ಸೋಮವಾರ, ಏಪ್ರಿಲ್ 29, 2024
ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Coconut Water: ಹೆಚ್ಚುತ್ತಿರುವ ಬಿಸಿಲಿನ ತಾಪಮಾನಕ್ಕೆ ಎಳನೀರು ಸೇವನೆ ಆರೋಗ್ಯಕ್ಕೆ ಏನೆಲ್ಲಾ ಲಾಭಗಳಿವೆ?

Twitter
Facebook
LinkedIn
WhatsApp
Coconut Water: ಹೆಚ್ಚುತ್ತಿರುವ ಬಿಸಿಲಿನ ತಾಪಮಾನಕ್ಕೆ ಎಳನೀರು ಸೇವನೆ ಆರೋಗ್ಯಕ್ಕೆ ಏನೆಲ್ಲಾ ಲಾಭಗಳಿವೆ?

ಎಳನೀರು (Coconut Water) ಸೇವನೆಯಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನ ಪಡೆಯಬಹುದು. ಎಳನೀರಿನಿಂದ ದೇಹ ತಂಪಾಗುವುದಲ್ಲದೆ, ಹಲವು ಕಾಯಿಲೆಗಳಿಗೆ ಪರಿಹಾರವೂ ದೊರೆಯುತ್ತದೆ. ಪ್ರತಿದಿನವೂ ಎಳನೀರು ಸೇವಿಸಿದ್ರೆ ನೀವು ಅನೇಕ ರೋಗಗಳಿಂದ ದೂರವಿರಬಹುದು. ಎಳೆನೀರಿನಲ್ಲಿ ಅನೇಕ ಔಷಧೀಯ ಗುಣಗಳಿದ್ದು, ವಿವಿಧ ರೀತಿಯ ಕಾಯಿಲೆಗಳಿಂದ ನಿಮ್ಮನ್ನು ರಕ್ಷಿಸುತ್ತದೆ.ನಿಸರ್ಗದತ್ತವಾಗಿ ಲಭ್ಯವಿರುವ ಪೋಷಕಾಂಶಯುಕ್ತ  ಪಾನೀಯವಿದು. ನಮ್ಮ ದಾಹ ತಣಿಸುವ ಅಷ್ಟೇ ಅಲ್ಲದೆ, ನಮ್ಮ ದೇಹಕ್ಕೆ ಅಗತ್ಯವಾಗಿ ಬೇಕಾಗುವ ಖನಿಜ ಲವಣಗಳನ್ನು ಪೂರೈಸುವ ಈ ಪಾನೀಯ ನಿಜಕ್ಕೂ ನೈಸರ್ಗಿಕ ಅದ್ಭುತಗಳಲ್ಲಿ ಒಂದು. ಇದರಲ್ಲಿ, ರೋಗನಿರೋಧಕ ಶಕ್ತಿ ನಮ್ಮನ್ನು ಹಲವು ರೋಗಗಳಿಂದ ರಕ್ಷಿಸುವುದಲ್ಲದೆ, ದೇಹಕ್ಕೆ ದಿಢೀರ್‌ ಶಕ್ತಿಯನ್ನೂ ಚೈತನ್ಯವನ್ನೂ ನೀಡುತ್ತದೆ. 

ತೆಂಗಿನ ನೀರಿನಲ್ಲಿ ಕ್ಯಾಲೋರಿಗಳು ತುಂಬಾ ಕಡಿಮೆ ಇರುತ್ತವೆ. ಹಾಗಾಗಿ ಇದನ್ನು ಎಲ್ಲಾ ಸೀಸನ್ ನಲ್ಲಿ ಮತ್ತು ಕಾಯಿಲೆ ಇರುವವರು ಕುಡಿಯಲು ತಜ್ಞರು ಶಿಫಾರಸು ಮಾಡುತ್ತಾರೆ. ಎಳನೀರಿನಲ್ಲಿ ನೈಸರ್ಗಿಕ ಕಿಣ್ವಗಳು ಮತ್ತು ಪೊಟ್ಯಾಸಿಯಮ್ನಂತಹ ಖನಿಜಗಳು ಸಮೃದ್ಧವಾಗಿವೆ. ಸರಿಯಾದ ಸಮಯದಲ್ಲಿ ತೆಂಗಿನ ನೀರನ್ನು ಸೇವಿಸುವುದು ಡಬಲ್ ಪ್ರಯೋಜನ ನೀಡುತ್ತದೆ.

ಬೆಳಿಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ತೆಂಗಿನ ನೀರನ್ನು ಸೇವಿಸುವುದರಿಂದ ಹಲವಾರು ಪ್ರಯೋಜನ ಪಡೆಯಬಹುದು. ಲಾರಿಕ್ ಆಸಿಡ್ ತೆಂಗಿನ ನೀರಿನಲ್ಲಿ ಕಂಡು ಬರುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಮತ್ತು ಚಯಾಪಚಯ ಹೆಚ್ಚಿಸುತ್ತದೆ. ಮತ್ತು ತೂಕ ಕಡಿಮೆ ಮಾಡುತ್ತದೆ.

ಆಹಾರ ಸೇವಿಸುವ ಮುನ್ನ ತೆಂಗಿನ ನೀರು ಕುಡಿದರೆ ಅತಿಯಾಗಿ ತಿನ್ನುವುದನ್ನು ತಪ್ಪಿಸಬಹುದು. ತೆಂಗಿನ ನೀರನ್ನು ಸೇವಿಸುವ ಮೂಲಕ ಜೀರ್ಣಕ್ರಿಯೆ ಸರಿಯಾಗಿ ಕೆಲಸ ಮಾಡುತ್ತದೆ. ಆಹಾರ ಸೇವಿಸಿದ ನಂತರ ಉಂಟಾಗುವ ಉಬ್ಬುವಿಕೆ ತಪ್ಪಿಸಬಹುದು. ತೆಂಗಿನ ನೀರು ಕುಡಿಯುವುದರಿಂದ ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ.

  • ವ್ಯಾಯಾಮದ ಬಳಿಕ ಎಳನೀರು ಕುಡಿಯುವುದು ಆರೋಗ್ಯದ ದೃಷ್ಟಿಯಿಂದ ತುಂಬಾ ಒಳ್ಳೆಯದು. ಎಳನೀರು ರಕ್ತದೊತ್ತಡವನ್ನು ನಿಯಂತ್ರಿಸಿ ದೇಹದ ಪೊಟ್ಯಾಷಿಯಂ ಅಂಶ ಕಡಿಮೆ ಮಾಡಲು ಸಹಾಯಮಾಡುತ್ತದೆ. ಇದು ನೈಸರ್ಗಿಕವಾಗಿ ಕಡಿಮೆ ಕ್ಯಾಲರಿ ಹೊಂದಿದ್ದು, ಜೀರ್ಣಕ್ರಿಯೆಗೆ ಸಹಕಾರಿಯಾಗಿದೆ.   
  • ಗ್ಯಾಸ್ಟ್ರಿಕ್ ಸಮಸ್ಯೆಗೂ ಎಳನೀರು ಉತ್ತಮ ಮದ್ದಾಗಿದೆ. ಖನಿಜ ಮತ್ತು ಪೊಟ್ಯಾಸಿಯಂ ಹೇರಳವಾಗಿರುವ ಎಳನೀರು ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ.
  • ಮೂತ್ರಪಿಂಡ ಮತ್ತು ಹೊಟ್ಟೆಯ ಉರಿ ಸಮಸ್ಯೆ ಹೊಂದಿರುವವರು ನಿಯಮಿತವಾಗಿ ಎಳನೀರು ಸೇವಿಸಬೇಕು. ಅಜೀರ್ಣದೊಂದಿಗೆ ಮಲಬದ್ಧತೆ ಇರುವವರು ನಿತ್ಯವೂ ಎಳನೀರು ಸೇವನೆ ಮಾಡಬೇಕು

​ಎಳನೀರಿನ ಗಂಜಿ​

ಎಳನೀರಿನ ಗಂಜಿಯು ಮಧ್ಯಮ ಸರಣಿ ಟ್ರೈಗ್ಲಿಸರೈಡ್‌ಗಳು (MCTಗಳು), ಲಾರಿಕ್ ಆಮ್ಲ ಮತ್ತು ಇತರ ಪ್ರಯೋಜನಕಾರಿ ಸಂಯುಕ್ತಗಳಿಂದ ಸಮೃದ್ಧವಾಗಿದೆ. ಆದ್ದರಿಂದ ನೀವು ಎಳನೀರು ಕುಡಿಯುವಾಗ ಅದರ ಗಂಜಿಯನ್ನು ಸೇವಿಸೋದನ್ನು ಮರೆಯದಿರಿ.

​ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ​

ಸ್ಯಾಚುರೇಟೆಡ್ ಕೊಬ್ಬುಗಳಲ್ಲಿ ಅಧಿಕವಾಗಿದ್ದರೂ, ಎಳನೀರಿನ ಗಂಜಿಯು ಹೃದಯದ ಆರೋಗ್ಯಕ್ಕೆ ಉತ್ತಮವಾಗಿದೆ. ಎಳನೀರಿನ ಗಂಜಿಯಲ್ಲಿರುವ MCT ಗಳು ಹೃದಯ ಕಾಯಿಲೆಗೆ ಅಪಾಯಕಾರಿ ಅಂಶಗಳಾಗಿರುವ ಕೆಟ್ಟ ಕೊಲೆಸ್ಟ್ರಾಲ್ ಮತ್ತು ಟ್ರೈಗ್ಲಿಸರೈಡ್‌ಗಳನ್ನು ಕಡಿಮೆ ಮಾಡಲು ಸಹಕರಿಸುತ್ತದೆ.

ಎಳನೀರಿನ ಗಂಜಿಯು ಲಾರಿಕ್ ಆಮ್ಲವು ರಕ್ತದೊತ್ತಡದ ಮಟ್ಟವನ್ನು ಸುಧಾರಿಸುವುದಲ್ಲದೆ, ಹೃದಯರಕ್ತನಾಳದ ಕಾಯಿಲೆಯ ಅಪಾಯವನ್ನು ಕಡಿಮೆ ಮಾಡುತ್ತದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ