ಲೋಕಸಭಾ ಚುನಾವಣೆಗೆ ಸ್ಪರ್ಧೆ ವಿಚಾರ: ಸ್ಪಷ್ಟನೆ ನೀಡಿದ ಡಾ. ಮಂಜುನಾಥ್
Twitter
Facebook
LinkedIn
WhatsApp
ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ಮುಖ್ಯಸ್ಥ ಮತ್ತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಅಳಿಯ ಡಾ.ಸಿ.ಎನ್ ಮಂಜುನಾಥ್ ಅವರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎನ್ನುವ ಸುದ್ದಿ ದಟ್ಟವಾಗಿದೆ.
ಈ ಬಗ್ಗೆ ಸ್ವತಃ ಪ್ರತಿಕ್ರಿಯಿಸಿರುವ ಮಂಜುನಾಥ್, ನಾನು ಲೋಕಸಭಾ ಚುನಾವಣೆ ಸ್ಪರ್ಧೆ ಬಗ್ಗೆ ಜನರು ಮಾತಾಡುತ್ತಾ ಇದ್ದಾರೆ. ಆದ್ರೆ, ನಾನು ಇನ್ನೂ ಅದರ ಬಗ್ಗೆ ತೀರ್ಮಾನ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಾ. ಮಂಜುನಾಥ್, ನಾನು ಲೋಕಸಭಾ ಚುನಾವಣೆ ಸ್ಪರ್ಧೆ ಬಗ್ಗೆ ಜನರು ಮಾತಾಡುತ್ತಾ ಇದ್ದಾರೆ. ಆದ್ರೆ, ನಾನು ಇನ್ನೂ ಅದರ ಬಗ್ಗೆ ತೀರ್ಮಾನ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು. ಹಲವು ಕಡೆ ಜನರು ಒತ್ತಡ ಹಾಕುತ್ತಿದ್ದಾರೆ. ರಾಜಕೀಯಕ್ಕೆ ಬರಬೇಕಾ ಅಥವಾ ಲೋಕಸಭೆಗೆ ನಿಲ್ಲಬೇಕೆಂದು ನಿರ್ಧಾರ ಮಾಡಿಲ್ಲ ಎಂದು ಹೇಳಿದರು.