ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಇಂದು ಸಿದ್ದರಾಮಯ್ಯರವರ ದಾಖಲೆಯ ಬಜೆಟ್ ಗೆ ಕ್ಷಣಗಣನೆ ; ನಿರೀಕ್ಷೆಗಳೇನು?

Twitter
Facebook
LinkedIn
WhatsApp
ಇಂದು ಸಿದ್ದರಾಮಯ್ಯರವರ ದಾಖಲೆಯ ಬಜೆಟ್ ಗೆ ಕ್ಷಣಗಣನೆ ; ನಿರೀಕ್ಷೆಗಳೇನು?

ಮುಖ್ಯಮಂತ್ರಿ  ಸಿದ್ದರಾಮಯ್ಯ (Siddaramaiah) ಅವರು ಇಂದು(ಫೆಬ್ರವರಿ 16) ಬೆಳಗ್ಗೆ 10:15ಕ್ಕೆ 2024-25ನೇ ಸಾಲಿನ ಬಜೆಟ್ (Karnataka Budget 2024) ಮಂಡನೆ ಮಾಡಲಿದ್ದಾರೆ. ಬಜೆಟ್ ಮಂಡನಗೂ ಮುನ್ನ ಸಿದ್ದರಾಮಯ್ಯ ಅವರು ವಿಶೇಷ ಸಂಪುಟ ಸಭೆ ನಡೆಸಲಿದ್ದಾರೆ. ಸಿದ್ದರಾಮಯ್ಯ ಮಂಡಿಸುತ್ತಿರುವ 15ನೇ ಬಜೆಟ್ ಇದಾಗಿದ್ದು,. ಕರ್ನಾಟಕದ ಮಟ್ಟಿಗೆ ಇದೊಂದು ಹೊಸ ದಾಖಲೆಯಾಗಿದೆ. ಲೋಕಸಭೆ ಚುನಾವಣೆಗೆ(Loksabha Elections 2024) ಹೊತ್ತಲ್ಲೇ ಬಜೆಟ್ ಮಂಡನೆ ಮಾಡುತ್ತಿರುವುದರಿಂದ ಮಹತ್ವದ ಘೋಷಣೆಗಳು ಹೊರಬೀಳುವ ನಿರೀಕ್ಷೆಗಳಿವೆ

ಈವರೆಗೂ ರಾಜ್ಯದ ಬಜೆಟ್ ಗಾತ್ರ 3.27 ಲಕ್ಷ ಕೋಟಿ ರೂಪಾಯಿ ದಾಟಿರಲಿಲ್ಲ. ಆದ್ರೆ. ಈ ಬಾರಿ ಸುಮಾರು 50 ಸಾವಿರ ಕೋಟಿ ರೂಪಾಯಿ ಹೆಚ್ಚಳವಾಗಲಿದೆ. ಇದರೊಂದಿಗೆ ಈ ಬಾರಿ ಬಜೆಟ್​ ಗಾತ್ರ 3.80 ಲಕ್ಷ ಕೋಟಿ ರೂಪಾಯಿ ತಲುಪುವ ನಿರೀಕ್ಷೆಯಿದೆ. ಪಂಚ ಗ್ಯಾರಂಟಿ ಹೊರೆ ಹಾಗೂ ಬರದ ಬರೆ ಸರ್ಕಾರಕ್ಕೆ ಸವಾಲಾಗಿದೆ.. ಪ್ರಸಕ್ತ ವರ್ಷದಲ್ಲಿ ರಾಜಸ್ವ ಸಂಗ್ರಹ ನಿಗದಿತ ಗುರಿ ತಲುಪದೇ ಇರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. 2024-25 ಸಾಲಿನಲ್ಲಿ ಪಂಚ ಗ್ಯಾರಂಟಿಗಳಿಗಾಗಿ ಸಮಾರು 58,000 ಕೋಟಿ ರೂ. ಅನುದಾನ ಮೀಸಲಿಡುವ ಅನಿವಾರ್ಯತೆ ಇದೆ. ಹೀಗಾಗಿ ಗ್ಯಾರಂಟಿ ವೆಚ್ಚದ ಮಧ್ಯೆ ಅಭಿವೃದ್ಧಿಗೆ ವೇಗ ಕೊಡುವ ಸಮತೋಲಿತ ಬಜೆಟ್ ಮಂಡಿಸಬೇಕಿದೆ. ಆದರೂ ಲೋಕಸಭೆ ಚುನಾವಣೆ ದೃಷ್ಟಿಯಲ್ಲಿಟ್ಟು ರಾಜ್ಯದ ಜನತೆಗೆ ಒಂದಷ್ಟು ಬಂಪರ್ ಕೊಡುವೆ ಕೊಡುವ ನಿರೀಕ್ಷೆ ಹೊಂದಲಾಗಿದೆ.

ಸಿದ್ದರಾಮಯ್ಯ ಬಜೆಟ್​ನ ನಿರೀಕ್ಷೆಗಳು

ಸಿಎಂ ಸಿದ್ದರಾಮಯ್ಯ ಬಜೆಟ್​ನಲ್ಲಿ ಮೇಕೆದಾಟು ಯೋಜನೆಗೆ ಹಣ ಘೋಷಣೆ ಮಾಡೋ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಟನಲ್ ನಿರ್ಮಾಣಕ್ಕೆ ಅನುದಾನ, ಸುವರ್ಣ ಮಹೋತ್ಸವ ಹಸರಿನಲ್ಲಿ ಅಭಿವೃದ್ಧಿಯ ಯೋಜನೆ ಘೋಷಣೆ ನಿರೀಕ್ಷೆ ಇದೆ. ಬ್ರ್ಯಾಂಡ್ ಬೆಂಗಳೂರಿಗೆ ಬಜೆಟ್​ನಲ್ಲಿ ಒತ್ತು ಸಾಧ್ಯತೆ, ನಮ್ಮ ಮೆಟ್ರೋ ಮಾರ್ಗ ವಿಸ್ತರಣೆ ಹೆಚ್ಚಿನ ಅನುದಾನ. ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ವಿಶೇಷ ಹಣ ಮೀಸಲು ಹಾಗೂ 100 ಕೋಟಿ ರೂ. ವೆಚ್ಚದಲ್ಲಿ ದೇವಸ್ಥಾನಗಳ ಜಿರ್ಣೋದ್ಧಾರ ಮಾಡೋದು. ರಾಜ್ಯ ಸರ್ಕಾರಿ ನೌಕಕರಿಗೆ OPS ಭಾಗ್ಯ ಘೋಷಿಸುವಂತ ಸಾಧ್ಯತೆ ಇದೆ. ಮದ್ಯದ ಮೇಲಿನ ಅಬಕಾರಿ ಸುಂಕ ಏರಿಕೆ ಮಾಡೋ ಸಾಧ್ಯತೆ ದಟ್ಟವಾಗಿದೆ. ಜಿಲ್ಲಾ & ತಾಲೂಕು ಕೇಂದ್ರಕ್ಕೆ ಇಂದಿರಾ ಕ್ಯಾಂಟೀನ್ ವಿಸ್ತರಣೆ ಮಾಡ್ಬೋದು ಎನ್ನಲಾಗಿದೆ.

ಹಳೆ ಮೈಸೂರು, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಕರಾವಳಿ ಕರ್ನಾಟಕ, ಮಧ್ಯಕರ್ನಾಟಕ ಹೀಗೆ ಪ್ರಾದೇಶಿಕವಾರು ನೀರಾವರಿ ಸೇರಿ ವಿವಿಧ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡುವ ನಿರೀಕ್ಷೆಯಿದೆ. ಇನ್ನು ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ವರದಿ ಜಾರಿಮಾಡುವ ಸಾಧ್ಯತೆಯಿದೆ.

5 ಗ್ಯಾರಂಟಿಗೆ 58 ಕೋಟಿ ಮೀಸಲಿಡೋ ಸವಾಲು!

ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಯೋಜನೆಗೆ ಬಜೆಟ್​​ನಲ್ಲಿ ಮೊದಲು ಹಣ ಮೀಸಲಿಡುವುದು ಅನಿವಾರ್ಯ ಆಗಿದೆ. 5 ಗ್ಯಾರಂಟಿ ಯೋಜನೆ ಜಾರಿಗೆ 58 ಸಾವಿರ ಕೋಟಿ ಮೀಸಲಿಡಲಾಗುತ್ತೆ.. ಉಚಿತ ಗ್ಯಾರಂಟಿ ಯೋಜನೆಗೆ ಇಷ್ಟು ದೊಡ್ಡ ಪ್ರಮಾಣದ ಹಣ ಮೀಸಲಿಡೋದೇ ದೊಡ್ಡ ಸವಾಲು ಕೂಡ ಇದೆ. ಇಷ್ಟೇ ಅಲ್ಲ, ಬರ ನಿರ್ವಣೆಗೆ ಹೆಚ್ಚಿನ ಅನುದಾನ ಮೀಸಲಿಡುವ ಸಾಧ್ಯತೆ ಇದೆ. ಕೇಂದ್ರದಿಂದ ಇನ್ನೂ ಬರ ಪರಿಹರ ಹಣ ಬಿಡುಗಡೆ ಆಗಿಲ್ಲ ಅಂತಾ ಈಗಾಗಲೇ ರಾಜ್ಯ ಸರ್ಕಾರ ಆರೋಪಿಸಿದೆ. ಮುಂದಿನ ಮುಂಗಾರು ತನಕ ಬರ ನಿರ್ವಹಣೆ ಮಾಡವೇಕಾದ ಸಂದಿಗ್ಧ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರವಿದೆ. ಹೀಗಾಗಿ ಬರ ನಿರ್ವಹಣೆಗಾಗಿ ಹೆಚ್ಚಿನ ಅನುದಾನ ಮೀಸಲಿಡಬೇಕಿದೆ. ಅದರಲ್ಲಿ ಕುಡಿಯುವ ನೀರು ಮತ್ತು ಜಾನುವಾರುಗಳ ಮೇವಿಗಾಗಿ ಜಟ್​​ನಲ್ಲಿ ಹೆಚ್ಚಿನ ಒತ್ತು ನೀಡುವ ಸಾಧ್ಯತೆ ಇದೆ.

ಗ್ಯಾರಂಟಿ ಯೋಜನೆಗೆ ಸಂಪನ್ಮೂಲಗಳ ಕೃಡೀಕರಣಕ್ಕಾಗಿ ಕೆಲವು ವಿಭಾಗದಲ್ಲಿ ತೆರಿಗೆ ಹೆಚ್ಚಳ ಮಾಡುತ್ತಾರೆ ಎನ್ನಲಾಗಿದೆ. ಆದ್ರೆ ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ತೆರಿಗೆ ಹೆಚ್ಚಳ ಮಾಡಿದರೆ ಜನ ಸಿಡಿದೇಳೋ ಭಯ ರಾಜ್ಯ ಸರ್ಕಾರಕ್ಕೆ ಇದೆ. ಹೀಗಾಗಿ ತೆರಿಗೆ ಹೆಚ್ಚಳ ಮಾಡದೆ ಬಜೆಟ್ ಮಂಡಿಸುವ ಸವಾಲು ಸಿಎಂ ಸಿದ್ದರಾಮಯ್ಯ ಮುಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist