ಕಲ್ಲಿದ್ದಲು ಗಣಿ ಕುಸಿತ; 3 ಮೃತದೇಹ ಪತ್ತೆ, ಹಲವರು ಸಿಲುಕಿರುವ ಶಂಕೆ
Twitter
Facebook
LinkedIn
WhatsApp
ರಾಂಚಿ: ಅಕ್ರಮವಾಗಿ ನಡೆಸುತ್ತಿದ್ದ ಕಲ್ಲಿದ್ದಲು ಗಣಿ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ ಘಟನೆ ಜಾರ್ಖಂಡ್ನ ಧನ್ಬಾದ್ನಲ್ಲಿ ನಡೆದಿದೆ.
ಭಾರತ್ ಕೋಕಿಂಗ್ ಕೋಲ್ ಲಿಮಿಟೆಡ್(BCCL)ನ ಕಲ್ಲಿದ್ದಲು ಗಣಿ ಭಾಗ ಕುಸಿದಿದ್ದು ಮೂರು ಮೃತದೇಹಗಳು ಪತ್ತೆಯಾಗಿದೆ. ಹಲವರು ಅವಶೇಷಗಳಡಿ ಸಿಲುಕಿದ್ದಾರೆ ಎಂದು ತಿಳಿದು ಬಂದಿದ್ದು ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಧನ್‌ಬಾದ್‌ನಿಂದ ಸುಮಾರು 21 ಕಿಮೀ ದೂರದಲ್ಲಿರುವ ಭೌರಾ ಕಾಲೇರಿ ಎಂಬ ಪ್ರದೇಶದಲ್ಲಿ ಬೆಳಗ್ಗೆ 10:30ರ ಸುಮಾರಿಗೆ ಘಟನೆ ಸಂಭವಿಸಿದೆ ಎಂದು ಅಧಿಕಾರಿ ತಿಳಿಸಿದ್ಧಾರೆ.