ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

CM Siddaramaiah: ನಿರ್ಮಲಾ ಸೀತಾರಾಮನ್‌, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು ಅಲ್ಲವೇ?

Twitter
Facebook
LinkedIn
WhatsApp
CM Siddaramaiah

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ ಐಆರ್ ದಾಖಲಿಸುತ್ತಿದ್ದಂತೆ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂಬ ಒತ್ತಡ, ಒತ್ತಾಯ ತೀವ್ರವಾಗಿ ಕೇಳಿಬರುತ್ತಿದೆ.

ಪ್ರತಿಪಕ್ಷ ಬಿಜೆಪಿ ನಾಯಕರು ಮುಖ್ಯಮಂತ್ರಿಗಳ (CM Siddaramaiah) ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ. ಚುನಾವಣಾ ಬಾಂಡ್ ಅಕ್ರಮಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ತಿಲಕನಗರ ಪೊಲೀಸ್ ಠಾಣೆಯಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿ ಹಲವು ಬಿಜೆಪಿ ನಾಯಕರ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ (CM Siddaramaiah), ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಚುನಾವಣಾ ಬಾಂಡ್‌ ಹಗರಣಕ್ಕೆ ಸಂಬಂಧಿಸಿದಂತೆ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರ ಮೇಲೆ ಎಫ್.ಐ.ಆರ್‌ ದಾಖಲಿಸುವಂತೆ ಆದೇಶ ನೀಡಿದೆ. ಬಿಜೆಪಿ ನಾಯಕರ ವಾದದ ಪ್ರಕಾರ ಈಗ ನಿರ್ಮಲಾ ಸೀತಾರಾಮನ್‌ ಅವರು ರಾಜೀನಾಮೆ ನೀಡಬೇಕು ಅಲ್ಲವೇ ಎಂದು ಕೇಳಿದ್ದಾರೆ.

ಚುನಾವಣಾ ಬಾಂಡ್ ದುರುಪಯೋಗ ಮಾಡಿಕೊಂಡಿರುವ ಆರೋಪದ ಮೇಲೆ ಈಗ ನಿರ್ಮಲಾ ಸೀತಾರಾಮನ್, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಕೂಡ ರಾಜೀನಾಮೆ ನೀಡಬೇಕು ಎಂದು ಹೇಳಿದ್ದಾರೆ.

ಅಧಿಕಾರಿಗಳು ಮತ್ತು ಮುಖಂಡರು ಲಂಚ ಕೇಳಿದರೆ ನನ್ನ ವಿಳಾಸಕ್ಕೆ ಪತ್ರ ಬರೆಯಿರಿ: ಡಿಕೆಶಿ

ರಾಮನಗರ: ಸರ್ಕಾರಿ ಸೌಲಭ್ಯ ಕೊಡಿಸುತ್ತೇವೆ, ಕೆಲಸ ಮಾಡಿಕೊಡುತ್ತೇವೆ ಎಂದು ಅಧಿಕಾರಿಗಳು ಮತ್ತು ಮುಖಂಡರು ಜನರ ಬಳಿ ಲಂಚ (Bribe) ಕೇಳಬಾರದು. ಕೇಳಿದರೆ ಬೆಂಗಳೂರಿನ (Bengaluru) ನನ್ನ ವಿಳಾಸಕ್ಕೆ ಅವರ ಹೆಸರು ಸಹಿತ ಪತ್ರ ಬರೆಯಿರಿ ಎಂದು ಸಾರ್ವಜನಿಕರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ತಿಳಿಸಿದ್ದಾರೆ.

ಸಾತನೂರಿನ ಗ್ರಾಮಾಂತರ ಪ್ರೌಢಶಾಲೆ ಮೈದಾನದಲ್ಲಿ ನಡೆದ ಜನಸ್ಪಂದನ (Janaspandana) ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ತಾಲೂಕಿನಲ್ಲಿ ಪಾರದರ್ಶಕವಾಗಿ ಆಡಳಿತ ನಡೆಯಬೇಕು. ನನ್ನನ್ನು ಗೆಲ್ಲಿಸಿದ ನಿಮ್ಮ ಋಣ ತೀರಿಸಬೇಕು

ಈ ಹಿಂದೆ 8 ಸಾವಿರಕ್ಕೂ ಹೆಚ್ಚು ಜನರಿಗೆ ಬಗರ್ ಹುಕುಂ ಜಮೀನು ನೀಡಿದ್ದೇವೆ. ನಿವೇಶನ, ಮನೆ ಹಂಚಿದ್ದೇವೆ. ಆದರೂ ಲೋಕಸಭಾ ಚುನಾವಣೆಯಲ್ಲಿ ಡಿ.ಕೆ.ಸುರೇಶ್ (DK Suresh) ಅವರಿಗೆ ಜನರು ಆಶೀರ್ವಾದ ಮಾಡಲಿಲ್ಲ. ಈ ಬಗ್ಗೆ ನಾನು ಹೆಚ್ಚು ಚರ್ಚೆ ಮಾಡಲು ಹೋಗುವುದಿಲ್ಲ ಎಂದರು.

ಈ ಭಾಗವನ್ನು ಅಭಿವೃದ್ಧಿ ಮಾಡಿದ ಪರಿಣಾಮವಾಗಿ ಜಮೀನುಗಳ ಬೆಲೆಯೂ ಹೆಚ್ಚಾಗಿದೆ. ಎರಡು, ಮೂರು ಲಕ್ಷ ಬಾಳುತ್ತಿದ್ದ ಜಮೀನುಗಳ ಬೆಲೆ ದುಪ್ಪಟ್ಟಾಗಿದೆ. ನಾನು ಹಿಂದೆ ಜಮೀನುಗಳನ್ನು ಮಾರಬೇಡಿ ಎಂದು ಸಲಹೆ ನೀಡಿದ್ದೆ. ಆದರೂ ಒಂದಷ್ಟು ಜನ ಜಮೀನುಗಳನ್ನು ಮಾರಿಕೊಂಡಿದ್ದಾರೆ. ಈ ಭಾಗದಲ್ಲಿ 10 ಕೋಟಿ ವೆಚ್ಚದಲ್ಲಿ ಎಂಟು ಎಕರೆಯಲ್ಲಿ ಸಿಎಎಸ್‌ಆರ್ ನಿಧಿಯಿಂದ ದೊಡ್ಡ ಶಾಲೆ ನಿರ್ಮಾಣಕ್ಕೆ ಮುಂದಾಗಿದ್ದೇನೆ. ಜೊತೆಗೆ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನೀಡಿ ಜನರನ್ನು ಸಬಲರನ್ನಾಗಿ ಮಾಡಿದೆ ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ ಮತ್ತು ಕಲ್ಯಾಣ ಕೃತಿ ಬಿಡುಗಡೆ:

ಮೈಸೂರು: ನಗರದ ಮಾನಸ ಗಂಗೋತ್ರಿ ವಿಜ್ಞಾನ ಭವನದಲ್ಲಿ ಗ್ಯಾರಂಟಿ ಯೋಜನೆಗಳು ಬಡವರ ಸುರಕ್ಷತೆ ಮತ್ತು ಕಲ್ಯಾಣ ಕೃತಿ ಬಿಡುಗಡೆ ಮಾಡಲಾಗಿದೆ. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ (CM Siddaramaiah) ಗ್ಯಾರಂಟಿ ಯೋಜನೆ ಜಾರಿ ಮಾಡಿದಾಗ ಹಲವರು ಟೀಕೆ, ತಮಾಷೆ, ಅವಹೇಳನ ಮಾಡಿದರು. ಕೆಲವೊಮ್ಮೆ ಎಲ್ಲವನ್ನೂ ಸಹಿಸಿಕೊಳ್ಳಬೇಕಾಗುತ್ತದೆ ಎಂದಿದ್ದಾರೆ. ಬಡವರು, ಶ್ರೀಮಂತರೆಂಬ ತಾರತಮ್ಯ ಮಾಡದೆ ಯೋಜನೆ ಜಾರಿ ಮಾಡಿದ್ದೇವೆ. ಅನ್ನಕ್ಕಾಗಿ ಯಾರ ಮನೆ ಮುಂದೆ ನಿಲ್ಲಬಾರದೆಂದು ಅನ್ನಭಾಗ್ಯ ಜಾರಿ ಮಾಡಲಾಗಿದೆ. ಅನ್ನಭಾಗ್ಯದಿಂದ ಜನ ಸೋಮಾರಿಯಾಗುತ್ತಾರೆಂದು ಚರ್ಚೆ ಆಯ್ತು. ಅನ್ನಭಾಗ್ಯ ಜಾರಿ ಮಾಡಿದ್ದು ವೋಟು, ಪ್ರಚಾರಕ್ಕಾಗಿ ಅಲ್ಲ. ಕೊಟ್ಟ ಮಾತಿನಂತೆ ಒಂದು ವರ್ಷದಲ್ಲಿ 5 ಗ್ಯಾರಂಟಿಗಳ ಜಾರಿ ಮಾಡಿದ್ದೇವೆ ಎಂದಿದ್ದಾರೆ. ಕೆಲವು ಯೋಜನೆಗಳಿಗೆ ಜಾತಿ, ಧರ್ಮ, ಆರ್ಥಿಕ ಇತಿ‌ ಮಿತಿಗಳಿಲ್ಲ ಎಂದಿದ್ದಾರೆ.

ನಿರ್ಮಲಾ ಸೀತಾರಾಮನ್ ಸೇರಿ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಬೆಂಗಳೂರಿನಲ್ಲಿ ಎಫ್‌ಐಆರ್!

ಬೆಂಗಳೂರು: ಚುನಾವಣಾ ಬಾಂಡ್‌ಗಳ ಮೂಲಕ ಸುಲಿಗೆ ಮಾಡಿದ ಆರೋಪದ ಪ್ರಕರಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ದಾಖಲಿಸಲು  ಬೆಂಗಳೂರಿನ ಜನಪ್ರತಿನಿಧಿ ನ್ಯಾಯಾಲಯ ಆದೇಶಿಸಿದೆ. ಇದರ ಬೆನ್ನಲ್ಲೇ ತಿಲಕನಗರ ಪೊಲೀಸ್ ಠಾಣೆಯಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ , ಇಡಿ, ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಜ್ಯಾಧ್ಯಕ್ಷ  ಬಿ.ವೈ.ವಿಜಯೇಂದ್ರ ಮತ್ತು ಇತರರ ವಿರುದ್ದ  ಎಫ್ಐಆರ್ ದಾಖಲು ಮಾಡಲಾಗಿದೆ.

ಜನಾಧಿಕಾರ ಸಂಘರ್ಷ ಪರಿಷತ್ (ಜೆಎಸ್‌ಪಿ) ಸಹ ಅಧ್ಯಕ್ಷ ಆದರ್ಶ ಅಯ್ಯರ್ ನೀಡಿದ ಖಾಸಗಿ ದೂರಿನ ಅನ್ವಯ ವಿಚಾರಣೆ ನಡೆಸಿದ 42ನೇ ಎಸಿಎಂಎಂ ಕೋರ್ಟ್ ದೂರಿನ ಪ್ರತಿ ಮತ್ತು ದಾಖಲೆ ಠಾಣೆಗೆ ಕಳುಹಿಸಲು ಸೂಚಿಸಿ ಆದೇಶ ನೀಡಿತ್ತು. ಇದೀಗ ಈ ಪ್ರಕರಣದಲ್ಲಿ ಎ1 ಆರೋಪಿಯಾಗಿ ನಿರ್ಮಲ ಸೀತಾರಾಮನ್, ಎ2 ಇಡಿ ಆಫೀಸರ್ಸ್, ಎ3 ನ್ಯಾಷನಲ್ ಜನತಾ ಪಾರ್ಟಿ ಅಫೀಸ್ , ಎ4 ನಳೀನ್ ಕುಮಾರ್ ಕಟೀಲ್, ಎ5 ಬಿವೈ ವಿಜಯೇಂದ್ರ, ಎ6 ರಾಜ್ಯ ಬಿಜೆಪಿ ಕಚೇರಿಯಲ್ಲಿ ಕಾರ್ಯ ನಿರ್ವಹಣೆ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಐಪಿಸಿ 384, ಐಪಿಸಿ 120 ಬಿ, ಐಪಿಸಿ 34 ಅಡಿ ಎಫ್ ಐ ಆರ್, ಐಪಿಸಿ 34 –  ಸಮಾನ ಉದ್ದೇಶ, ಐಪಿಸಿ 384 – ಸುಲಿಗೆ, 120 b- ಒಳಸಂಚು ಸೆಕ್ಷನ್‌ಗಳ ಆಧಾರದಲ್ಲಿ ಎಫ್‌ಐಆರ್‌ ದಾಖಲಾಗಿದೆ. ಅರ್ಜಿದಾರರ ಪರವಾಗಿ ಹಿರಿಯ ವಕೀಲ ಬಾಲನ್ ವಾದ ಮಂಡಿಸಿದ್ದು ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 10ಕ್ಕೆ ಮುಂದೂಡಲಾಗಿದೆ.

ದೂರುದಾರ ಆದರ್ಶ್ ಅಯ್ಯರ್ ಹೇಳಿಕೆ ನೀಡಿ, ಚುನಾವಣಾ ಬಾಂಡ್ ಹೆಸ್ರಲ್ಲಿ ಸುಲಿಗೆ ಬಗ್ಗೆ ದೂರು ಕೊಟ್ಟಿದ್ವಿ, ಯಾವುದೇ ಕ್ರಮವಾಗಿರಲಿಲ್ಲ. ಏಪ್ರಿಲ್ ನಲ್ಲಿ 42 ಎಸಿಎಂನಲ್ಲಿ ಪಿಸಿಆರ್ ಹಾಕಿದ್ದೆವು. ಇಷ್ಟು ದಿನವಾದ್ಮೇಲೆ ನಿನ್ನೆ ನ್ಯಾಯೋಚಿತವಾದ ಆದೇಶ ಬಂದಿದೆ. ಚುನಾವಣಾ ಬಾಂಡ್ ನಲ್ಲಿ ನಿರ್ಮಲ ಸೀತಾರಾಮನ್ ರವರು ಇಡಿ ಅಫೀಸರ್ಸ್ ಬಳಸಿಕೊಂಡು ಸುಲಿಗೆ ಮಾಡಿದ್ದಾರೆ. ತುಂಬಾ ಸ್ಟಡಿ ಮಾಡಿ ಯಾವ ಕಂಪನಿಯಲ್ಲಿ ಏನೆಲ್ಲಾ ಆಗಿದೆ ಅದನ್ನು ಪತ್ತೆ ಮಾಡಿದ್ದೇವೆ. ಕೋರ್ಟ್ ಆದೇಶ ಹಿನ್ನಲೆ ಈಗ ಎಫ್  ಐ ಆರ್ ಮಾಡಲಾಗಿದೆ. ಎಂಟು ಸಾವಿರ ಕೋಟಿ ಹಣ ಬಳಕೆಯಾಗಿದೆ. ಅರವಿಂದ್ ಕೇಜ್ರಿವಾಲ್ ವಿರುದ್ದವೂ ಇದೇ ಆಗಿದೆ. ಇಡಿ ಅಫೀಸರ್ಸ್ ಬಿಟ್ಟು ಬೆದರಿಕೆ ಹಾಕಿ ದುಡ್ಡ ಪಡೆದಿದ್ದಾರೆ. ಸುಪ್ರಿಂ ಕೋರ್ಟ್ ನಲ್ಲಿ ಆದೇಶವಾಯ್ತೋ ಆಗ ಇದೆಲ್ಲ ಹೊರಗಡೆ ಬಂದಿದೆ ಎಂದರು.

ಚುನಾವಣಾ ಬಾಂಡ್ ಗಳನ್ನು 2018ರ ಬಜೆಟ್ ನಲ್ಲಿ ಉಲ್ಲೇಖಿಸಲಾಗಿತ್ತು. ರಾಜಕೀಯ ಪಕ್ಷಗಳಿಗೆ ಕಪ್ಪು ಹಣ ಹರಿದುಬರುವುದನ್ನು ತಡೆಯಲು ಹಾಗೂ ರಾಜಕೀಯ ಪಕ್ಷಗಳಿಗೆ ಬರುವ ದೇಣಿಗೆಗಳಿಗೆ ಒಂದು ಹೊಣೆಗಾರಿಕೆಯನ್ನಾಗಿಸುವ ಸಲುವಾಗಿ ಚುನಾವಣಾ ಬಾಂಡ್ ಗಳನ್ನು ಕೇಂದ್ರ ಸರ್ಕಾರ 2018ರಲ್ಲಿ ಜಾರಿಗೊಳಿಸಲಾಗಿತ್ತು.  ಅದಾದ ಬಳಿಕ ಬಾಂಡ್ ಗಳು ಸಾರ್ವಜನಿಕವಾಗಿ ಬಳಕೆಗೆ ಬಂದವು. ನಿಗದಿತ ಬ್ಯಾಂಕ್ ಶಾಖೆಗಳಲ್ಲಿ ಈ ಬಾಂಡ್ ಗಳನ್ನು ಹಣ ಕೊಟ್ಟು ಖರೀದಿ, ಯಾವುದೇ ರಾಜಕೀಯ ಪಕ್ಷಕ್ಕೆ ದೇಣಿಗೆ ನೀಡಲು ಅವಕಾಶ ನೀಡಲಾಗಿತ್ತು. ಆ ಮೂಲಕ ರಾಜಕೀಯ ಪಕ್ಷಗಳಿಗೆ ಬರುವ ದೇಣಿಗೆ ಪಾರದರ್ಶಕವಾಗಿಸುವ ಪ್ರಯತ್ನ ಅದಾಗಿತ್ತು. ದೇಣಿಗೆ ನೀಡಿದವರ ಹೆಸರು ಬಹಿರಂಗಪಡಿಸಲು ಬ್ಯಾಂಕುಗಳು ನಿರಾಕರಿಸಿದ್ದವು. ದೇಣಿಗೆ ರೂಪದಲ್ಲಿ ಸಾವಿರಾರು ಕೋಟಿ ಪಕ್ಷಕ್ಕೆ ಸಂದಾಯವಾಗಿದೆ ಎಂಬುವುದು ಬೆಳಕಿಗೆ ಬಂದಿತ್ತು. ಈ ವಿಚಾರ ಸುಪ್ರೀಂ ಕೋರ್ಟ್ ಅಂಗಳಕ್ಕೆ ಹೋಗಿತ್ತು. 2018ರಲ್ಲಿ ಕೇಂದ್ರ ಸರ್ಕಾರ ಜಾರಿ ತಂದ ಚುನಾವಣಾ ಬಾಂಡ್‌ ಯೋಜನೆಯನ್ನು ಕಾನೂನು ಬಾಹಿರ ಎಂದು ಕಳೆದ ಫೆ.15ರ ತನ್ನ ತೀರ್ಪಿನಲ್ಲಿ ಸುಪ್ರೀಂಕೋರ್ಟ್‌ ರದ್ದುಗೊಳಿಸಿತ್ತು

ಇದೇ ವರ್ಷ ಸುಪ್ರೀಂ ಕೋರ್ಟ್ ಗೆ ಎಸ್ ಬಿಐ ಸಲ್ಲಿಸಿದ ದತ್ತಾಂಶದ ಪ್ರಕಾರ, 2018ರಿಂದ 2022ರವರೆಗೆ ದೇಶಾದ್ಯಂತ ಒಟ್ಟು 9,208 ಚುನಾವಣಾ ಬಾಂಡ್ ಗಳನ್ನು ಖರೀದಿಸಲಾಗಿತ್ತು.  ಇದರಲ್ಲಿ ಶೇ. 58ರಷ್ಟು ದೇಣಿಗೆಯು ಬಿಜೆಪಿಗೆ ಹರಿದುಬಂದಿರುವುದನ್ನು ದತ್ತಾಂಶಗಳು ಹೇಳಿದವು. ಇದು ಈ ಚುನಾವಣಾ ಬಾಂಡ್‌ ನಲ್ಲಿ ಅಕ್ರಮ ನಡೆದಿದೆ ಎಂದು ವಾದಿಸಿದ್ದವರ ಆರೋಪಕ್ಕೆ ಸತ್ಯವಾಗಿತ್ತು.

2024ರ ಮಾರ್ಚ್ 15ರಂದು ಸುಪ್ರೀಂ ಕೋರ್ಟ್‌ ಆದೇಶದ ಅನುಸಾರ ಬಹಿರಂಗವಾದ ಚುನಾವಣಾ ಬಾಂಡ್‌ ನಲ್ಲಿ ಆಡಳಿತಾರೂಢ ಬಿಜೆಪಿಯು 6,986.5 ಕೋಟಿ ರೂ. ದೇಣಿಗೆ ಪಡೆದು ಟಾಪ್‌  ನಲ್ಲಿತ್ತು.  ಇದಕ್ಕೂ ಮುನ್ನ ದೇಣಿಗೆ ಮೊತ್ತ 6,566 ಕೋಟಿ ರೂ. ಆಗಿತ್ತು. ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ 2ನೇ ಸ್ಥಾನದಲ್ಲಿದ್ದು, 1,397 ಕೋಟಿ ರೂ. ದೇಣಿಗೆ ಪಡೆದುಕೊಂಡಿತ್ತು. 1,334.35 ಕೋಟಿ ರೂ. ದೇಣಿಗೆ ಪಡೆದ ಕಾಂಗ್ರೆಸ್‌ ಮೂರನೇ ಸ್ಥಾನದಲ್ಲಿದೆ. ಇದಕ್ಕೂ ಮುನ್ನ ಕಾಂಗ್ರೆಸ್‌ ಪಡೆದ ದೇಣಿಗೆ ಮೊತ್ತ 1,123 ಕೋಟಿ ರೂ. ಆಗಿದೆ. ಇನ್ನು ಪ್ರದೇಶಿಕ ಪಕ್ಷ ಜೆಡಿಎಸ್‌ 89.75 ಕೋಟಿ ರೂ. ದೇಣಿಗೆ ಪಡೆದಿದ್ದು, ಇದರಲ್ಲಿ ಮೇಘಾ ಎಂಜಿನಿಯರಿಂಗ್‌ ಪಾಲು 50 ಕೋಟಿ ರೂ. ಇದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist