ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಆದಿತ್ಯ L-1 ನೌಕೆಯ ಉಡಾವಣೆಗೆ ಕ್ಷಣಗಣನೆ; ಸೂರ್ಯನತ್ತ ಇಂದು 11:50 ಕ್ಕೆ ಸಜ್ಜು!

Twitter
Facebook
LinkedIn
WhatsApp
ಆದಿತ್ಯ L-1 ನೌಕೆಯ ಉಡಾವಣೆಗೆ ಕ್ಷಣಗಣನೆ; ಸೂರ್ಯನತ್ತ ಇಂದು 11:50 ಕ್ಕೆ ಸಜ್ಜು!

ಚಂದ್ರಯಾನ-3 (Chandrayaana-3) ಯಶಸ್ಸಿನ ಖುಷಿಯಲ್ಲಿ ದೇಶ ತೇಲಾಡುತ್ತಿದೆ. ಈ ಸಕ್ಸಸ್​​ ಬಳಿಕ ಭಾರತ ಮತ್ತೊಂದು ಸಾಧನೆ ಮಾಡಲು ಇಸ್ರೋ ಮುಂದಾಗಿದೆ. ಹೌದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ದೇಶದ ಜನತೆಗೆ ಮತ್ತೊಂದು ಸಿಹಿ ಸುದ್ದಿ ನೀಡಲು ಸಜ್ಜಾಗಿದೆ. ಚಂದ್ರಯಾನ ಸಕ್ಸಸ್ ಬೆನ್ನಲ್ಲೇ ಸೂರ್ಯಯಾನಕ್ಕೆ ಇಸ್ರೋ ತಯಾರಾಗಿದೆ. ಭಾಸ್ಕರನ ಅಧ್ಯಯನ ಮಾಡುವ ಉದ್ದೇಶದಿಂದ ಇಸ್ರೋ ಆದಿತ್ಯ ಎಲ್‌-1 (Aditya L1) ನೌಕೆಯನ್ನು ಇಂದು (ಸೆಪ್ಟೆಂಬರ್‌ 2) ರಂದು ಬೆಳಿಗ್ಗೆ 11.50ಕ್ಕೆ ಶ್ರೀಹರಿಕೋಟಾದ ಸತೀಶ್‌ ಧವನ್‌ ಉಡಾವಣಾ ಕೇಂದ್ರದಿಂದ ಉಡಾವಣೆ ಮಾಡಲಿದೆ. ಈ ಮೂಲಕ ಮತ್ತೊಂದು ಇತಿಹಾಸ ಸೃಷ್ಟಿಸಲು ಇಸ್ರೋ ಹೊರಟಿದೆ.

ಇನ್ನು ಈ ಉಡಾವಣೆಯನ್ನು ಸಾರ್ವಜನಿಕರು ಕೂಡ ನೇರವಾಗಿ ವೀಕ್ಷಣೆ ಮಾಡಬಹುದು. ಇಂದು ಬೆಳಿಗ್ಗೆ 11.50ಕ್ಕೆ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಗೊಳ್ಳುವ ಆದಿತ್ಯ ಎಲ್‌ -1 ಅನ್ನು ಲಾಂಚ್ ವೀವ್‌ ಗ್ಯಾಲರಿಯಿಂದ್ ನೇರವಾಗಿ ವಿಕ್ಷಿಸಲು ಇಸ್ರೋ ಸಾರ್ವಜನಿಕರಿಗೆ ಅವಕಾಶ ನೀಡಿದೆ. ಇದಕ್ಕೆ ಇಸ್ರೋ ವೆಬ್ ಲಿಂಕ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು.

ಆದಿತ್ಯ ಎಲ್‌-1 ನೌಕೆ ಭೂಮಿಯಿಂದ 1.5 ಮಿಲಿಯನ್ ಕಿಲೋಮೀಟರ್ ಅಂದ್ರೆ 15 ಲಕ್ಷ ಕಿಲೋ ಮೀಟರ್ ತೆರಳಲಿದೆ. ಈ ಮೂಲಕ ಅತಿಹೆಚ್ಚು ದೂರ ಪ್ರಯಾಣ ಮಾಡಲಿರುವ ಭಾರತದ ಮೊಟ್ಟ ಮೊದಲ ನೌಕೆ ಎಂಬ ಹೆಗ್ಗಳಿಕೆಯೂ ಆದಿತ್ಯ-ಎಲ್ 1 ಪಾತ್ರವಾಗಲಿದೆ. ಈ ಎಲ್‌-1 ಪಾಯಿಂಟ್‌ ಪ್ರದೇಶದಲ್ಲಿ ಭೂಮಿ ಕಕ್ಷೆಗಳ ಗುರುತ್ವಾಕರ್ಷಣೆ ಬಲ ಇರುವುದಿಲ್ಲ. ಭೂಕಕ್ಷೆಯನ್ನು ದಾಟಿದ ಬಳಿಕ ಇದನ್ನು ಎಲ್‌-1ನ ಹೊರಗಿರುವ ದೊಡ್ಡ ಹಾಲೋ ಆರ್ಬಿಟ್‌ಗೆ ನೌಕೆಯನ್ನು ಸೇರಿಸಲಾಗುತ್ತದೆ. ‌ಆದಿತ್ಯ-ಎಲ್‌1 ಯೋಜನೆಯ ಅವಧಿ ಭರ್ತಿ ನಾಲ್ಕು ತಿಂಗಳು ಇರಲಿದೆ. ಅಂದರೇ 120 ರಿಂದ 125 ದಿನಗಳು. ಇದು ಜನೆವರಿ ಮೊದಲ ವಾರದಲ್ಲಿ ನಿರೀಕ್ಷಿತ ಕಕ್ಷೆ ಅಂದರೇ ಎಲ್-1 ಗೆ ಸೇರುವ ಸಾಧ್ಯತೆ ಇದೆ.

ಸೂರ್ಯನ ಮೇಲಿನ ವಾತಾವರಣ ಅಧ್ಯಯನವೇ ಇದರ ಪ್ರಮುಖ ಗುರಿಯಾಗಿದೆ. ಕೊರೊನಾ ಅಂದರೇ ಸೂರ್ಯನ ಮೇಲ್ಮೈ ಭಾಗ ಹಾಗೂ ಕ್ರೋಸ್ಮೋಸ್ಪಿಯರ್ ಅಂದರೇ ಸೂರ್ಯನ ಮದ್ಯಭಾಗ ಮತ್ತು ಪೋಟೋಸ್ಪಿಯರ್ ಸೂರ್ಯನ ಕೇಳಭಾಗ ಪ್ರದೇಶವನ್ನು ಅಧ್ಯಯನ ಮಾಡಲು ಇಸ್ರೋ ಸಜ್ಜಾಗಿದೆ.

ಸೂರ್ಯನ ಕೊರೊನಾ ಭಾಗ ಸಾಕಷ್ಟು ವಿಸ್ಮಯಗಳಿಂದ ಕೂಡಿದ್ದು ಇದರ ಇಂಚಿಂಚು ಮಾಹಿತಿಯನ್ನು ಜಗತ್ತಿಗೆ ತಿಳಿಸಲು ಇಸ್ರೋ ಮುಂದಾಗಿದೆ. ಸೂರ್ಯನ ಕೊರೊನಾ ಬಿಸಿಯಾಗುವ ಬಗ್ಗೆ, ಸೌರ ಮಾರುತ ಹೇಗೆ ಎದ್ದೇಳಲಿದೆ ಎನ್ನುವ ಬಗ್ಗೆ ನೌಕೆ ಅಧ್ಯಯನ ಮಾಡಲಿದೆ. ಹಾಗೆ ಸೂರ್ಯನ ವಾತಾವರಣದ ಅಮೂಲಾಗ್ರ ಅಧ್ಯಯನವನ್ನೂ ಮಾಡಲಿದೆ. ಸೌರ ಮಂಡಲದಲ್ಲಿ ಸೌರ ಗಾಳಿ ಹಂಚಿಕೆಯಾಗುವ ಬಗ್ಗೆ, ತಾಪಮಾನ ಏರುವ ಬಗ್ಗೆ ನೌಕೆ ತಿಳಿದುಕೊಳ್ಳಲಿದೆ. ಒಟ್ಟಾರೆಯಾಗಿ ಇಡೀ ಯೋಜನೆಯ ಮೂಲ ಉದ್ದೇಶ ಸೂರ್ಯನ ಬಗ್ಗೆ ಇನ್ನಷ್ಟು ಆಳವಾಗಿ ತಿಳಿದುಕೊಳ್ಳುವುದಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist