ಗೃಹಲಕ್ಷ್ಮಿ ಯೋಜನೆಗೆ ಕ್ಷಣಗಣನೆ ; ಮೈಸೂರಿಗೆ ಆಗಮಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ಮೈಸೂರಿನಲ್ಲಿ ರಾಜ್ಯ ಸರ್ಕಾರದ ನಾಲ್ಕನೇ ಗ್ಯಾರಂಟಿ ಗೃಹಲಕ್ಷ್ಮಿ ಯೋಜನೆ ಜಾರಿ ಹಿನ್ನೆಲೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಜನ ತುಂಬಿ ತುಳುಕುತ್ತಿದ್ದಾರೆ. ಮಹಾರಾಜ ಕಾಲೇಜು ಮೈದಾನದ ಸುತ್ತ ರಸ್ತೆಯಲ್ಲಿ ಎಲ್ಲಾ ಬಗೆಯ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.
ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮೀ ಯೋಜನೆ ಚಾಲನೆಗೆ ಕೆಲವೇ ನಿಮಿಷಗಳು ಬಾಕಿ ಇವೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಮಾರಂಭ ಹಮ್ಮಿಕೊಳ್ಳಲಾಗಿದ್ದು ಸಮಾರಂಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಖರ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ ಸೇರಿ ಹಲವರು ಭಾಗಿಯಾಗಲಿದ್ದಾರೆ.
ಮೈಸೂರಿನ ಮಂಡಕಳ್ಳಿ ಏರ್ಪೋರ್ಟ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕರು ಬಂದಿಳಿದಿದ್ದಾರೆ. ಎಐಸಿಸಿ ಅಧ್ಯಕ್ಷ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ, ಡಿಸಿಎಂ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದರು.