ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಗೃಹ ಸಚಿವ ಜಿ ಪರಮೇಶ್ವರ್ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಆಪ್ತರ ಜೊತೆ ಮೀಟಿಂಗ್...!

Twitter
Facebook
LinkedIn
WhatsApp
ಗೃಹ ಸಚಿವ ಜಿ ಪರಮೇಶ್ವರ್ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಆಪ್ತರ ಜೊತೆ ಮೀಟಿಂಗ್...!

ಬೆಂಗಳೂರು, ಅ.28: ಕಾಂಗ್ರೆಸ್ ಪಕ್ಷದಲ್ಲಿ‌ ಆಗುತ್ತಿರುವ ಬೆಳವಣಿಗೆಗಳ ಕುರಿತು ಅ.27ರ ಶುಕ್ರವಾರ ರಾತ್ರಿ ಸಿಎಂ ಸಿದ್ದರಾಮಯ್ಯ  ತನ್ನ ಆಪ್ತ ಸಚಿವರ ಜೊತೆ ಸಮಾಲೋಚನೆ ನಡೆಸಿದ್ದಾರೆ. ಸದಾಶಿವನಗರದಲ್ಲಿರುವ ಗೃಹ ಸಚಿವ ಡಾ.ಜಿ ಪರಮೇಶ್ವರ್  ನಿವಾಸದಲ್ಲಿ ನಡೆದ ಸಭೆಯಲ್ಲಿ ಸಚಿವರಾದ ಹೆಚ್.ಸಿ ಮಹದೇವಪ್ಪ, ಸತೀಶ್ ಜಾರಕಿಗೊಳಿ ಔತಣಕೂಟ ನೆಪದಲ್ಲಿ ರಾಜಕೀಯ ಚರ್ಚೆ ನಡೆಸಿದ್ದಾರೆ. ಮೂರು ತಾಸಿಗೂ ಹೆಚ್ಚು ಕಾಲ ಪರಂ ನಿವಾಸದಲ್ಲಿ ರಾಜಕೀಯ ಕುರಿತಾದ ಬಿಸಿಬಿಸಿ ಚರ್ಚೆ ನಡೆಸಲಾಯ್ತು.

 

ಇನ್ನೂ ಸಭೆ ಬಳಿಕ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಊಟಕ್ಕೊಸ್ಕರ ಸೇರಿದ್ವಿ ಸಿಎಂ ಅವರು ನಮ್ಮ ಮನೆಗೆ ಬಂದಿದ್ರು. ನಾನು ಸತೀಶ್, ಮಹಾದೇವಪ್ಪನವರು ಊಟಕ್ಕೆ ಸೇರಿದ್ವಿ. ಊಟ ಮಾಡಿದ್ವಿ ಅಷ್ಟೇ ಬೇರೆ ಏನು ಚರ್ಚೆಯಾಗಿಲ್ಲ. ನಿಗಮ ಮಂಡಳಿಯ ಬಗ್ಗೆ ಇಲ್ಲಿ ಚರ್ಚೆ ಮಾಡೋಕಾಗುತ್ತಾ? ರಾಜಕೀಯವಾಗಿ ಯಾವುದೇ ಚರ್ಚೆಯಾಗಿಲ್ಲ ಎಂದರು.

ನಾನು ಸಿಎಂ ಎಲ್ಲಾ ಊಟಕ್ಕೆ ಬಂದಿದ್ವಿ. ನಾವು ಸೇರಿದ ಮೇಲೆ ರಾಜಕೀಯ ಅಲ್ಲದೇ ಬೇರೆ ಏನು ಮಾತಾಡೋದು ಅಂತ ಸಭೆ ಬಳಿಕ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸಣ್ಣಪುಟ್ಟ ರಾಜಕೀಯ ಚರ್ಚೆಯಾಗಿದೆ. ರಾಜಕೀಯ, ರಾಜಕಾರಣ ಎಂದ ಮೇಲೆ ಸಣ್ಣ ಪುಟ್ಟ ಅಸಮಾಧಾನ ಇದ್ದೆ ಇರುತ್ತೆ.‌ ಮಾತುಕತೆಗಳು ಅಗಾಗ ಅಗ್ತಿರ್ತಾವೆ ಅದು ಬಿಟ್ಟು ಬೇರೆ ಏನು ಇಲ್ಲ.‌ನಿಗಮ ಮಂಡಳಿಯ ನೇಮಕದ ಬಗ್ಗೆ ಚರ್ಚೆಯಾಗಿಲ್ಲ ಅಂತ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

 

ರಹಸ್ಯ ಸ್ಥಳದಲ್ಲಿ ಚರ್ಚೆ ನಡೆಸಿರುವ ಸಿಎಂ, ಡಿಸಿಎಂ

ಶುಕ್ರವಾರ ಮಧ್ಯಾಹ್ನವೂ ಸಹ ರಹಸ್ಯ ಸ್ಥಳದಲ್ಲಿ ಸುಮಾರು ಎರಡು ತಾಸುಗೂ ಹೆಚ್ಚು ಕಾಲ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆಶಿ ಚರ್ಚೆ ನಡೆಸಿದ್ದಾರೆ. ಮಧ್ಯಾಹ್ನ ಭೇಟಿ ಮಾಡಿ ಇಬ್ಬರೂ ಮಾತುಕತೆ ನಡೆಸಿದ್ದಾರೆ. ಇದೀಗ ಪರಮೇಶ್ವರ್ ನಿವಾಸದಲ್ಲಿ ಭೇಟಿ ಮಾತುಕತೆ ನಡೆಸಲಾಗಿದ್ದು, ಭಾರೀ ಕುತೂಹಲದ ಬೆಳವಣಿಗೆ ಕಾರಣವಾಗಿದೆ.

ಇನ್ನೂ ಈ ಡಿನ್ನರ್ ಮೀಟಿಂಗ್ ನಲ್ಲಿ‌ ರಾಜಕೀಯದ ಸಾಕಷ್ಟು ವಿದ್ಯಮಾನಗಳ ಕುರಿತು ಚರ್ಚೆಗಳು ನಡೆದಿದೆ. ರಾಜಕೀಯ ಸ್ಥಿತ್ಯಂತರದ ಬಗ್ಗೆ ಚರ್ಚೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ‌ ರಾಜ್ಯ ರಾಜಕೀಯದ ವಿದ್ಯಮಾನಗಳ ಕುರಿತ ಮಾತುಕತೆ ನಡೆದಿದೆ. ಬಣ ರಾಜಕೀಯ ಆದರೆ, ಅದರ ಮೇಲೆ ಹಿಡಿತ ಸಾಧಿಸಲು ಸಿಎಂ ಸಿದ್ದರಾಮಯ್ಯ ಪ್ರಯತ್ನ ನಡೆಸುತ್ತಿದ್ದಾರೆ. ದಲಿತ ನಾಯಕರನ್ನ ಒಟ್ಟಾಗಿ ಹಿಡಿದಿಟ್ಟುಕೊಳ್ಳುವ ಮೂಲಕ ಅಹಿಂದ ವರ್ಗದ ಮತ ಪ್ರಾಬಲ್ಯಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ದಲಿತ ವರ್ಗದವರನ್ನ ಜೊತೆಯಲ್ಲಿ ಇಟ್ಟಿಕೊಳ್ಳುವ ಮೂಲಕ ಹೈಕಮಾಂಡ್ ಸಂದೇಶ ರವಾನೆ ಮಾಡೋಕೆ‌ ಮುಂದಾಗಿದ್ದಾರೆ. ಮುಂದಿನ ದಿನಗಳಲ್ಲಿ ಯಾವುದೇ ಬದಲಾವಣೆ ಆದ್ರೂ ಕೂಡ ಸಿಎಂ ಸಿದ್ದರಾಮಯ್ಯ ಮಾತು ಮಹತ್ವದ್ದಾಗಿರುತ್ತೆ.

ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಅವಧಿ ವಿಚಾರಕ್ಕೆ ಈಗಾಗಲೇ ಕೂಗು ಎದ್ದಿದೆ. ಇದಕ್ಕೆ ಸಂಬಂಧಿಸಿದಂತೆ ದಲಿತ ಸಿಎಂ ಕಾರ್ಡನ್ನ‌ ಸಹ ಚರ್ಚಿಸಲಾಗಿದೆ. ಎರಡೂವರೆ ವರ್ಷದ ಬಳಿಕ‌ ಡಿಸಿಎಂ ಡಿಕೆ‌ಶಿವಕುಮಾರ್ ಸಿಎಂ ಆಗುತ್ತಾರೆ ಅಂತ ಶಾಸಕ ರವಿ ಗಾಣಿಗ ಹೇಳಿದ್ದಾರೆ. ಇದಕ್ಕೆ ಕೌಂಟರ್ ಕೊಡುವ ನಿಟ್ಟಿನಲ್ಲಿ ದಲಿತ ಸಿಎಂ ಕೂಗು ಎದ್ದರೂ ಅಚ್ಚರಿ ಇಲ್ಲ. ಅಹಿಂತ ನಾಯಕತ್ವವನ್ನ ಸಿಎಂ ಸಿದ್ದರಾಮಯ್ಯ ಒಗ್ಗಟ್ಟಾಗಿ ಇಟ್ಟುಕೊಂಡಿದ್ದಾರೆ. ಒಬಿಸಿ ಜೊತೆ ದಲಿತರನ್ನೂ ಸೇರಿಸಿ ಒಗ್ಗಟ್ಟಾಗಿ ಇಟ್ಟುಕೊಳ್ಳುವ ಮೂಲಕ ಹೈಕಮಾಂಡ್ ಗೂ ಸಂದೇಶ ರವಾನೆ ಮಾಡಲು ಮುಂದಾಗಿದ್ದಾರೆ. ಈ ಎಲ್ಲ ವಿಚಾರಗಳು ಡಿನ್ನರ್ ಮೀಟಿಂಗ್ ನಲ್ಲಿ ಚರ್ಚೆ ಆಗಿದೆ ಎನ್ನಲಾಗುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ