ವಿವಾದಕ್ಕೀಡಾದ 'ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ' ವಸತಿ ಶಾಲೆಯ ಪ್ರವೇಶ ದ್ವಾರದಲ್ಲಿದ್ದ ಬರಹ!!
ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ (Morarji Residential School) ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಬರಹವನ್ನು ಬದಲಿಸಿ ಹಾಕಿ ವಿವಾದಕ್ಕೀಡಾದ ಘಟನೆ ನಡೆದಿದೆ.
ಕುವೆಂಪು ಅವರ ‘ಜ್ಞಾನ ದೇಗುಲವಿದು ಕೈಮುಗಿದು ಬಳಗೆ ಬಾ’ ಎಂಬ ಸಾಲುಗಳ ಬದಲಾಗಿ ‘ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ’ ಎಂದು ಬದಲಾಯಿಸಿ ಶಾಲೆಯ ಪ್ರವೇಶ ದ್ವಾರದಲ್ಲಿ ಬರೆಯಲಾಗಿದೆ. ಮೊರಾರ್ಜಿ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪೋಷಕರು ಧೈರ್ಯವಾಗಿ ಪ್ರಶ್ನೆ ಮಾಡಲಿ ಎಂದ ಉದ್ದೇಶದಿಂದ ಬರೆಯಲಾಗಿದೆ ಎನ್ನಲಾಗಿದೆ.
ಈ ಕುರಿತು ವಿಜಯಪುರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಪುಂಡಲೀಕ ಮಾನವರ ಪ್ರತಿಕ್ರಿಯಿಸಿ, ಸರ್ಕಾರದ ಸುತ್ತೋಲೆ ಪ್ರಕಾರ ಜ್ಞಾನ ದೇಗುಲವಿದು, ಧೈರ್ಯವಾಗಿ ಪ್ರಶ್ನಿಸಿ ಎಂದು ಬರಹ ಬದಲಾವಣೆ ಮಾಡಲಾಗಿದೆ. ಮೊರಾರ್ಜಿ ವಸತಿ ಶಾಲಾ ವಿದ್ಯಾರ್ಥಿಗಳ ಪೆÇೀಷಕರು ಧೈರ್ಯವಾಗಿ ಪ್ರಶ್ನೆ ಮಾಡಲಿ. ಮಕ್ಕಳ ಶಿಕ್ಷಣ ವಸತಿ ಊಟ ಸೇರಿದಂತೆ ವಸತಿ ಶಾಲೆಯ ಎಲ್ಲಾ ವಿಚಾರಗಳ ಕುರಿತು ಪ್ರಶ್ನೆ ಮಾಡಲಿ. ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಸಿಗಲಿ ಪೋಷಕರು ಧೈರ್ಯವಾಗಿ ಮಾತನಾಡಲಿ ಎನ್ನುವ ಉದ್ದೇಶವಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಘಾಳಪೂಜಿ ಗ್ರಾಮದಲ್ಲಿ ಹಾಗೂ ಇತರ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶ ದ್ವಾರದಲ್ಲಿ ಬದಲಾಗಿರೋ ಬರಹ ಸದ್ಯ ತೀವ್ರ ಚರ್ಚೆಗೆ ಗ್ರಾಸವಾಗಿದೆ.