ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

‘ಶಕ್ತಿ’ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ; ಬಿಜೆಪಿ, ಜೆಡಿಎಸ್​ ಟೀಕೆಗಳಿಗೆ ತಿರುಗೇಟು ನೀಡಿದ ಡಿಕೆ ಶಿವಕುಮಾರ್!

Twitter
Facebook
LinkedIn
WhatsApp
SIDDARAMAIAH 3

ಬೆಂಗಳೂರು: ಕಾಂಗ್ರೆಸ್ ಸರ್ಕಾರದ 5 ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಇಂದು ಉದ್ಘಾಟಿಸಿದ್ದಾರೆ. ವಿಧಾನಸೌಧ (Vidhanasoudha) ದಲ್ಲಿ ನಾಡಗೀತೆಯೊಂದಿಗೆ ವೇದಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಸಿಎಸ್ ವಂದಿತಾ ಶರ್ಮಾ ಅವರಿಗೆ ಮೊದಲ ಶೂನ್ಯ ಟಿಕೆಟ್ ನೀಡಿ ಉಚಿತ ಪ್ರಯಾಣ (Free Bus Ticket For Women) ಕ್ಕೆ ಚಾಲನೆಯನ್ನು ಸಿಎಂ ನೀಡಿದರು. 

ಇದೇ ವೇಳೆ ಕಾರ್ಯಕ್ರಮದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್(D. K Shivakumar) ‘ಚುನಾವಣೆ ಸಂದರ್ಭದಲ್ಲಿ ರಾಜ್ಯದ ಜನರಿಗೆ 5 ಗ್ಯಾರಂಟಿ ಕೊಟ್ಟಿದ್ದೆವು, ಇಂದು ಶಕ್ತಿ ಯೋಜನೆಗೆ ಚಾಲನೆ ನೀಡಿದ್ದೇವೆ. ಈ ಕಾರ್ಯಕ್ರಮವು ಬೆಂಗಳೂರಿನಲ್ಲಿ ಮಾತ್ರ ನಡೆಯುತ್ತಿಲ್ಲ, ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಈ ಕಾರ್ಯಕ್ರಮ ನಡೆಯುತ್ತಿದೆ. ರಾಜ್ಯದ ಜನರು ನಮ್ಮ ಮೇಲೆ ನಂಬಿಕೆ ಇಟ್ಟು ಅಧಿಕಾರ ಕೊಟ್ಟಿದ್ದು, ಈ ಮೂಲಕ ಅವರ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದರು.

ನಮ್ಮ ಸರ್ಕಾರ ನೀಡುತ್ತಿರುವ ಐದು ಗ್ಯಾರಂಟಿಗಳ ಬಗ್ಗೆ ಬಿಜೆಪಿ, ಜೆಡಿಎಸ್​​​ ಸ್ನೇಹಿತರು ಟೀಕೆಗಳ ಸುರಿಮಳೆಯನ್ನೇ ಸುರಿಸ್ತಿದ್ದಾರೆ. ವಿಪಕ್ಷಗಳಿಗೆ ಉತ್ತರ ನೀಡುವ ಸಾಮರ್ಥ್ಯ ನಮ್ಮ ಬಳಿ ಇಲ್ಲ. ಬಹಳ ಚರ್ಚೆ ಮಾಡಿಯೇ ನಾವು ಶಕ್ತಿ ಯೋಜನೆ ಜಾರಿ ಮಾಡಿದ್ದೇವೆ. ಇದರಿಂದ ನಮ್ಮ ರಾಜ್ಯ ದಿವಾಳಿ ಆಗುತ್ತೆಂದು ಬಿಜೆಪಿಯವರು ಹೇಳ್ತಿದ್ದಾರೆ, ಆದರೆ ಈಗ ಮಧ್ಯಪ್ರದೇಶದಲ್ಲಿರುವ ಅವರದ್ದೇ ಬಿಜೆಪಿ ಸರ್ಕಾರ ಅಲ್ಲಿನ ಮಹಿಳೆಯರಿಗೆ 1 ಸಾವಿರ ಕೊಡುವುದಾಗಿ ಹೇಳಿದ್ದಾರೆ. ಅದೇನೆ ಇರಲಿ ನಾವು ರಾಜ್ಯದ ಜನರಿಗೆ ಕೊಟ್ಟಿರುವ ಮಾತನ್ನು ಉಳಿಸಿಕೊಳ್ಳುತ್ತೇವೆ ಎಂದರು.

ಇದೇ ವೇಳೆ ಮಾತನಾಡುತ್ತಾ ‘ಹೆಣ್ಣು ಕುಟುಂಬದ ಕಣ್ಣು ಅನ್ನೋ ಹಾಗೆ ಸರ್ಕಾರದ ಕಣ್ಣು ವಂದಿತ ಶರ್ಮ, ಜನರ ಸೇವೆ ಜನಾರ್ಧನ ಸೇವೆ ಜನರ ಕೆಲಸ ದೇವರ ಕೆಲಸ ಅಂತ ಕೆಂಗಲ್ ಹನುಮಂತಯ್ಯ ಬರೆಸಿದ್ದಾರೆ. ದೇಶಕ್ಕೆ ಇತಿಹಾಸ ಸ್ವಾತಂತ್ರ್ಯ ಬದಲಾವಣೆ ತಂದುಕೊಟ್ಟ ಪಕ್ಷ ನಮ್ಮದು. ಡಬಲ್ ಇಂಜಿನ್ ಸರ್ಕಾರ ಇದ್ದರೂ ಕೂಡ ನಮ್ಮ ಆಡಳಿತ, ನುಡಿ, ನಡೆ ಮೇಲೆ ಜನ ನಮ್ಮ ಮೇಲೆ ನಂಬಿಕೆ ಇಟ್ಟಿದ್ದಾರೆ. ನಾವು ಕೇವಲ ಕೆಲಸಗಳ ಮೂಲಕವೇ ನಾವು ಉತ್ತರ ನೀಡ್ತೇವೆ. ಎರಡು ಮೂರು ತಿಂಗಳಲ್ಲೇ ಎಲ್ಲ ಗ್ಯಾರಂಟಿಗಳ ಜಾರಿಗೆ ತರ್ತೇವೆ ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist