ಶುಕ್ರವಾರ, ಏಪ್ರಿಲ್ 26, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಲೇಜು ವಿದ್ಯಾರ್ಥಿನಿ ಹಾಸ್ಟೆಲ್​ನ ಕೊಠಡಿಯಲ್ಲಿ ಶವವಾಗಿ ಪತ್ತೆ

Twitter
Facebook
LinkedIn
WhatsApp
1 13

ಮುಂಬೈ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್​ನ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಪೊಲೀಸರು ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. 30 ವರ್ಷದ ಶಂಕಿತ ಆರೋಪಿಯನ್ನು ಓಂ ಪ್ರಕಾಶ್ ಕನೌಜಿಯಾ ಎಂದು ಗುರುತಿಸಲಾಗಿದ್ದು, ಹಾಸ್ಟೆಲ್ ಆವರಣದಿಂದ ತಲೆಮರೆಸಿಕೊಂಡಿದ್ದಾನೆ. ಶಂಕಿತ ಆರೋಪಿ ದಕ್ಷಿಣ ಮುಂಬೈನ ಪೊಲೀಸ್ ಜಿಮ್ಖಾನಾ ಬಳಿ ಇರುವ ಸಾವಿತ್ರಿ ಫುಲೆ ಮಹಿಳಾ ಹಾಸ್ಟೆಲ್‌ನಲ್ಲಿ 15 ವರ್ಷಗಳಿಂದ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ. ಮೆರೈನ್ ಡ್ರೈವ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿದೆ.

ಮೃತ ಕಾಲೇಜು ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಶವಪರೀಕ್ಷೆ ವರದಿ ಬಂದ ಬಳಿಕವಷ್ಟೇ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಂತ್ರಸ್ತೆ ಬಾಂದ್ರಾ ಉಪನಗರದ ಸರ್ಕಾರಿ ಪಾಲಿಟೆಕ್ನಿಕ್‌ನ ವಿದ್ಯಾರ್ಥಿನಿ. ಕೋಣೆಗೆ ಪ್ರವೇಶಿಸಿದ ಪೊಲೀಸ್ ತಂಡವು ಸಂತ್ರಸ್ತೆ ಕುತ್ತಿಗೆಗೆ ದುಪ್ಪಟ್ಟಾ ಸುತ್ತಿಕೊಂಡು ಸತ್ತ ಸ್ಥಿತಿಯಲ್ಲಿರುವುದು ಕಂಡುಬಂದಿದೆ.

ಹಾಸ್ಟೆಲ್​ ಹೊರಗಡೆಯಿಂದ ಕೊಠಡಿಗೆ ಬೀಗ ಹಾಕಲಾಗಿತ್ತು, ಹೀಗಾಗಿ ಆಕೆಯ ಮೇಲೆ ಅತ್ಯಾಚಾರವೆಸಗಿ ಬಳಿಕ ಕೊಲೆ ಮಾಡಲಾಗಿದೆ ಎಂದು ಅಂದಾಜಿಸಲಾಗಿದೆ. ನಾವು ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಹೆಚ್ಚುವರಿ ಆಯುಕ್ತ ಅಭಿನವ್ ದೇಶಮುಖ್ ಹೇಳಿದ್ದಾರೆ.

ಆರೋಪಿಗಳನ್ನು ಬಂಧಿಸಲು ಹೆಚ್ಚುವರಿ ಕಮಿಷನರ್ ದೇಶಮುಖ್ ಮತ್ತು ಮೆರೈನ್ ಡ್ರೈವ್ ಸೀನಿಯರ್ ಇನ್ಸ್‌ಪೆಕ್ಟರ್ ನೀಲೇಶ್ ಬಾಗುಲ್ ನೇತೃತ್ವದಲ್ಲಿ ಇತರ ಅಧಿಕಾರಿಗಳನ್ನು ಒಳಗೊಂಡ ತಂಡವನ್ನು ರಚಿಸಲಾಗಿದೆ. ಆದರೆ, ಮಂಗಳವಾರ ಸಂಜೆ 5:30ರ ಸುಮಾರಿಗೆ ಸಮೀಪದ ರೈಲ್ವೆ ನಿಲ್ದಾಣದಲ್ಲಿ ಶಂಕಿತ ವ್ಯಕ್ತಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ನಂತರ ಅವರ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಟಿ ಆಸ್ಪತ್ರೆಗೆ ಕಳುಹಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ