ತಮಿಳುನಾಡಿನಲ್ಲಿ ಡಿಎಂಕೆ ಜೊತೆ ಕಾಂಗ್ರೆಸ್ ಮೈತ್ರಿ ; ಕಾಂಗ್ರೆಸ್ಗೆ 9 ಕ್ಷೇತ್ರ ಬಿಟ್ಟುಕೊಟ್ಟ ಡಿಎಂಕೆ..!
2019 ರ ಸೀಟು ಹಂಚಿಕೆ ಸೂತ್ರವನ್ನೇ ತಮಿಳುನಾಡಲ್ಲಿ ಆಡಳಿತಾರೂಢ ಡಿಎಂಕೆ ಹಾಗೂ ಕಾಂಗ್ರೆಸ್ ಮುಂಬರುವ ಲೋಕಸಭಾ ಚುನಾವಣೆ 2024ಕ್ಕೂ (Lok Sabha Election) ಪುನರಾವರ್ತನೆ ಮಾಡಿದೆ. ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಮುಂಬರುವ ಲೋಕಸಭಾ ಚುನಾವಣೆಗೆ ತಮಿಳು ನಾಡಲ್ಲಿ 9 ಮತ್ತು ನೆರೆಯ ಪುದುಚೇರಿಯಲ್ಲಿ ಒಂದು ಸ್ಥಾನವನ್ನು ಕಾಂಗ್ರೆಸ್ಗೆ ಬಿಟ್ಟುಕೊಟ್ಟಿದೆ.
ಎಐಸಿಸಿ ನಾಯಕರಾದ ಕೆ.ಸಿ.ವೇಣುಗೋಪಾಲ್ ಮತ್ತು ಅಜಯ್ ಕುಮಾರ್ ಅವರ ಸಮ್ಮುಖದಲ್ಲಿ ಡಿಎಂಕೆ ಅಧ್ಯಕ್ಷ ಮತ್ತು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮತ್ತು ಟಿಎನ್ಸಿಎ ಮುಖ್ಯಸ್ಥ ಕೆ.ಸೆಲ್ವಪೆರುಂತಗೈ ತಮ್ಮ ಒಮ್ಮತದ ಅಭಿಪ್ರಾಯವನ್ನು ಪ್ರಕಟಿಸಿದರು.
ತಮಿಳುನಾಡಿನ 9 ಮತ್ತು ಪುದುಚೇರಿಯ 1 ಸ್ಥಾನಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸಲಿದೆ. ಉಳಿದ ಸ್ಥಾನಗಳಲ್ಲಿ ನಾವು ಡಿಎಂಕೆ ಮತ್ತು ಮೈತ್ರಿ ಪಕ್ಷಗಳ ಅಭ್ಯರ್ಥಿಗಳನ್ನು ಬೆಂಬಲಿಸುತ್ತೇವೆ. ತಮಿಳುನಾಡಿನ ಎಲ್ಲಾ 40 ಸ್ಥಾನಗಳನ್ನು ನಾವು ಗೆಲ್ಲುತ್ತೇವೆ” ಎಂದು ವೇಣುಗೋಪಾಲ್ ಮಾಧ್ಯಮಗಳಿಗೆ ತಿಳಿಸಿದರು.
ತಮಿಳುನಾಡು ಮತ್ತು ಪುದುಚೇರಿಯ ಎಲ್ಲಾ 40 ಸ್ಥಾನಗಳನ್ನು ಕಾಂಗ್ರೆಸ್ ಮತ್ತು ಡಿಎಂಕೆ ಮೈತ್ರಿಕೂಟ ಗೆಲ್ಲಲಿದೆ ಎಂದು ವೇಣುಗೋಪಾಲ್ ವಿಶ್ವಾಸ ವ್ಯಕ್ತಪಡಿಸಿದರು. ಕಾಂಗ್ರೆಸ್ ಮತ್ತು ಡಿಎಂಕೆ ನಡುವಿನ ‘ಬಂಧ’ ಮುಂದುವರಿದಿದೆ ಎಂದು ಹೇಳದಿರು. ತಮಿಳುನಾಡಿನಲ್ಲಿ ಜಾತ್ಯತೀತ ಪ್ರಗತಿಪರ ಮೈತ್ರಿಕೂಟದಲ್ಲಿ ಕಾಂಗ್ರೆಸ್ ಡಿಎಂಕೆಯ ಪ್ರಮುಖ ಮಿತ್ರ ಪಕ್ಷವಾಗಿದೆ.
ತಮಿಳುನಾಡಿನಲ್ಲಿ 2019 ರ ಲೋಕಸಭಾ ಚುನಾವಣೆಯಲ್ಲಿ, ಕಾಂಗ್ರೆಸ್ ಒಟ್ಟು 39 ಸಂಸದೀಯ ಸ್ಥಾನಗಳಲ್ಲಿ ಒಂಬತ್ತು ಸ್ಥಾನಗಳಲ್ಲಿ ಸ್ಪರ್ಧಿಸಿತು. ತಮಿಳುನಾಡಿನಲ್ಲಿ ನಡೆದ ಚುನಾವಣೆಯಲ್ಲಿ ಅದು ಎಂಟು ಸ್ಥಾನಗಳನ್ನು ಗೆದ್ದಿದೆ. ಡಿಎಂಕೆ 20 ಸ್ಥಾನಗಳಲ್ಲಿ ಸ್ಪರ್ಧಿಸಿತು ಮತ್ತು ಎಲ್ಲಾ ಸ್ಥಾನಗಳನ್ನು ಗೆದ್ದಿತ್ತು. 2021 ರ ವಿಧಾನಸಭಾ ಚುನಾವಣೆಯಲ್ಲಿ, ಡಿಎಂಕೆ 234 ಸ್ಥಾನಗಳಲ್ಲಿ 188 ಸ್ಥಾನಗಳಲ್ಲಿ ಸ್ಪರ್ಧಿಸಿ 133 ಸ್ಥಾನಗಳನ್ನು ಗೆದ್ದಿತು. ಕಾಂಗ್ರೆಸ್ ಗೆ 25 ಸ್ಥಾನಗಳನ್ನು ನೀಡಲಾಯಿತು. ಅದು 18 ಸ್ಥಾನಗಳನ್ನು ಗೆದ್ದುಕೊಂಡಿದೆ.
ಡಿಎಂಕೆ ಜತೆ ಕಮಲ್ ಹಾಸನ್ ಪಕ್ಷ ಮೈತ್ರಿ; ದೇಶಕ್ಕಾಗಿ ನಿರ್ಧಾರ ಎಂದ ನಟ
ಚೆನ್ನೈ: ನಟ, ಮಕ್ಕಳ್ ನೀಧಿ ಮೈಯಮ್ (MNM) ಪಕ್ಷದ ಮುಖ್ಯಸ್ಥ ಕಮಲ್ ಹಾಸನ್ (Kamal Haasan) ಅವರು ತಮಿಳುನಾಡಿನಲ್ಲಿ ಆಡಳಿತಾರೂಢ ಡಿಎಂಕೆ ಮೈತ್ರಿಕೂಟಕ್ಕೆ (MNM DMK Alliance) ಬೆಂಬಲ ಘೋಷಿಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಇಂಡಿಯಾ ಒಕ್ಕೂಟ ಸೇರುವುದಿಲ್ಲ ಎಂದು ಹೇಳಿದ್ದ ಕಮಲ್ ಹಾಸನ್ ಅವರು ಲೋಕಸಭೆ ಚುನಾವಣೆ ಹೊತ್ತಿನಲ್ಲೇ ಡಿಎಂಕೆ ಜತೆ ಮೈತ್ರಿ ಮಾಡಿಕೊಂಡಿದ್ದಾರೆ. ಆದರೆ, ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಕಮಲ್ ಹಾಸನ್ ಅವರ ಪಕ್ಷವು ಸ್ಪರ್ಧಿಸದಿರುವುದು ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ.
“ನಾನು ಯಾವುದೇ ಅಧಿಕಾರ, ಸ್ಥಾನಮಾನಕ್ಕಾಗಿ ಡಿಎಂಕೆ ಪಕ್ಷಕ್ಕೆ ಬೆಂಬಲ ಘೋಷಿಸಿದ್ದೇನೆ. ಆದರೆ, ನಾವು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಡಿಎಂಕೆ ಪಕ್ಷದ ಅಭ್ಯರ್ಥಿಗಳಿಗೆ ನಾವು ಸಂಪೂರ್ಣ ಬೆಂಬಲ ನೀಡುತ್ತೇವೆ. ದೇಶದ ಹಿತಕ್ಕಾಗಿ ನಾವು ತೀರ್ಮಾನ ತೆಗೆದುಕೊಂಡಿದ್ದೇವೆ. ನಾನು ಯಾರ ಜತೆ ಕೈ ಕುಲುಕಬೇಕೋ, ಅವರ ಜತೆ ಕೈ ಕುಲುಕಿದ್ದೇನೆ” ಎಂದು ಕಮಲ್ ಹಾಸನ್ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ. ಇದರಿಂದಾಗಿಯೇ ಕಮಲ್ ಹಾಸನ್ ಅವರ ಅಭಿಮಾನಿಗಳಿಗೆ ನಿರಾಸೆ ಆಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಒಂದು ರಾಜ್ಯಸಭೆ ಸ್ಥಾನ ಮೀಸಲು?
2025ರಲ್ಲಿ ತಮಿಳುನಾಡು ವಿಧಾನಸಭೆಯಿಂದ ಡಿಎಂಕೆ ಸದಸ್ಯರೊಬ್ಬರು ರಾಜ್ಯಸಭೆಗೆ ಆಯ್ಕೆಯಾಗಲಿದ್ದಾರೆ. ಈ ರಾಜ್ಯಸಭೆ ಸ್ಥಾನವನ್ನು ಕಮಲ್ ಹಾಸನ್ ಅವರ ಪಕ್ಷಕ್ಕೆ ನೀಡಲಾಗುವುದು ಎಂಬುದಾಗಿ ಎಂ.ಕೆ.ಸ್ಟಾಲಿನ್ ಭರವಸೆ ನೀಡಿದ್ದಾರೆ. ಹಾಗಾಗಿ, ಮೈತ್ರಿಗೆ ಕಮಲ್ ಹಾಸನ್ ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಹೇಳಲಾಗುತ್ತಿದೆ. ತಮಿಳುನಾಡಿನಲ್ಲಿ 2025ರಲ್ಲಿ ಆರು ರಾಜ್ಯಸಭೆ ಸ್ಥಾನಗಳು ಖಾಲಿಯಾಗಲಿವೆ. ಆರು ಸದಸ್ಯರ ಅವಧಿಯು ಮುಗಿಯಲಿದೆ. ಒಂದು ಸ್ಥಾನವನ್ನು ಡಿಎಂಕೆ ಪಡೆಯಲಿದ್ದು, ಅದನ್ನು ಕಮಲ್ ಹಾಸನ್ ಪಕ್ಷಕ್ಕೆ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.
#WATCH | Tamil Nadu | Congress will contest elections on 9 seats in Tamil Nadu and one seat in Puducherry. On the remaining seats, we will support the candidates of DMK and alliance parties. We will win all 40 seats of Tamil Nadu, says Congress MP KC Venugopal pic.twitter.com/fcksz92VVK
— ANI (@ANI) March 9, 2024