ಗುರುವಾರ, ಮೇ 9, 2024
ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?-ಐಪಿಎಲ್ ನಲ್ಲಿ ಮಿಂಚುತ್ತಿದೆ ಹೆಡ್ ಮತ್ತು ಅಭಿಷೇಕ್ ಜೋಡಿ ; 58 ಎಸೆತಗಳಲ್ಲಿ 167 ರನ್ ಸಿಡಿಸಿ ಜಯಗಳಿಸಿದರ ಹೈದರಾಬಾದ್.!-ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂಗ್ರೆಸ್ ಕಾರ್ಯಕರ್ತನನ್ನು ಕೊಲೆಗೈದು ಮರಕ್ಕೆ ನೇತುಹಾಕಿದ ದುಷ್ಕರ್ಮಿಗಳು...!

Twitter
Facebook
LinkedIn
WhatsApp
ಕಾಂಗ್ರೆಸ್ ಕಾರ್ಯಕರ್ತನನ್ನು ಕೊಲೆಗೈದು ಮರಕ್ಕೆ ನೇತುಹಾಕಿದ ದುಷ್ಕರ್ಮಿಗಳು...!

ಚಿತ್ರಹಿಂಸೆ ನೀಡಿ ವ್ಯಕ್ತಿಯ ಭೀಕರ ಹತ್ಯೆ (Murder) ಮಾಡಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ರೋಣ ವಿಧಾನಸಭಾ ಕ್ಷೇತ್ರದ ಡಂಬಳ ಹೋಬಳಿಯ ಗ್ಯಾರಂಟಿ ಫಲಾನುಭವಿಗಳ ಸಮಾವೇಶದ ಹೊತ್ತಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನೊಬ್ಬನ (Congress Workers) ಭೀಕರ ಕೊಲೆಯಾಗಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ಬಳಿ ಜಮೀನೊಂದರಲ್ಲಿ ಮರಕ್ಕೆ ನೇತು ಹಾಕಿದ ಸ್ಥಿತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಶವ ನೇತಾಡುತ್ತಿದೆ. ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಪ್ರಮುಖ ಕಾರ್ಯಕರ್ತ ಡೋಣಿ ಗ್ರಾಮದ ಶರಣಪ್ಪ ಸಂದಿಗೌಡ್ರ ಕೊಲೆಗೀಡಾದ ವ್ಯಕ್ತಿ.

ಕೊಲೆಗೂ ಮುನ್ನ ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ ಮಾಡಿರುವ ದುಷ್ಕರ್ಮಿಗಳು, ಕಣ್ಣಿಗೆ ಕಾರದಪುಡಿ ಎಸೆದು ಹಲ್ಲೆ ಮಾಡಿದ್ದಾರೆ. ನಂತರ ಶವ ತೂಗು ಹಾಕಿ ವಿಕೃತಿ ಮೆರೆದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇಂದು ಬೆಳ್ಳಂಬೆಳಿಗ್ಗೆ ಮರದಲ್ಲಿ ನೇತಾಡುತ್ತಿರುವ ಶವ ನೋಡಿದ ಸ್ಥಳೀಯರು ಬೆಚ್ಚಿ ಬಿದ್ದಿದ್ದು, ಇಂದು ಡಂಬಳದಲ್ಲಿ ಕಾಂಗ್ರೆಸ್ ಪಕ್ಷದಿಂದ ಗ್ಯಾರಂಟಿ ಫಲಾನುಭವಿಗಳ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಹೀಗಾಗಿ ಕಾರ್ಯಕರ್ತರಲ್ಲಿ ಆತಂಕ ಮೂಡಿದೆ.

 

ಯಾವ ಕಾರಣಕ್ಕಾಗಿ ಈ ಕೊಲೆ ನಡೆದಿದೆ ಎಂಬುದು ಸದ್ಯಕ್ಕೆ ತಿಳಿದು ಬಂದಿಲ್ಲ. ಘಟನೆಯ ಸುದ್ದಿ ತಿಳಿದ ಮುಂಡರಗಿ ಠಾಣೆಯ ಇನ್ಸ್‌ಪೆಕ್ಟರ್ ಮಂಜುನಾಥ್ ಕುಸುಗಲ್ಲ‌ ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೊಲೆ ಯಾವ ಕಾರಣಕ್ಕಾಗಿ ನಡೆದಿರಬಹುದು ಎಂದು ಮಾಹಿತಿ ಕಲೆ ಹಾಕುತ್ತಿದ್ದಾರೆ. ಕೊಲೆ ಮಾಡಿದ ಆರೋಪಿಗಳ ಪತ್ತೆಗೆ ಜಾಲ ಬೀಸಿರುವ ಮುಂಡರಗಿ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ