ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು; ದೂರಿನಲ್ಲೇನಿದೆ..?
ಬೆಂಗಳೂರು, ಮಾರ್ಚ್ 25: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ(Shobha Karandlaje) ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ (BJP) ಅಭ್ಯರ್ಥಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಬಹಿರಂಗ ಪ್ರಚಾರ ಮತ್ತು ಭಾಷಣಗಳಿಗೆ ನಿರ್ಭಂದಿಸುವಂತೆ ರಾಜ್ಯ ಕಾಂಗ್ರೆಸ್ (Congress) ಮುಖಂಡ ಕುಶಾಲ್ ಹರುವೇಗೌಡ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.
ದೂರಿನಲ್ಲಿ ಏನಿದೆ ?
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 8 ವಿಧಾನಸಭೆ ಕ್ಷೇತ್ರಗಳಲ್ಲಿ ಒಟ್ಟು 2656 ಪೋಲಿಂಗ್ ಬೂನ್ಸ್ ಒಳಪಡುವ ಸುಮಾರು 28-30 ಲಕ್ಷ ಜನ ಮತದಾರರು ಇದ್ದಾರೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವು ಹಿಂದೂ- ಮುಸ್ಲಿಂ-ಕ್ರೈಸ್ತರು ಎಂಬ ಬೇಧ-ಭಾವವಿಲ್ಲದೆ, ಜಾತಿ-ಮತ-ಪಂಥಗಳನ್ನು ಮೀರಿ ಜನರು ಸಹೋದರತ್ವದಿಂದ ವಾಸಿಸುತ್ತಿದ್ದಾರೆ.
ಇಂತಹ ಶಾಂತಿ ಸೌಹಾರ್ದತೆಯ ಬೀಡು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಭಾರತೀಯ ಜನತಾ ಪಕ್ಷದಿಂದ ಪ್ರಚೋದನಕಾರಿ ಭಾಷಳಿಗೆ ಕೋಮು ಗಲಭೆಗಳಿಗೆ ಕುಖ್ಯಾತರಾಗಿರುವ ಶೋಭಾ ಕರಾಂದ್ಲಾಜೆ ಅವರು ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಜನರಲ್ಲಿ ಆತಂಕ ಬಹಳಷ್ಟು ಮೂಡಿಸಿದೆ.
ಅವರ ರಾಜಕೀಯ ಇತಿಹಾಸದೂದ್ದಕ್ಕೂ ಶಾಂತಿ-ಸೌಹಾರ್ದತೆ ಕದಡುವಂತಹ ಕೋಮುಗಲಭೆಗೆ ಪ್ರಚೋದಿಸುವಂತಹ ಭಾಷಣಗಳಿಂದಲೇ ಕುಖ್ಯಾತಿ ಹೊಂದಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಯಾವುದೇ ಕಾರಣಕ್ಕೂ ಚುನಾವಣಾ ಪ್ರಚಾರದಲ್ಲಿ ಭಾಷಣಕ್ಕೆ ಅವಕಾಶ ನೀಡದೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಾದ್ಯಂತ ಇಂತಹ ದುರ್ಘಟನೆಗಳು ಆಗದಂತ ಮುನ್ನೆಚ್ಚರಿಕೆ ವಹಿಸಿ ಶೋಭಾ ಕರಂದ್ಲಾಜೆ ಅವರ ಚುನಾವಣಾ ಭಾಷಣಗಳಿಗೆ ಅನುಮತಿ ನೀಡದೆ ನಿರ್ಬಂಧಿಸಬೇಕೆಂದು ಜಿಲ್ಲಾ ಕಾರ್ಯದರ್ಶಿ ಕುಶಾಲ್ ಹರುವೆಗೌಡ ಮತ್ತು ಸಂಜಯ್ ದೂರು ನೀಡಿದ್ದಾರೆ.
ಟಿಕೆಟ್ ಕೈತಪ್ಪಿದ ಬಳಿಕ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಸಂಸದ.!
ತಮಿಳುನಾಡಿನ ಈರೋಡ್ ಕ್ಷೇತ್ರದ ಹಾಲಿ ಲೋಕಸಭಾ ಸಂಸದ ಡಿಎಂಕೆಯ ಎ.ಗಣೇಶಮೂರ್ತಿ ಅವರು ಕೀಟನಾಶಕ(Pesticide) ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 2019 ರ ಲೋಕಸಭೆ ಚುನಾವಣೆಯಲ್ಲಿ ಡಿಎಂಕೆ ಟಿಕೆಟ್ನಲ್ಲಿ ಚುನಾಯಿತರಾದ ಗಣೇಶಮೂರ್ತಿ ಆರೋಗ್ಯ ಏಕಾಏಕಿ ಹದಗಟ್ಟಿತ್ತು, ಬಳಿಕ ಆಸ್ಪತ್ರೆಗೆ ದಾಖಲಿಸಿದಾಗ ಅವರು ಕೀಟನಾಶಕ ಸೇವಿಸಿದ್ದು ತಿಳಿದುಬಂದಿದೆ. ತಪಾಸಣೆಯ ನಂತರ ಅವರನ್ನು ಐಸಿಯುಗೆ ದಾಖಲಿಸಲಾಗಿದ್ದು, ವೆಂಟಿಲೇಟರ್ನಲ್ಲಿ ಇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಲೋಕಸಭಾ ಚುನಾವಣೆ ಘೋಷಣೆಯಾಗಿದ್ದು, ಏಪ್ರಿಲ್ 19ರಿಂದ ಆರಂಭವಾಗಿ ಜೂನ್ 1ರವರೆಗೆ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ, ಜೂನ್ 4ರಂದು ಫಲಿತಾಂಶ ಹೊರಬರಲಿದೆ.