ಕರಾವಳಿ ಸೇರಿದಂತೆ ಮುಂದಿನ ವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ!
ಕರ್ನಾಟಕದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಬಹುತೇಕ ಕಡೆ ಸೆಪ್ಟೆಂಬರ್ 18ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಕಾರ್ಕಳ, ಧರ್ಮಸ್ಥಳ, ಉಡುಪಿ, ಮಾಣಿ, ಪುತ್ತೂರು, ಕುಂದಾಪುರ, ಕೋಟ, ಕುಮಟಾ, ಕ್ಯಾಸಲ್ರಾಕ್, ಔರಾದ್, ಮಂಗಳೂರು, ಬೆಳ್ತಂಗಡಿ, ಗೇರುಸೊಪ್ಪ, ಮಂಕಿ, ಗೋಕರ್ಣ, ಫರ್ಹತಾಬಾದ್, ಲಿಂಗನಮಕ್ಕಿ, ತಾಳಗುಪ್ಪ, ಶೃಂಗೇರಿ, ಮಂಗಳೂರು ವಿಮಾನ ನಿಲ್ದಾಣ, ಪಣಂಬೂರು, ಮುಲ್ಕಿ, ಉಪ್ಪಿನಂಗಡಿ, ಸುಳ್ಯ, ಸಿದ್ದಾಪುರ, ಶಿರಾಲಿ, ಹೊನ್ನಾವರ, ಕದ್ರಾ, ಸಿದ್ದಾಪುರ, ಬೇಲಿಕೇರಿ, ಬೀದರ್, ಚಿತ್ತಾಪುರ, ಅಡಕಿ, ತ್ಯಾಗರ್ತಿ, ಕೊಟ್ಟಿಗೆಹಾರ, ಜಯಪುರ, ಕಮ್ಮರಡಿ, ಕೊಪ್ಪ, ಮಡಿಕೇರಿ, ಗೋಣಿಕೊಪ್ಪಲು ಕೆವಿಕೆಯಲ್ಲಿ ಮಳೆಯಾಗಿದೆ.
ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಕೆಲವು ಕಡೆಗಳಲ್ಲಿ ಬಹಳಷ್ಟು ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮುಂಬೈ-ಗುವಾಹಟಿ ವಿಮಾನದಲ್ಲಿ ಅನುಚಿತವಾಗಿ ವರ್ತಿಸಿದ ಪ್ರಯಾಣಿಕ ಅರೆಸ್ಟ್
ಮುಂಬೈ: ಮುಂಬೈನಿಂದ (Mumbai) ಗುವಾಹಟಿಗೆ (Guwahati) ತೆರಳುತ್ತಿದ್ದ ವಿಮಾನದಲ್ಲಿ (Flight) ಪ್ರಯಾಣಿಕನೊಬ್ಬ ಸಹ ಪ್ರಯಾಣಿಕರಿಗೆ (Police) ಲೈಂಗಿಕ ಕಿರುಕುಳ ನೀಡಿದ ಪ್ರಕರಣ ನಡೆದಿದೆ. ಈ ಆರೋಪ ಕೇಳಿ ಬಂದ ಕೂಡಲೇ ಆತನನ್ನು ವಿಮಾನದ ಸಿಬ್ಬಂದಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಮುಂಬೈ ವಿಮಾನ ನಿಲ್ದಾಣದಿಂದ ಗುವಾಹಟಿಗೆ ತೆರಳುತ್ತಿದ್ದ ವಿಮಾನದಲ್ಲಿ ಆರೋಪಿ ಅನುಚಿತವಾಗಿ ವರ್ತಿಸಿದ್ದಾನೆ. ಬಳಿಕ ಆತನನ್ನು ಗುವಾಹಟಿ ಪೊಲೀಸರಿಗೆ ಒಪ್ಪಿಸಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡಲು ವಿಮಾನಯಾನ ಸಂಸ್ಥೆ ನಿರಾಕರಿಸಿದೆ.
ಪ್ರಯಾಣಿಕರೊಬ್ಬರು ನೀಡಿದ ದೂರಿನ ಮೇರೆಗೆ ಸ್ಥಳೀಯ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ತನಿಖೆಗೆ ಅಗತ್ಯವಿರುವ ಸಹಕಾರವನ್ನು ನೀಡುವುದಾಗಿ ವಿಮಾನಯಾನ ಸಂಸ್ಥೆ ಹೇಳಿಕೊಂಡಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವ ಭರವಸೆಯನ್ನು ಅಧಿಕಾರಿಗಳು ನಿಡಿದ್ದಾರೆ.