮ್ಮದ್ ತನ್ವೀರ್ ಹಶ್ಮಿ ಅವರು ಬುಧವಾರ ಸವಾಲು ಹಾಕಿದ್ದಾರೆ.
ಇಂದು ತಮ್ಮ ವಿರುದ್ಧದ ಆರೋಪಕ್ಕೆ ಸಂಬಂಧಿಸಿ ಮಾಧ್ಯಮಕ್ಕೆ ಹೇಳಿಕೆ ಬಿಡುಗಡೆ ಮಾಡಿರುವ ಸೈಯದ್ ಮೊಹಮ್ಮದ್ ತನ್ವೀರ್ ಹಶ್ಮಿ, “ಒಂದು ವೇಳೆ ಬಸನಗೌಡ ಪಾಟೀಲ್ ಯತ್ನಾಳ್ ಅವರು ನನ್ನ ವಿರುದ್ಧದ ಆರೋಪವನ್ನು ಸಾಬೀತು ಮಾಡಿದರೆ ನಾನು ಈ ದೇಶವನ್ನೆ ತ್ಯಾಗ ಮಾಡಿ ಪಲಾಯನ ಮಾಡುತ್ತೇನೆ. ಸಾಬೀತು ಮಾಡುವಲ್ಲಿ ವಿಫಲವಾದರೆ, ಬಸನಗೌಡ ಪಾಟೀಲ್ ಯತ್ನಾಳ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಪಾಕಿಸ್ತಾನಕ್ಕೆ ಪಲಾಯನವಾಗಬೇಕು ಅಂತ ಸವಾಲೆಸೆಯುತ್ತೇನೆ. ಯತ್ನಾಳ ಅವರ ಹೇಳಿಕೆಯನ್ನು ಗಮನಿಸಿದ್ದೇನೆ. ಇದರಲ್ಲಿ ಯಾವುದೇ ರೀತಿಯ ಸತ್ಯಾಂಶ ಇರುವುದಿಲ್ಲ” ಎಂದು ಹೇಳಿದ್ದಾರೆ.
ಐಸಿಸ್ ಜೊತೆ ನಂಟಿದೆ ಎಂದು ಯತ್ನಾಳ್ ಅವರು ಬಿಡುಗಡೆ ಮಾಡಿದ ಚಿತ್ರಗಳು ನನ್ನ ಅಧಿಕೃತ ಫೇಸ್ ಬುಕ್ ಪೇಜ್ ಗೆ ನಾನೇ ಅಪ್ ಲೋಡ್ ಮಾಡಿರುವ ಚಿತ್ರಗಳಾಗಿವೆ. ಸುಮಾರು 12 ವರ್ಷಗಳ ಹಿಂದೆ ನಾನು ಇರಾಖ್ ನ ಬಾಗ್ದಾದ್ ಗೆ ತೆರಳಿದ್ದೆ. ಈ ವೇಳೆ ಪ್ರಸಿದ್ಧ ಸೂಫಿ ಮಹಬೂಬ್ ಎಸುಭಾನಿ ಗೌಸ್ ಎ ಆಜಂ ಅವರ ದರ್ಶನಕ್ಕೆ ಹೋದಾಗ ಅಲ್ಲಿನ ದರ್ಗಾದ ಪೀಠಾಧಿಪತಿ ಖಲೀದ್ ಜಿಲಾನಿ ಅವರ ಆರ್ಶೀವಾದ ಪಡೆಯುವ ಸಂದರ್ಭದಲ್ಲಿ ತೆಗೆದಂತಹ ಚಿತ್ರಗಳಾಗಿವೆ. ಮತ್ತೊಂದು ಚಿತ್ರ ಅವರ ಅಂಗ ರಕ್ಷಕ ನನ್ನನ್ನು ಪೀಠಕ್ಕೆ ಕರೆದುಕೊಂಡು ಹೋಗುವ ಸಮಯದಲ್ಲಿ ತೆಗೆದ ಚಿತ್ರವಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
Chief Minister Siddaramaiah shared the dias with ISIS supporters and Terror Sympathizers yesterday at Hubli.
— Basanagouda R Patil (Yatnal) (@BasanagoudaBJP) December 6, 2023
Tanveer Peera is a Terror Sympathiser who has links with Terror Outfits across the Middle East.
Attached Images are his recent visits to the Middle East meeting the… pic.twitter.com/zvuwBNWXRn