ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕರಾವಳಿ ಮತ್ತು ಕೊಡಗು ಹಾಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ!

Twitter
Facebook
LinkedIn
WhatsApp
WhatsApp Image 2023 10 02 at 7.43.23 AM

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ 7 ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಧರ್ಮಸ್ಥಳ, ಕ್ಯಾಸಲ್​ರಾಕ್, ಕೊಟ್ಟಿಗೆಹಾರದಲ್ಲಿ ಅತಿ ಹೆಚ್ಚು ಮಳೆಯಾಗಿದೆ, ಮಾಣಿ, ಭಾಗಮಂಡಲ, ಉಪ್ಪಿನಂಗಡಿ, ವಿರಾಜಪೇಟೆ, ಅಂಕೋಲಾ, ಕೊಲ್ಲೂರಿನಲ್ಲೂ ಹೆಚ್ಚು ಮಳೆಯಾಗಿದೆ.

ಗೋಕರ್ಣ, ಸಿದ್ದಾಪುರ,ಮಡಿಕೇರಿ, ಕುಮಟಾ, ಮಂಚಿಕೆರೆ, ಕದ್ರಾ, ಪುತ್ತೂರು, ಲೋಂಡಾ, ನಾಪೋಕ್ಲು, ಪೊನ್ನಂಪೇಟೆ, ಸಕಲೇಶಪುರ, ಗೇರುಸೊಪ್ಪ, ಪಣಂಬೂರು, ಶಿರಾಲಿ, ಯಲ್ಲಾಪುರ, ಹೊನ್ನಾವರ, ಕಾರವಾರ, ಮಂಗಳೂರು ವಿಮಾನ ನಿಲ್ದಾಣ, ಕುಂದಾಪುರ, ಕಲಬುರಗಿ, ಹುಂಚದಕಟ್ಟೆ, ತಾಳಗುಪ್ಪ, ಲಿಂಗನಮಕ್ಕಿ, ಸಿದ್ದಾಪುರ, ಕಿರವತ್ತಿ, ಮುಂಡಗೋಡ, ಶೃಂಗೇರಿ, ಕಮ್ಮರಡಿ, ಕಳಸ, ಹಾರಂಗಿ, ಸುಳ್ಯ, ಹಳಿಯಾಳ, ಬನವಾಸಿ, ಕೋಟ, ಹುಕ್ಕೇರಿ, ಸಂಕೇಶ್ವರ, ಹಿಡಕಲ್ ಅಣೆಕಟ್ಟು, ಧಾರವಾಡ, ಕಲಘಟಗಿ, ಸೇಡಂ, ಸೋಮವಾರಪೇಟೆ, ಬೇಲೂರು, ಹುಣಸೂರು, ಗೌರಿಬಿದನೂರಿನಲ್ಲಿ ಮಳೆಯಾಗಿದೆ.

 

ರಾಜ್ಯದಲ್ಲಿ ಅತಿ ಹೆಚ್ಚು ಗರಿಷ್ಠ ಉಷ್ಣಾಂಶ 32.7 ಡಿಗ್ರಿ ಸೆಲ್ಸಿಯಸ್​ ಶಿರಾಲಿಯಲ್ಲಿ ದಾಖಲಾಗಿದೆ. ಅತಿ ಕಡಿಮೆ ಉಷ್ಣಾಂಶ, 15.8 ಡಿಗ್ರಿ ಸೆಲ್ಸಿಯಸ್​ ಉಷ್ಣಾಂಶ ಬಾಗಲಕೋಟೆಯಲ್ಲಿ ದಾಖಲಾಗಿದೆ.

ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಬಹುತೇಕ ಕಡೆಗಳಲ್ಲಿ , ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಲಿದೆ. ಕರಾವಳಿಯಲ್ಲಿ ಗಾಳಿಯು ಗಂಟೆಗೆ 45-55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 28.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ