ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಿರಿಯ ನಟಿ ಮತ್ತು ರಾಜಕಾರಣಿ ಜಯಪ್ರದಾರನ್ನು ಬಂಧಿಸುವಂತೆ ಕೋರ್ಟ್ ಆದೇಶ.!

Twitter
Facebook
LinkedIn
WhatsApp
ಹಿರಿಯ ನಟಿ ಮತ್ತು ರಾಜಕಾರಣಿ ಜಯಪ್ರದಾರನ್ನು ಬಂಧಿಸುವಂತೆ ಕೋರ್ಟ್ ಆದೇಶ.!

ಬಹುಭಾಷಾ ನಟಿ ಜಯಪ್ರದಾಗೆ ಚೆನ್ನೈ ಕೋರ್ಟ್ ಕೆಲ ತಿಂಗಳ ಹಿಂದಷ್ಟೇ 6 ತಿಂಗಳ ಜೈಲು ಶಿಕ್ಷೆ ವಿಧಿಸಿತ್ತು. ಇದೀಗ ಮತ್ತೆ ನಟಿಗೆ ಸಂಕಷ್ಟ ಎದುರಾಗಿದೆ. ಪದೇ ಪದೇ ವಾರೆಂಟ್ ನೀಡಿದರೂ ಜಯಪ್ರದಾ ಅವರು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ, ಅದಕ್ಕಾಗಿಯೇ ನ್ಯಾಯಾಲಯ ಈಗ ಜಯಪ್ರದಾ ತಲೆಮರೆಸಿಕೊಂಡಿದ್ದಾರೆ ಎಂದು ಘೋಷಿಸಿದೆ.

ನಿಗದಿತ ದಿನಾಂಕದಂದು ಜಯಪ್ರದಾ ನ್ಯಾಯಾಲಯಕ್ಕೆ ಬಂದಿರಲಿಲ್ಲ. ಆಕೆಯ ವಿರುದ್ಧ ಏಳನೇ ಬಾರಿಗೆ ಜಾಮೀನು ರಹಿತ ವಾರೆಂಟ್ ಹೊರಡಿಸಿದ ನಂತರವೂ ಅವರು  ವಿಚಾರಣೆಗೆ ನ್ಯಾಯಾಲಯಕ್ಕೆ ಬಂದಿಲ್ಲ. ಹಾಗಾಗಿಯೇ ವಿಶೇಷ ತಂಡ ರಚಿಸಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಪೊಲೀಸರಿಗೆ ಆದೇಶಿಸಲಾಗಿದೆ.

ಎರಡೂ ಪ್ರಕರಣಗಳು ಲೋಕಸಭೆ ಚುನಾವಣೆ 2019 ರಲ್ಲಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿವೆ. ಈ ಪ್ರಕರಣಗಳು ನ್ಯಾಯಾಲಯದಲ್ಲಿ ಬಾಕಿ ಉಳಿದಿದೆ. ನೋಟಿಸ್ ನೀಡಿದ ಬಳಿಕ ನಟಿ ಜಯಪ್ರದಾ ನ್ಯಾಯಾಲಯಕ್ಕೆ ಹಾಜರಾಗಿಲ್ಲ.

ಈ ಪ್ರಕರಣ 2019ರ ಲೋಕಸಭೆ ಚುನಾವಣೆ ವೇಳೆ ಜಯಪ್ರದಾ ಅವರು ಬಿಜೆಪಿ ಟಿಕೆಟ್ನಲ್ಲಿ ರಾಂಪುರದಿಂದ ಚುನಾವಣೆಗೆ ಸ್ಪರ್ಧಿಸಿದ್ದರು. ಈ ವೇಳೆ ನೀತಿ ಸಂಹಿತೆ ಜಾರಿಯಲ್ಲಿದ್ದಾಗಲೂ ನೂರಪುರ ಗ್ರಾಮದಲ್ಲಿ ರಸ್ತೆ ಉದ್ಘಾಟನೆ ಮಾಡಿದ್ದಾರೆ ಎಂಬ ಆರೋಪವಿದೆ.

ಇದಲ್ಲದೇ ಮತ್ತೊಂದು ಘಟನೆ ಕೇಮರಿ ಪೊಲೀಸ್ ಠಾಣೆಯಿಂದ ನಡೆದಿದೆ. ಪಿಪಾಲಿಯಾ ಮಿಶ್ರಾ ಗ್ರಾಮದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಜಯಪ್ರದಾ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ನಟಿ ವಿರುದ್ಧ 7 ಬಾರಿ  ಜಾಮೀನು ರಹಿತ ವಾರಂಟ್​ಗಳನ್ನು ಹೊರಡಿಸಲಾಗಿದೆ. ಆದರೆ ಇಷ್ಟೆಲ್ಲಾ ಆದರೂ ಆಕೆ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಇದೀಗ ನ್ಯಾಯಾಲಯದ ಆದೇಶ ಉಲ್ಲಂಘಿಸಿದ ನಟಿಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.

ನ್ಯಾಯಾಲಯದ ಕಟ್ಟುನಿಟ್ಟಿನ ಆದೇಶದ ನಂತರ ರಾಂಪುರ ಪೊಲೀಸರು ನಟಿ ವಿರುದ್ಧ ಕ್ರಮ ಕೈಗೊಳ್ಳಲು ಸಿದ್ಧರಾಗಿದ್ದಾರೆ. ಜಯಪ್ರದಾ ಪತ್ತೆಗೆ ರಾಂಪುರ ಎಸ್ಪಿ ತಂಡ ರಚಿಸಿದ್ದಾರೆ. ಇದೀಗ ಪೊಲೀಸರು ಮುಂಬೈ ಮತ್ತು ದೆಹಲಿಯಲ್ಲಿ ನಟಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ