ಶುಕ್ರವಾರ, ಏಪ್ರಿಲ್ 26, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆ 83.5 ರೂಪಾಯಿ ಇಳಿಕೆ

Twitter
Facebook
LinkedIn
WhatsApp
images

ನವದೆಹಲಿ: ಜೂನ್ ತಿಂಗಳ ಮೊದಲ ದಿನವಾದ ಇಂದು (ಜೂನ್ 1, ಗುರುವಾರ) ಹೋಟೆಲ್ ಮಾಲೀಕರು ಸೇರಿದಂತೆ ವಾಣಿಜ್ಯ ಎಲ್‌ಪಿಜಿ ಸಿಂಡರ್ (Commercial LPG Cylinder Price) ಬಳಸುವ ಗ್ರಾಹಕರಿಗೆ ಸಿಹಿ ಸುದ್ದಿ ಸಿಕ್ಕಿದೆ.

ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಬೆಲೆಯಲ್ಲಿ (LPG Cylinder Price) 83.5 ರೂಪಾಯಿ ಇಳಿಕೆ ಮಾಡಿದ್ದು, ಹೊಸ ದರಗಳು ಇಂದಿನಿಂದಲೇ ಜಾರಿಗೆ ಬರಲಿವೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಸಿಲಿಂಡರ್ ಬೆಲೆ ಇಳಿಕೆ ಬಳಿಕ, 19 ಕೆಜಿಯ ವಾಣಿಜ್ಯ ಸಿಲಿಂಡರ್ ಬೆಲೆ 1,773 ರೂಪಾಯಿಗೆ ತಗ್ಗಿದೆ. ಆದರೆ ಅಡುಗೆ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಅಡುಗೆ ಅನಿಲದ ಬೆಲೆ ಇಲ್ಲಿ 1,103 ರೂಪಾಯಿ ಇದೆ.

ಕೋಲ್ಕತ್ತಾದಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ ಈಗ 1,875.50 ರೂಪಾಯಿ ಆಗಿದೆ. ಮುಂಬೈನಲ್ಲಿ 1,725 ರೂಪಾಯಿಗೆ ಇಳಿಕೆ ಕಂಡಿದ್ದು, ಚೆನ್ನೈನಲ್ಲಿ 1,937 ರೂಪಾಯಿ ಇದೆ.

ವಾಮಿಜ್ಯ ಮತ್ತು ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಗಳನ್ನು ಪ್ರತಿ ತಿಂಗಳ ಮೊದಲ ದಿನದಂದು ಪರಿಷ್ಕರಣೆ ಮಾಡಲಾಗುತ್ತದೆ. ಇಂದಿನಿಂದಲೇ ಹೊಸ ದರಗಳು ಅನ್ವಯವಾಗುತ್ತದೆ.

ತೈಲ ಮಾರುಕಟ್ಟೆ ಕಂಪನಿಗಳು ಮೇ ತಿಂಗಳಲ್ಲಿ ದೇಶೀಯ ಎಲ್‌ಪಿಜಿ ಬೆಲೆಯನ್ನು ಕೊನೆಯದಾಗಿ ಬದಲಾಯಿಸಿದ್ದವು. ಪ್ರಸ್ತುತ ದೆಹಲಿಯಲ್ಲಿ ಅಡುಗೆ ಅನಿಲದ ಬೆಲೆ 14.2 ಕೆಜಿಯ ಸಿಲಿಂಡರ್‌ಗೆ 1,103 ರೂಪಾಯಿ ಇದೆ. ಕೋಲ್ಕತ್ತಾ, ಮುಂಬೈ ಹಾಗೂ ಚೆನ್ನೈನಲ್ಲಿ ಕ್ರಮವಾಗಿ 1,029, 1,002 ಹಾಗೂ 1,018.5 ರೂಪಾಯಿ ಇದೆ.

ಇತ್ತ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 19 ಕೆಜಿಯ ವಾಣಿಜ್ಯ ಸಿಲಿಂಡರ್ 1,856 ರೂಪಾಯಿ ಇದೆ. ತೈಲ ಕಂಪನಿಗಳು ಕಳೆದ ತಿಂಗಳು (ಮೇ 2023) ಕೂಡ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಕಡಿಮೆ ಮಾಡಿದ್ದವು.

ಮೇ 1 ರಿಂದ ಅನ್ವಯವಾಗುವಂತೆ 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆ 171.50 ರೂಪಾಯಿ ಕಡಿಮೆ ಮಾಡಲಾಗಿತ್ತು. ಬೆಂಗಳೂರಿನಲ್ಲೂ ಕೂಡ ಗೃಹಬಳಕೆ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ