ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಭಾರಿ ಮಳೆಯಾಗುವ ಸಾಧ್ಯತೆ- ಹವಾಮಾನ ಇಲಾಖೆ ಮುನ್ಸೂಚನೆ

Twitter
Facebook
LinkedIn
WhatsApp
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಭಾರಿ ಮಳೆಯಾಗುವ ಸಾಧ್ಯತೆ- ಹವಾಮಾನ ಇಲಾಖೆ ಮುನ್ಸೂಚನೆ

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಶಿವಮೊಗ್ಗದಲ್ಲಿ ಆಗಸ್ಟ್​ 29ರವರೆಗೆ ಮಳೆಯಾಗಲಿದೆ.

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಇಂದು ಮೋಡಕವಿದ ವಾತಾವರಣವಿದ್ದು ಮಳೆಯಾಗುವ ಲಕ್ಷಣಗಳಿವೆ. ಎಚ್​ಎಎಲ್​ನಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ,20.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ದೆಹಲಿ-ಎನ್​ಸಿಆರ್​ನಲ್ಲಿ ಮಳೆಯಾಗಿದೆ, ಳೆದ ಹಲವು ದಿನಗಳಿಂದ ಬಿಸಿಲಿನ ಝಳದಿಂದ ಜನಜೀವನ ದುಸ್ತರವಾಗಿತ್ತು, ಶಾಖದಿಂದ ಮುಕ್ತಿ ಸಿಕ್ಕಂತಾಗಿದೆ.ಆಗಸ್ಟ್ 23 ಮತ್ತು 24 ರಂದು ಕೆಲವು ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ ವ್ಯಕ್ತಪಡಿಸಿದೆ.

2009ರಿಂದ ಆಗಸ್ಟ್ ತಾಪಮಾನವನ್ನು ಗಮನಿಸಿದರೆ 2014ರಲ್ಲಿ 39.4 ಡಿಗ್ರಿ, 2011ರಲ್ಲಿ 38.2 ಡಿಗ್ರಿ ಇತ್ತು. ಉಳಿದ ವರ್ಷಗಳಲ್ಲಿ ತಾಪಮಾನವು 37-38 ಡಿಗ್ರಿಗಳ ನಡುವೆ ಇತ್ತು. ಈಗ 33 ಡಿಗ್ರಿ ಸೆಲ್ಸಿಯಸ್​ನಿಂದ 36 ಡಿಗ್ರಿ ಸೆಲ್ಸಿಯಸ್​ನಷ್ಟಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ