ಬುಧವಾರ, ಏಪ್ರಿಲ್ 24, 2024
ಶುಕ್ರವಾರ ಮತದಾನದಂದು ಮತಗಟ್ಟೆಯಲ್ಲಿ ಮೊಬೈಲ್ ಫೋನ್ ಕೊಂಡೊಯ್ಯಲು ನಿಷೇಧ..!-164.53 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಕೊಂಡ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್!-ರಾಮನ ಚಿತ್ರವಿದ್ದ ಪೇಪರ್ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ ಮಾರಾಟ; ಆಕ್ರೋಶದ ಬಳಿಕ ಮಾಲೀಕ ಅರೆಸ್ಟ್.!-ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ; ಮೋದಿಗೆ ಮಾಂಗಲ್ಯದ ಬೆಲೆಯೇ ಗೊತ್ತಿಲ್ಲ: ಪ್ರಿಯಾಂಕಾ ಗಾಂಧಿ-ಬರ್ತ್ ಡೇ ಕೇಕ್ ತಿಂದು ಬಾಲಕಿ ಸಾವು ಪ್ರಕರಣ: ಅಸಲಿ ಕಾರಣ ಬಯಲು.!-ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..-ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..-ಚುನಾವಣೆ ಮುಗಿಯುತ್ತಿದ್ದಂತೆ ಮತ್ತೆ ವಾಪಸ್ ಬಿಜೆಪಿಗೆ ಬರುತ್ತೇನೆ; ಕೆಎಸ್ ಈಶ್ವರಪ್ಪ-ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಮೇ 7 ರವರೆಗೆ ವಿಸ್ತರಣೆ..!-ಗುಣಮಟ್ಟದ ಉದ್ದೇಶದಿಂದ MDH ಮತ್ತು ಎವರೆಸ್ಟ್ ಮಸಾಲೆ ಉತ್ಪನ್ನಗಳ ಪರೀಕ್ಷೆಗೆ ಮುಂದಾದ FSSAI..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಖ್ಯಾತ ಮಾಡೆಲ್ ಮೇಲೆ ಕೋಆರ್ಡಿನೇಟಿಂಗ್ ಏಜೆನ್ಸಿಯ ಮಾಲೀಕರಿಂದ ಅತ್ಯಾಚಾರ, ಬೆದರಿಕೆ ಆರೋಪ.!

Twitter
Facebook
LinkedIn
WhatsApp
Ranchi man booked for raping Mumbai-based aspiring model, blackmailing her

ಮುಂಬಯಿ: ಮಾಡೆಲ್ ಒಬ್ಬರ ಮೇಲೆ ಅತ್ಯಾಚಾರವೆಸಗಿ, ಆಕೆಯನ್ನು ಮದುವೆಯಾಗುವುದಾಗಿ ಭರವಸೆ ನೀಡಿ ಮತಾಂತರಕ್ಕೆ ಒತ್ತಾಯಿಸಿದ್ದಾರೆ ಎಂಬ ಆರೋಪದ ಮೇಲೆ ವ್ಯಕ್ತಿಯೊಬ್ಬನ ವಿರುದ್ಧ ಎಫ್‌ಐಆರ್ ದಾಖಲಿಸಿರುವುದಾಗಿ ಮುಂಬೈ ಪೊಲೀಸ್ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

“ದಿ ಕೇರಳ ಸ್ಟೋರಿ” ಚಲನಚಿತ್ರವನ್ನು ನೋಡಿದ ನಂತರ 23 ವರ್ಷದ ಮಹಿಳೆ ಪೊಲೀಸರನ್ನು ಸಂಪರ್ಕಿಸಲು ಪ್ರೇರೇಪಣೆಗೊಂಡಿದ್ದೆ ಎಂದು ಆಕೆಯ ದೂರಿನಲ್ಲಿ ತಿಳಿಸಲಾಗಿದೆ. ಆರೋಪಿಯನ್ನು ತನ್ವೀರ್ ಅಖ್ತರ್ ಲೇಕ್ ಖಾನ್ (40) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಇದುವರೆಗೂ ಯಾವುದೇ ಬಂಧನವಾಗಿಲ್ಲ.

ತಾನು 2020 ರಲ್ಲಿ ಖಾನ್ ಅವರ ಮಾಡೆಲಿಂಗ್ ಏಜೆನ್ಸಿಗೆ ಸೇರಿಕೊಂಡಿದ್ದೇನೆ ಮತ್ತು ಆರಂಭದಲ್ಲಿ ಅವನು ತನ್ನ ಹೆಸರು ಯಶ್ ಎಂದು ಹೇಳಿದ್ದಾಗಿ ಮಾಡೆಲ್ ಪೊಲೀಸರಿಗೆ ತಿಳಿಸಿದ್ದಾಳೆ. ನಾಲ್ಕು ತಿಂಗಳ ನಂತರ ಅವನ ನಿಜವಾದ ಹೆಸರು ತನ್ವೀರ್ ಎಂದು ಅವಳು ಕಂಡುಕೊಂಡಳು, ಅವರು ಸ್ವಲ್ಪ ಸಮಯದವರೆಗೆ ಸಂಬಂಧದಲ್ಲಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಆರೋಪಿ ತನ್ನನ್ನು ರಾಂಚಿಗೆ ಕರೆದೊಯ್ದು ಅಲ್ಲಿ ಮದುವೆಯಾಗುವುದಾಗಿ ಭರವಸೆ ನೀಡಿ ಅತ್ಯಾಚಾರ ಎಸಗಿದ್ದಲ್ಲದೆ ಮತಾಂತರಗೊಳ್ಳುವಂತೆ ಒತ್ತಡ ಹೇರಲು ಆರಂಭಿಸಿದ್ದ. ಮುಂಬೈನಲ್ಲಿದ್ದಾಗ ತನ್ನನ್ನು ಕೊಲ್ಲಲು ಯತ್ನಿಸಿದ್ದ ಎಂದು ಆಕೆ ಆರೋಪಿಸಿದ್ದಾರೆ.

ವರ್ಸೋವಾ ಪೊಲೀಸರು ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಅತ್ಯಾಚಾರ ಮತ್ತು ಇತರ ಸಂಬಂಧಿತ ಅಪರಾಧಗಳಿಗೆ ಪ್ರಥಮ ಮಾಹಿತಿ ವರದಿಯನ್ನು ದಾಖಲಿಸಿದ್ದಾರೆ ಮತ್ತು ಆಪಾದಿತ ಘಟನೆಗಳು ಅಲ್ಲಿ ನಡೆದ ಕಾರಣ ಪ್ರಕರಣವನ್ನು ರಾಂಚಿ ಪೊಲೀಸರಿಗೆ ವರ್ಗಾಯಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಏತನ್ಮಧ್ಯೆ, ಆರೋಪಿಯು ಸಾಮಾಜಿಕ ಮಾಧ್ಯಮದಲ್ಲಿ ತನ್ನ ಸಮರ್ಥನೆಗಾಗಿ ವಿಡಿಯೋವನ್ನು ಬಿಡುಗಡೆ ಮಾಡಿದ್ದಾನೆ, ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾನೆ. ದೂರುದಾರೆ ತನ್ನ ನಗ್ನ ಫೋಟೋಗಳನ್ನು ತನ್ನ ಸ್ನೇಹಿತರು ಮತ್ತು ಸಂಬಂಧಿಕರಲ್ಲಿ ಪ್ರಸಾರ ಮಾಡುತ್ತಿದ್ದನು ಮತ್ತು ಡಾಟಾವನ್ನು ಕದಿಯಲು ಬಯಸಿದ್ದ ಎಂದು ಆರೋಪಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ