ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಿಜೆಪಿ ಸೇರಿದ ಕಾಂಗ್ರೆಸ್ ಶಾಸಕಿ ವಿಜಯಧರಣಿ!

Twitter
Facebook
LinkedIn
WhatsApp
ಬಿಜೆಪಿ ಸೇರಿದ ಕಾಂಗ್ರೆಸ್ ಶಾಸಕಿ ವಿಜಯಧರಣಿ!

ದೆಹಲಿ ಫೆಬ್ರವರಿ 24: ತಮಿಳುನಾಡಿನಿಂದ (Tamil nadu) ವಿಲವಂಕೋಡ್‌ ವಿಧಾನಸಭೆಯನ್ನು ಪ್ರತಿನಿಧಿಸುತ್ತಿರುವ ಕಾಂಗ್ರೆಸ್‌  (Congress) ಶಾಸಕಿ ಎಸ್‌ ವಿಜಯಧರಣಿ (S Vijayadharani) ಅವರು ಶನಿವಾರ ನವದೆಹಲಿಯಲ್ಲಿ ಅಧಿಕೃತವಾಗಿ ಬಿಜೆಪಿಗೆ (BJP) ಸೇರ್ಪಡೆಗೊಂಡಿದ್ದಾರೆ. ಮೀನುಗಾರಿಕೆ, ಪಶುಸಂಗೋಪನೆ, ಹೈನುಗಾರಿಕೆ, ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಎಲ್‌ಸಿ ಮುರುಗನ್, ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ಅರವಿಂದ್ ಮೆನನ್ ಮತ್ತು ಬಿಜೆಪಿ ತಮಿಳುನಾಡು ರಾಜ್ಯ ಬಿಜೆಪಿ ರಾಷ್ಟ್ರೀಯ ಸಹ-ಪ್ರಭಾರಿ ಪೊಂಗುಲೇಟಿ ಸುಧಾಕರ್ ರೆಡ್ಡಿ ಅವರ ಸಮ್ಮುಖದಲ್ಲಿ ಅವರು ಶಾಸಕಿ ಬಿಜೆಪಿಗೆ ಸೇರ್ಪಡೆ ಆಗಿದ್ದಾರೆ.

ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯವರಾದ ವಿಜಯಧರಣಿ ಕಾಂಗ್ರೆಸ್ ಕುಟುಂಬದಿಂದಲೇ ಬಂದವರು. ಅವರ ಕುಟುಂಬದ ಮೂರು ತಲೆಮಾರುಗಳು ಕಾಂಗ್ರೆಸ್ ಪಕ್ಷದಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಪ್ರಮುಖ ಸ್ಥಾನಗಳನ್ನು ಅಲಂಕರಿಸಿದ್ದಾರೆ. ಆದರೆ ಇತ್ತೀಚೆಗೆ ಕಾಂಗ್ರೆಸ್ ನಾಯಕತ್ವದ ವಿರುದ್ಧ ವಿಜಯಧರಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಅವರನ್ನು ಕೇಳಿದಾಗ, ”ಪಕ್ಷದ ಆಂತರಿಕ ರಾಜಕೀಯವು ಕಾಂಗ್ರೆಸ್ ಪಕ್ಷದ ಪ್ರಮುಖ ದೌರ್ಬಲ್ಯಗಳಲ್ಲಿ ಒಂದಾಗಿದೆ. ಪಕ್ಷದೊಳಗೆ, ಪ್ರತಿಯೊಬ್ಬ ನಾಯಕರು ತಮ್ಮದೇ ಆದ ಪ್ರತ್ಯೇಕ ಬೆಂಬಲ ಗುಂಪುಗಳನ್ನು ರಚಿಸುವ ಮೂಲಕ ಮತ್ತು ಮುಂದಿನ ಗುಂಪುಗಳೊಂದಿಗೆ ಸ್ಪರ್ಧಿಸುವ ಮೂಲಕ ಪಕ್ಷವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯದಿರಲು ನಿರ್ಧರಿಸಿದ್ದಾರೆ, ”ಎಂದು ಆರೋಪಿಸಿದ್ದಾರೆ.

ಬಿಜೆಪಿ ಸೇರಿದ ನಂತರ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯಧರಣಿ, ನಾನು ಬಾಲ್ಯದಿಂದಲೂ ಕಾಂಗ್ರೆಸ್‌ನ ಭಾಗವಾಗಿದ್ದೇನೆ. ಈಗ ಬಿಜೆಪಿ ಸೇರುವ ಪರಿಸ್ಥಿತಿ ಎದುರಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಚಟುವಟಿಕೆಗಳು ಮತ್ತು ಕಾರ್ಯಕ್ರಮಗಳಿಂದಾಗಿ ನಾನು ಕೂಡ ಬಿಜೆಪಿ ಸೇರಿದ್ದೇನೆ. ತಮಿಳುನಾಡಿನಲ್ಲಿ ಬಿಜೆಪಿಯನ್ನು ಬಲಿಷ್ಠಗೊಳಿಸೋಣ. ಅಣ್ಣಾಮಲೈ ಅವರು ತಮಿಳುನಾಡಿನಲ್ಲಿ ಬಿಜೆಪಿಯನ್ನು ಚೆನ್ನಾಗಿ ಬೆಳೆಸುತ್ತಿದ್ದಾರೆ. ಬಿಜೆಪಿಯಲ್ಲಿ ಮಹಿಳೆಯರಿಗೆ ಆದ್ಯತೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಫೆಬ್ರವರಿ 28 ರಂದು ಪ್ರಧಾನಿ ಮೋದಿ ಭಾಗವಹಿಸಲಿರುವ ಬೃಹತ್ ಬಿಜೆಪಿ ರ್ಯಾಲಿಯಲ್ಲಿ ವಿಜಯಧರಣಿ ಭಾಗವಹಿಸುವ ನಿರೀಕ್ಷೆ ಇದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ